Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ: ಡಿಕೆಶಿ

Bengaluru City

ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ: ಡಿಕೆಶಿ

Public TV
Last updated: December 25, 2025 6:51 pm
Public TV
Share
3 Min Read
DK Shivakumar 9
SHARE

ಬೆಂಗಳೂರು: ನಾನು ಕೇವಲ ವೇದಿಕೆಯಲ್ಲಿ ಕುಳಿತು ಭಾಷಣ ಮಾಡಿಕೊಂಡು ಹೋಗಿಲ್ಲ. ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ನಂತರ ಹಾಗೂ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು ದೆಹಲಿಯಲ್ಲಿ ಹೇಳಿಕೆ ನೀಡಿದ್ದರ ಬಗ್ಗೆ ಕೇಳಿದಾಗ, ನಾನು ಲೈಫ್ ಟೈಮ್ ಕಾರ್ಯಕರ್ತ. ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ, ಕಸ ಗುಡಿಸಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಏನೇನು ಬೇಕೋ ಎಲ್ಲವನ್ನೂ ಮಾಡಿದ್ದೇನೆ ಎಂದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ಕಿಕ್ಕಿರಿದ ಜನಸಾಗರ – ಒಂದೇ ದಿನ ಹರಿದುಬಂದ ಲಕ್ಷಾಂತರ ಭಕ್ತಗಣ

ದೆಹಲಿಯಲ್ಲಿ ನಡೆಯುವ ಸಿಡಬ್ಲ್ಯೂಸಿ ಸಭೆಗೆ ತಾವು ತೆರಳುವಿರಾ ಎಂದು ಕೇಳಿದಾಗ, ನನ್ನನ್ನು ಕರೆದರೆ ಖಂಡಿತಾ ಹೋಗುತ್ತೇನೆ. ಆದರೆ ಇದುವರೆಗೂ ಕರೆದಿಲ್ಲ ಎಂದರು. ಮುಖ್ಯಮಂತ್ರಿಯವರನ್ನು ಸಭೆಗೆ ಆಹ್ವಾನಿಸಲಾಗಿದೆಯಲ್ಲ ಎಂದು ಹೇಳಿದಾಗ, ಇರಬಹುದು, ಮೂವರು ಸಿಎಂಗೆ ಆಹ್ವಾನ ನೀಡಿದ್ದಾರೆ ಎಂದು ನನಗೂ ಗೊತ್ತಿದೆ. ಆದರೆ ಡೆಪ್ಯುಟಿ ಸಿಎಂಗೆ ಕರೆದಿಲ್ಲ. ಪಿಸಿಸಿ ಅಧ್ಯಕ್ಷರಿಗೆ ಆಹ್ವಾನವಿಲ್ಲವೇ ಎಂದು ಕೇಳಿದಾಗ, ಸಮಿತಿಯ ವಿಸ್ತರಿತ ಸಭೆಗೆ ಕರೆಯುತ್ತಾರೆ. ಒಂದೊಮ್ಮೆ ಸಭೆಗೆ ಕರೆದರೆ ಹೋಗುವಿರಾ ಎಂದು ಕೇಳಿದಾಗ, ಕರೆದರೆ ಹೋಗಬೇಕಾಗುತ್ತದೆ. ಕರೆದಾಗ ಹೋಗದೇ ಇರಲು ಆಗುತ್ತದೆಯೇ ಎಂದು ಹೇಳಿದರು.

ಖರ್ಗೆ ಅವರ ಜೊತೆ ನಾಯಕತ್ವ ವಿಚಾರವಾಗಿ ಚರ್ಚೆ ನಡೆಸಿದ್ದೀರಾ ಎಂದು ಕೇಳಿದಾಗ, ಯಾವ ವಿಚಾರವಾಗಿಯೂ ಚರ್ಚೆ ನಡೆಸಿಲ್ಲ. ನಾನು ಚರ್ಚೆ ಮಾಡುವುದೂ ಇಲ್ಲ. ಮಾಡುವ ಅವಶ್ಯಕತೆಯೂ ಇಲ್ಲ. ನಾನು ಮತ್ತು ಸಿದ್ದರಾಮಯ್ಯ ಅವರು ಈಗಾಗಲೇ ಇದರ ಬಗ್ಗೆ ಹೇಳಿದ್ದೇವೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ಅವರು ಏನು ಹೇಳುತ್ತಾರೋ ಆ ರೀತಿ ಕೇಳಿಕೊಂಡು ಹೋಗುತ್ತೇವೆ ಎಂದರು.

Met AICC President Shri Mallikarjun Kharge avaru at his residence in Bengaluru today and exchanged warm greetings. pic.twitter.com/S8iGaeCokX

— DK Shivakumar (@DKShivakumar) December 25, 2025

ಸ್ಥಳೀಯ ಮಟ್ಟದಲ್ಲಿ ಗೊಂದಲ ಬಗೆಹರಿಸಿಕೊಳ್ಳಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ಬಗ್ಗೆ ಕೇಳಿದಾಗ, ಹಿರಿಯರು ಮಾರ್ಗದರ್ಶನ ನೀಡುತ್ತಾರೆ. ಶುಕ್ರವಾರದಂದು (ಡಿ.26) ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಿದೆ. ಈ ಸಭೆಯಲ್ಲಿ ಮನರೇಗಾ ಯೋಜನೆಯ ಹೆಸರು ಬದಲಾವಣೆ, ಅನುದಾನದಲ್ಲಿ ರಾಜ್ಯದ ಪಾಲನ್ನು ಶೇ.40ಕ್ಕೆ ಹೆಚ್ಚಿಸಿರುವುದು ಸೇರಿದಂತೆ ರೈತರಿಗೆ ಮಾರಕವಾದಂತಹ ಬದಲಾವಣೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ವಿಚಾರವಾಗಿ ಒಂದು ರಾಜ್ಯದ ಅಧ್ಯಕ್ಷನಾಗಿ ನನ್ನ ಅಭಿಪ್ರಾಯಗಳನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿಳಿಸಿದ್ದೇನೆ. ಅವರ ಜೊತೆ ಯಾವ ರಾಜಕೀಯ ಮಾತುಕತೆಯೂ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಮನರೇಗಾ ಯೋಜನೆಯಿಂದ ಪಂಚಾಯತಿಗಳಿಗೆ ಅನುಕೂಲವಾಗುತ್ತಿತ್ತು. ಪಂಚಾಯತಿ ಸದಸ್ಯರುಗಳಿಗೆ ಶಕ್ತಿಯಿತ್ತು. ಪ್ರತಿ ಕೂಲಿ ಕಾರ್ಮಿಕರ ಖಾತೆಗೆ ಹಣ ಸಂದಾಯವಾಗುತ್ತಿತ್ತು. ಪ್ರತಿಯೊಬ್ಬರು ಚರ್ಚೆ ನಡೆಸಿ ತಮ್ಮ ಊರಿಗೆ ಯಾವ ಕೆಲಸಗಳನ್ನು ತೆಗೆದುಕೊಳ್ಳಬೇಕು ಎನ್ನುವ ಅವಕಾಶವಿತ್ತು. ಆದರೆ ಈಗ ಕೇಂದ್ರ ಸರ್ಕಾರವೇ ಯಾವ ಜಿಲ್ಲೆಯಲ್ಲಿ ಯಾವ ಕೆಲಸ ತೆಗೆದುಕೊಳ್ಳಬೇಕು ಎಂದು ತೀರ್ಮಾನ ಮಾಡುತ್ತದಂತೆ. ರೈತರು ತಮ್ಮ ಸ್ವಂತ ಜಮೀನಿನಲ್ಲಿ ಕೆಲಸ ಮಾಡಿಕೊಳ್ಳಲು, ಇಂಗುಗುಂಡಿ ತೋಡಿಕೊಳ್ಳಲು, ಕೊಟ್ಟಿಗೆ ಕಟ್ಟಿಕೊಳ್ಳಲು – ಹೀಗೆ ಅನೇಕ ಕೆಲಸಗಳನ್ನು ಮಾಡಿಕೊಳ್ಳಲು ಅನುಕೂಲವಾಗುತ್ತಿತ್ತು. ಇಂತಹ ಅದ್ಭುತವಾದ ಕಾರ್ಯಕ್ರಮವನ್ನು ಸೋನಿಯಾಗಾಂಧಿ ಅವರ ಮಾರ್ಗದರ್ಶನದಲ್ಲಿ ಮನಮೋಹನ್ ಸಿಂಗ್ ಅವರು ನೀಡಿದ್ದರು. ಮುಂದಿನ 2026ರ ಫೆಬ್ರವರಿ ವೇಳೆಗೆ ಈ ಯೋಜನೆಗೆ 20 ವರ್ಷ ತುಂಬಲಿದೆ. ಆದ ಕಾರಣ ದೊಡ್ಡ ಹೋರಾಟವನ್ನು ಹಮ್ಮಿಕೊಳ್ಳಲು ಆಲೋಚಿಸಲಾಗಿದೆ ಎಂದು ಹೇಳಿದರು.

ಚಿತ್ರದುರ್ಗದ ಹಿರಿಯೂರಿನ ಬಳಿ ರಸ್ತೆ ಅಪಘಾತದಲ್ಲಿ ಬಸ್ ಬೆಂಕಿಗಾಹುತಿಯಾದ ಬಗ್ಗೆ ಕೇಳಿದಾಗ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ನನಗೆ ತುಂಬಾ ದುಃಖವಾಗಿದ್ದು, ಏನು ಹೇಳಬೇಕು ಎಂದು ತೋಚದಂತಾಗಿದ್ದೇನೆ. ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸುತ್ತೇನೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ. ಘಟನೆಗೆ ಕಾರಣ ಏನು ಎಂದು ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪರಿಹಾರ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.ಇದನ್ನೂ ಓದಿ:ಬೆಂಗಳೂರಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

TAGGED:bengalurucongressDK ShivakumarKPCCಕಾಂಗ್ರೆಸ್ಕೇಂದ್ರ ಸರ್ಕಾರಡಿಕೆ ಶಿವಕುಮಾರ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

shiva rajkumar
ಫ್ಯಾನ್ಸ್ ವಾರ್ ಬಗ್ಗೆ ನಟ ಶಿವರಾಜ್‌ಕುಮಾರ್ ಖಡಕ್ ರಿಯಾಕ್ಷನ್
Cinema Latest Sandalwood Top Stories
Ravi Basrur
ಕಿಶೋರ್ ಮೇಗಳಮನೆ ನಿರ್ದೇಶನದ ಚಿತ್ರಕ್ಕೆ ಬಸ್ರೂರು ಸಂಗೀತ
Cinema Latest Sandalwood Top Stories
45 movie 3
`45′ ತ್ರಿಮೂರ್ತಿಗಳ ಸಂಗಮ.. ಕಣ್ತುಂಬಿಕೊಂಡ ಪ್ರೇಕ್ಷಕರ ಜೈಕಾರ..!
Cinema Latest Sandalwood Top Stories
Bigg Boss Kannada 12 Gilli Nata Parents
ಗಿಲ್ಲಿಗೆ ಕೋಲಲ್ಲಿ ಹಿಗ್ಗಾಮುಗ್ಗಾ ಬಾರಿಸಿದ ತಂದೆ
Latest Top Stories TV Shows

You Might Also Like

Hindu man Bangladesh
Latest

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಹತ್ಯೆ

Public TV
By Public TV
7 minutes ago
Bagalgunte Newly wed Suicide
Bengaluru City

Bagalgunte | ಮದುವೆಯಾಗಿ ಒಂದೇ ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

Public TV
By Public TV
17 minutes ago
Basanagouda Patil Yatnal 1
Districts

ಕರ್ನಾಟಕದಲ್ಲೂ ಎಸ್‌ಐಆರ್ ಜಾರಿ ಆಗಬೇಕು – ಯತ್ನಾಳ್

Public TV
By Public TV
24 minutes ago
Tiger 1
Districts

ಮೈಸೂರು | ಅನಾರೋಗ್ಯದಿಂದ ಬಳಲುತ್ತಿದ್ದ ಐದು ವರ್ಷದ ತಾಯಮ್ಮ ಹುಲಿ ಸಾವು

Public TV
By Public TV
1 hour ago
BY Vijayendra
Bengaluru City

ಕಾಂಗ್ರೆಸ್ ವಿರುದ್ಧ ಆಡಳಿತ ವಿರೋಧಿ ಅಲೆ; ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ವಿಜಯೇಂದ್ರ

Public TV
By Public TV
1 hour ago
Raichuru Mantralaya
Districts

ಮಂತ್ರಾಲಯದಲ್ಲಿ ಕಿಕ್ಕಿರಿದ ಜನಸಾಗರ – ಒಂದೇ ದಿನ ಹರಿದುಬಂದ ಲಕ್ಷಾಂತರ ಭಕ್ತಗಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?