ಮಂಡ್ಯ: ಜನಪದ ಕಲಾವಿದರಿಗೆ ಸಂಭಾವನೆ ಕೊಡುವ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಯಡವಟ್ಟು ಮಾಡಿಕೊಂಡಿದ್ದು, ಟೀಕೆಗೆ ಗುರಿಯಾಗಿದ್ದಾರೆ.
ಪ್ರಜಾಧ್ವನಿ ಯಾತ್ರೆಯ (Prajadhwani Yatra) ಭಾಗವಾಗಿ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ನಡೆದ ರೋಡ್‌ಶೋ ವೇಳೆ ಬಸ್ ಮೇಲೆ ನಿಂತುಕೊಂಡೇ ಕಲಾವಿದರಿಗೆ ಹಣ ಎರಚಿದ್ದು, ಇದರಿಂದ ಕಲಾವಿದರು ಅಸಮಾಧಾನಗೊಂಡಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಭದ್ರಕೋಟೆ ಒಡೆಯಲು ಸುಮಲತಾ ರಣತಂತ್ರ
Advertisement
Advertisement
ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ನಡೆದ ರೋಡ್ ಶೋನಲ್ಲಿ ಜನಪದ ಕಲಾತಂಡಗಳು ಭಾಗವಹಿಸಿದ್ದವು. ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜನಪದ ಕಲಾವಿದರಿಗೆ ಬೇವಿನಹಳ್ಳಿ ಗ್ರಾಮದಲ್ಲಿ ಹಣ ಕೊಡುವಾಗ ಡಿ.ಕೆ ಶಿವಕುಮಾರ್ ಬಸ್ಸಿನ ಮೇಲಿನಿಂದಲೇ 500 ರೂ. ಮುಖಬೆಲೆಯ ನೋಟುಗಳನ್ನು ಎರಚಿದ್ದಾರೆ. ಇದನ್ನೂ ಓದಿ: ಡಿಕೆಶಿ ಚುಂಚನಗಿರಿಯ ಅಮಾವಾಸ್ಯೆ ಪೂಜೆ ಹಿಂದೆ ಇದೆಯಾ ಸಿಎಂ ಕನಸು?
Advertisement
ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕೆಪಿಸಿಸಿ ಅಧ್ಯಕ್ಷರ ನಡೆಗೆ ಕಲಾವಿದರು ಹಾಗೂ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.