ಮಡಿಕೇರಿ: ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ (DK Shivakumar) ಅವರು ಕೊಡಗು (Kodagu) ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಆಗಸ್ಟ್ 16ಕ್ಕೆ ಜಿಲ್ಲೆಗೆ ಆಗಮಿಸಲಿರುವ ಡಿಕೆ ಶಿವಕುಮಾರ್ ಅವರು ಭಾಗಮಂಡಲ (Bhagamandala) ಮತ್ತು ತಲಕಾವೇರಿಯಲ್ಲಿ (Talakaveri) ವಿಶೇಷ ಪೂಜೆ ಸಲ್ಲಿಸುವ ಮೂಲಕ ತಮ್ಮ ಪ್ರವಾಸವನ್ನು ಆರಂಭಿಸಲಿದ್ದಾರೆ. ಆಗಸ್ಟ್ 16ರಂದು ಬೆಳಗ್ಗೆ 11 ಗಂಟೆಗೆ ಭಾಗಮಂಡಲ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬಳಿಕ ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ತಲಕಾವೇರಿಗೆ ತೆರಳಿ ಕಾವೇರಿ ತಾಯಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಬಳಿಕ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಗುರುದ್ವಾರದಲ್ಲೇ ಅಕಾಲಿ ದಳ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ದಾಳಿ
ಮುಖ್ಯಮಂತ್ರಿಯಾದ ಬಳಿಕ ಡಿ.ಕೆ ಶಿವಕುಮಾರ್ ಅವರು ಕೊಡಗು ಜಿಲ್ಲೆಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಕುರಿತು ಕಾರ್ಯಕ್ರಮದ ವಿವರವನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಹಂಚಿಕೊಂಡಿದ್ದಾರೆ.
ಕಳೆದ ವರ್ಷದ ಮಾರ್ಚ್ 21ರಂದು ಉಪಮುಖ್ಯಮಂತ್ರಿಯಾಗಿದ್ದ ವೇಳೆ ಡಿ.ಕೆ. ಶಿವಕುಮಾರ್ ಅವರು ತಲಕಾವೇರಿಗೆ ಭೇಟಿ ನೀಡಿ, ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಅಲ್ಲಿಂದ ಪವಿತ್ರ ಕಾವೇರಿ ತೀರ್ಥವನ್ನು ಬೆಂಗಳೂರಿಗೆ ಕೊಂಡೊಯ್ದು ಕಾವೇರಿ ಆರತಿಯಲ್ಲಿ ಬಳಸಲಾಗಿತ್ತು. ಇದೀಗ ಮುಖ್ಯಮಂತ್ರಿಯಾದ ಬಳಿಕ ಮತ್ತೊಮ್ಮೆ ಕಾವೇರಿ ನಾಡಿಗೆ ಆಗಮಿಸುತ್ತಿರುವುದು ಜಿಲ್ಲೆಯ ಜನರಲ್ಲಿ ವಿಶೇಷ ಕುತೂಹಲ ಮೂಡಿಸಿದೆ.ಇದನ್ನೂ ಓದಿ: ಮುಖ್ಯಮಂತ್ರಿಗಳ ನೂತನ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ

