ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸಚಿವ ಡಿಕೆ ಶಿವಕುಮಾರ್ ಹಾಗೂ ಜಾರಕಿಹೊಳಿ ಬ್ರದರ್ಸ್ ನಡುವಿನ ಗುದ್ದಾಟ ಜೋರಾಗಿದ್ದು, ತಮ್ಮ ವಿರುದ್ಧ ಮಿತ್ಯಾರೋಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಜಲಸಂಪ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.
ರಾಜ್ಯದ ರಾಜಕಾರಣದಲ್ಲಿದ್ದ ರಮೇಶ್ ಜಾರಕಿಹೊಳಿರನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದು ನಾನು, ಅಲ್ಲದೇ ಸೋನಿಯಾ ಗಾಂಧಿ ಅವರನ್ನು ಪರಿಚಯ ಮಾಡಿಸಿ ರಾಜ್ಯದಲ್ಲಿ ಸಚಿವ ಸ್ಥಾನ ಸಿಗುಂತೆ ಮಾಡಿದೆ. ಆದರೆ ನನ್ನ ವಿರುದ್ಧವೇ ರಮೇಶ್ ಜಾರಕಿಹೊಳಿ ಅವರು ತಿರುಗಿಬಿದ್ದಿದ್ದಾರೆ. ಈ ವೇಳೆ ಸತೀಶ್ ಜಾರಕಿಹೊಳಿರನ್ನು ಕ್ಷಮಿಸಬಲ್ಲೆ ಆದರೆ ರಮೇಶ್‍ರನ್ನು ಕ್ಷಮಿಸಲ್ಲ ಎಂದು ಡಿಕೆ ಶಿವಕುಮಾರ್ ತಮ್ಮ ಆಪ್ತವಲಯದಲ್ಲಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.
Advertisement
Advertisement
ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಲು ಹೆಚ್ಚು ಶ್ರಮವಹಿಸಿದೆ. ಸಹೋದರ ಸತೀಶ್ ಜಾರಕಿಹೊಳಿ ವಿರುದ್ಧ ಅವರನ್ನು ಬಲವಾಗಿ ಬೆಳೆಸಿದೆ. ಅಲ್ಲದೇ ಅಹ್ಮದ್ ಪಟೇಲ್, ಗುಲಾಂ ನಬಿ ಆಜಾದ್, ದಿಗ್ವಿಜಯ್ ಸಿಂಗ್ ಅವರಿಗೂ ಪರಿಚಯಿಸಿದೆ. ಎಐಸಿಸಿ ಅಧಿನಾಯಕಿಯಾಗಿದ್ದ ಸೋನಿಯಾ ಗಾಂಧಿಗೂ ಒಪ್ಪಿಸಿ ಸಚಿವ ಸ್ಥಾನ ಸಿಗುವಂತೆ ಮಾಡಿದೆ. ಆದರೆ ಸದ್ಯ ರಮೇಶ್ ಜಾರಕಿಹೊಳಿ ನನ್ನ ವಿರುದ್ಧವೇ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ ಎನ್ನುವ ವಿಚಾರ ತಿಳಿದು ಬಂದಿದೆ.
Advertisement
ಬೆಳಗಾವಿ ಜಿಲ್ಲಾ ರಾಜಕೀಯ ಕುರಿತಂತೆ ಉಂಟಾಗಿರುವ ಅಸಮಾಧಾನದಲ್ಲಿ ಕಾಂಗ್ರೆಸ್ ಪಕ್ಷದ ರಮೇಶ್ ಜಾರಕಿಹೊಳಿ ಅವರು ಬಹಿರಂಗವಾಗಿಯೇ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಅಲ್ಲದೇ ಬೆಳಗಾವಿ ಜಿಲ್ಲಾ ರಾಜಕೀಯದಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ. ಅಲ್ಲದೇ ತಮ್ಮ ಸಮಸ್ಯೆಗೆ ತಾವೇ ಪರಿಹಾರ ಕಂಡುಕೊಳ್ಳುತ್ತೇವೆ. ಇಲ್ಲಿ ಯಾರ ಮಧ್ಯಪ್ರವೇಶದ ಬೇಡ ಎಂದು ತಿಳಿಸಿದ್ದರು. ಅಲ್ಲದೇ ಸಚಿವ ಡಿಕೆ ಶಿವಕುಮಾರ್ ಬೆಳಗಾವಿ ಜಿಲ್ಲಾ ರಾಜಕೀಯಕ್ಕೆ ಪ್ರವೇಶ ಮಾಡಿದರೆ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದ್ದರು. ಇದನ್ನು ಓದಿ: ಲಕ್ಷ್ಮೀ ಹೆಬ್ಬಾಳ್ಕರ್ ನ ಹದ್ದು ಬಸ್ತುನಲ್ಲಿ ಇಡದಿದ್ದರೇ, ಉಗ್ರ ಕ್ರಮ ಕೈಗೊಳ್ತೀವಿ: ರಮೇಶ್ ಜಾರಕಿಹೊಳಿ
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv