ಹಾಸನ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರು ಉಪ ಚುನಾವಣೆಯ ಬ್ಯುಸಿ ನಡುವೆಯೂ ಶುಕ್ರವಾರ ರಾತ್ರಿ ಕುಟುಂಬ ಸಮೇತರಾಗಿ ಆಗಮಿಸಿ ಹಾಸನಾಂಬೆ ದೇವಿ (Hasanambe Devi) ದರ್ಶನ ಪಡೆದರು.
ದೇವಿ ದರ್ಶನದ ಬಳಿಕ ಮಾತನಾಡಿದ ಅವರು, ಶುಭ ಶುಕ್ರವಾರ ತಾಯಿ ಹಾಸನಾಂಬೆ ದರ್ಶನಕ್ಕೆ ನಾನು ನನ್ನ ಕುಟುಂಬ ಸಮೇತ ಆಗಮಿಸಿದ್ದೇನೆ. ಕಣ್ತುಂಬ ದೇವಿಯ ದರ್ಶನವಾಯಿತು ಎಂದರು. ಈ ಬಾರಿಗೆ ಒಳ್ಳೆಯ ಮಳೆ ಬಂದು ಶಾಂತಿ, ನೆಮ್ಮದಿಯನ್ನು ತಾಯಿ ಕರುಣಿಸಿದ್ದಾಳೆ. ಮೈಸೂರು ದಸರಾವನ್ನೂ ಈ ಬಾರಿ ಬಹಳ ವಿಜೃಂಭಣೆಯಿಂದ ಮಾಡಿದ್ದೇವೆ ಎಂದರು. ಅಂತೆಯೇ ಹಾಸನದಲ್ಲೂ ಉತ್ತಮವಾಗಿ ಹಾಸನಾಂಬೆ ದೇವಿ ಉತ್ಸವ ಹಿನ್ನೆಲೆಯಲ್ಲಿ ಆಕರ್ಷಕ ರೀತಿಯಲ್ಲಿ ಅಲಂಕಾರ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ನಿಖಿಲ್ ಸ್ಪರ್ಧೆ ಮಾಡದೆ ಇದ್ದಿದ್ದರೆ ಕುಮಾರಸ್ವಾಮಿ ಮಗ ಹೆದರಿ ಓಡಿ ಹೋದ ಅಂತಿದ್ದರು: ಹೆಚ್.ಡಿ.ರೇವಣ್ಣ
ತಾಯಿ ರಾಜ್ಯದ ಜನತೆಗೆ ನೆಮ್ಮದಿ, ಸುಖ, ಶಾಂತಿ ಕೊಡಲಿ ಎಂದು ಸರ್ಕಾರದಿಂದ ಪ್ರಾರ್ಥನೆ ಮಾಡಿದ್ದೇನೆ. ಹಿಂದೆಯೂ ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದೆ. ಹಾಗೆಯೇ ಇವತ್ತೂ ಕೂಡ ಬಂದಿದ್ದೇನೆ. ರಾಜ್ಯದ ಜನತೆಗೆ ಒಳ್ಳೆಯದಾಗಲಿ, ಐಶ್ವರ್ಯ, ವ್ಯವಸಾಯ-ವ್ಯಾಪಾರದಲ್ಲಿ ಸಮೃದ್ಧಿ ಕೊಡಲಿ ಎಂದು ಬೇಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: 15 ದಿನ ಬಿಟ್ಟು ಶೋಭಾ ಕರಂದ್ಲಾಜೆ ಭ್ರಷ್ಟಾಚಾರ ದಾಖಲೆ ರಿಲೀಸ್ ಮಾಡ್ತೀನಿ – ಬೈರತಿ ಸುರೇಶ್ ಬಾಂಬ್
ಇದಕ್ಕೂ ಮುನ್ನ ಡಿಕೆಶಿ ಹಾಗೂ ಅವರ ಪತ್ನಿ ಉಷಾ ಮೊದಲಾದವರನ್ನು ಸಂಸದ ಶ್ರೇಯಸ್ ಪಟೇಲ್, ಅರಸೀಕೆರೆ ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಎಸ್ಪಿ ಮಹಮದ್ ಸುಜೀತಾ ಮೊದಲಾದವರು ಛತ್ರಿ-ಚಾಮರ, ಕೊಂಬು-ಕಹಳೆ, ಮಂಗಳವಾದ್ಯ ಹಾಗೂ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಂಡರು. ಮಾಜಿ ಎಂಎಲ್‌ಸಿ ಎಂ.ಎ ಗೋಪಾಲಸ್ವಾಮಿ ಸೇರಿದಂತೆ ಕಾಂಗ್ರೆಸ್‌ನ ಹಲವು ಮುಖಂಡರು ಹಾಜರಿದ್ದರು. ಇದನ್ನೂ ಓದಿ: ಖಲಿಸ್ತಾನಿಗಳಿಗೆ ಟ್ರೂಡೋ ಸರ್ಕಾರದ್ದೇ ಬೆಂಬಲ – ಭಾರತೀಯ ಹೈಕಮೀಷನರ್ ಸಂಜಯ್ ವರ್ಮಾ