– ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ ಡಿಸಿಎಂ
ರಾಮನಗರ: ಬಿಡದಿ ಹೋಬಳಿಯ ಭದ್ರಾಪುರ (Bhadrapura) ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ಹಿನ್ನೆಲೆ ಭದ್ರಾಪುರ ಗ್ರಾಮಕ್ಕೆ ಇಂದು ಡಿಸಿಎಂ ಡಿಕೆಶಿ (DK Shivakumar) ಭೇಟಿ ನೀಡಿ ಮೃತ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಬಳಿಕ ಜಿಲ್ಲಾಡಳಿತ ಪರವಾಗಿ 4.12 ಲಕ್ಷ ರೂ. ಹಾಗೂ ಗ್ರಾ.ಪಂ ವತಿಯಿಂದ 50,000 ರೂ. ಪರಿಹಾರ ಚೆಕ್ ವಿತರಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಅನುಮಾನಾಸ್ಪದ ಸಾವಿನ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಯಾರ ಒತ್ತಡಕ್ಕೂ ಒಳಗಾಗದೆ ನ್ಯಾಯಪರ, ನಿಷ್ಠುರವಾಗಿ ತನಿಖೆ ನಡೆಯಲಿದೆ. ಯಾರ ಮೇಲಾದರೂ ಅನುಮಾನವಿದೆಯೇ ಎಂದು ಬಾಲಕಿಯ ಕುಟುಂಬಸ್ಥರ ಬಳಿ ಕೇಳಿದೆ. ಅವರು ಇಲ್ಲ ಎಂದು ಹೇಳುತ್ತಿದ್ದಾರೆ. ತನಿಖೆ ಮಾಡುವುದು ಪೊಲೀಸ್ ಇಲಾಖೆ ಕರ್ತವ್ಯ ಎಂದರು. ಇದನ್ನೂ ಓದಿ: ಡ್ರೋನ್‌ಗಳನ್ನು ಧ್ವಂಸ ಮಾಡೋ ಭಾರ್ಗವಾಸ್ತ್ರ ಪ್ರಯೋಗ ಯಶಸ್ವಿ!
ಎಲ್ಲಾ ಆಯಾಮದಲ್ಲಿಯೂ ಪೊಲೀಸರು ತನಿಖೆ ಮಾಡಲಿದ್ದಾರೆ. ದ್ವೇಷದಿಂದ ನಡೆದಿದೆಯೇ? ಅತ್ಯಾಚಾರವಾಗಿದೆಯೇ? ಏನಾದರೂ ಬೇರೆ ಕಾರಣ ಇದೆಯೇ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ನ್ಯಾಯ ಒದಗಿಸುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು. ಇದನ್ನೂ ಓದಿ: ಜಪಾನ್ ಕಾನ್ಸುಲ್ ಜನರಲ್ ಜೊತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚರ್ಚೆ