ಆದಷ್ಟು ಬೇಗ ಡಿಕೆಶಿ ಸಿಎಂ ಆಗಲಿದ್ದಾರೆ- ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಸ್ಫೋಟಕ ಹೇಳಿಕೆ

Public TV
2 Min Read
karivrushabha yogeshwara swamiji

ಗದಗ: ಆದಷ್ಟು ಬೇಗ ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಮುಖ್ಯಮಂತ್ರಿ ಆಗಲಿದ್ದಾರೆ. ಅವರನ್ನು ಸಿಎಂ ಮಾಡಿ ಈ ಮುಕ್ತಿಮಂದಿರ ಜಾಗಕ್ಕೆ ಕರೆದುಕೊಂಡು ಬಂದು ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿದರು ಎಂದು ನಾಡಿಗೆ ತೋರಿಸೋಣ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮಿಜೀ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಜಿಲ್ಲೆಯ ಲಕ್ಷ್ಮೇಶ್ವರದ ಮುಕ್ತಿ ಮಂದಿರದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದು, ಮುಡಾ ಹಗರಣದಲ್ಲಿ ಸಿಎಂ ಬದಲಾವಣೆ ತೀವ್ರ ಚರ್ಚೆ ಸಂದಿಗ್ಧ ಸಂದರ್ಭದಲ್ಲಿ ಸ್ವಾಮಿಜಿ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಲಕ್ಷ್ಮೇಶ್ವರದ ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ನನೆಗುದಿಗೆ ಬಿದ್ದಿದೆ. ಇದಕ್ಕೆ ಎಲ್ಲಾ ಕಾರಣ ದುಡ್ಡೆ ದೊಡ್ಡಪ್ಪ. ಲಿಂಗ ಸ್ಥಾಪನೆಗೆ ಸುಮಾರು 15 ಕೋಟಿ ರೂ. ಆದ್ರು ಹಣ ಬೇಕು ಎಂದರು. ಇದನ್ನೂ ಓದಿ: ಮಂಗಳೂರು| ಮನೆಯೊಳಗೆ ಏಕಾಏಕಿ ನುಗ್ಗಿದ ಚಿರತೆ

DK Shivakumar Janaspandana Ramanagar

ರಾಜಕೀಯ ಮುತ್ಸದ್ಧಿ, ಶ್ರೀಮಠ ಮಗನಾದ ಗಂಗಾಧರ ಶಿವಾಚಾರ್ಯರ ಆಶಿರ್ವಾದ ಪಡೆದ ಡಿಸಿಎಂ ಡಿಕೆಶಿ ಗಮನಕ್ಕೆ ತ್ರಿಕೋಟಿ ಲಿಂಗ ಸ್ಥಾಪನೆ ಬಗ್ಗೆ ಹೇಳಲಾಗಿದೆ. ವೀರಗಂಗಾಧರ ಜಗದ್ಗುರುಗಳ ಮೇಲೆ ಡಿಕೆಶಿ ಅಪಾರವಾದ ಭಕ್ತಿ ನಂಬಿಕೆ ಹೊಂದಿದ್ದಾರೆ. ಲಿಂಗ ಸ್ಥಾಪನೆಗೆ ಬೇಕಾಗುವ ಕೋಟ್ಯಂತರ ರೂಪಾಯಿ ಅನುದಾನ ಕಲ್ಪಿಸುವುದಾಗಿ ಹೇಳಿದ್ದರು. ಕಾರಣಾಂತರಗಳಿಂದ ಕೊಂಚ ತಡವಾಗಿದೆ. ಈಗ ಮೊದಲ ಹಂತದಲ್ಲಿ ಕೋಟ್ಯಂತರ ರೂಪಾಯಿ ಅನುದಾನ ನೀಡಿದ್ದಾರೆ. ಆದಷ್ಟು ಬೇಗ ಜಗದ್ಗುರುಗಳ ಸಂಕಲ್ಪ ಪೂರ್ಣಗೊಳಿಸೋಣ ಎಂದು ಹೇಳಿದ್ದಾರೆ. ಹೀಗಾಗಿ ಡಿಕೆಶಿ ಅವರು ಸಿಎಂ ಮಾಡಿ ಈ ಮುಕ್ತಿಮಂದಿರ ಜಾಗಕ್ಕೆ ಕರೆದುಕೊಂಡು ಬಂದು ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿದರು ಎಂದು ನಾಡಿಗೆ ತೋರಿಸೋಣ ಎಂದು ನುಡಿದರು. ಇದನ್ನೂ ಓದಿ: ಜೆಪಿ ನಗರದ ನಿವಾಸದಲ್ಲಿ ನಟ ಸುದೀಪ್ ತಾಯಿ ಅಂತಿಮ ದರ್ಶನ

ಈ ವಿಷಯ ಸಿಎಂ ಸಿದ್ದರಾಮಯ್ಯ (CM Siddaramaiah) ಬಣದವರ ಆಕ್ರೋಶಕ್ಕೆ ಕಾರಣವಾದ್ರೆ, ಡಿಕೆಶಿ ಬಣದವರಿಗೆ ಸಾಕಷ್ಟು ಚರ್ಚೆಗೆ ಕಾರಣವಾದಂತಿದೆ. ಈ ಸಂದರ್ಭದಲ್ಲಿ ಅನೇಕ ಸ್ವಾಮೀಜಿಗಳು, ಭಕ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೆ ಮಳೆ – ರಸ್ತೆಗಳು ಜಲಾವೃತ, ಹಲವೆಡೆ ಜನಜೀವನ ಅಸ್ತವ್ಯಸ್ತ

Share This Article