ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಅವರ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ (ಜೂ.3) ರಾಜ್ಯದ ನೂತನ ಮುಖ್ಯಮಂತ್ರಿಯಾಗಿ (Karnataka Chief Minister) ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: ಮಂಡ್ಯ ಜಿಲ್ಲೆ ಶಾಸಕರೊಂದಿಗೆ ಡಿಕೆಶಿ ಮಿಡ್‌ನೈಟ್ ಮೀಟಿಂಗ್ – ಕುತೂಹಲ ಕೆರಳಿಸಿದ 1 ಗಂಟೆ ಚರ್ಚೆ

ಸಿಎಲ್‌ಪಿ ಸಭೆಗೂ ಮುನ್ನ ರಾಜ್ಯಪಾಲರ ಭೇಟಿ
ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಇಂದು ರಾಜ್ಯಪಾಲರನ್ನ ಭೇಟಿಯಾಗಲಿದ್ದಾರೆ.
ಸಿಎಲ್‌ಪಿ ಸಭೆಯ ಬಳಿಕ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಶಾಸಕಾಂಗ ಪಕ್ಷದ ನಾಯಕ ರಾಜ್ಯಪಾಲರನ್ನ ಭೇಟಿ ಮಾಡೋದು ನಿಯಮ. ಆದ್ರೆ ಇಂದು ಸಂಜೆಯೇ ರಾಜ್ಯಪಾಲರು ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಅದಕ್ಕೂ ಮುನ್ನವೇ ಡಿಕೆ ಶಿವಕುಮಾರ್ ರಾಜ್ಯಪಾಲರನ್ನ ಭೇಟಿಯಾಗಲು ನಿರ್ಧರಿಸಿದ್ದಾರೆ.
ಡಿಕೆಶಿ ಆಗಮನದ ಹಿನ್ನೆಲೆ ಲೋಕಭವನದ ಮುಂದೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಕೆಎಸ್‌ಆರ್‌ಪಿ ತುಕಡಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಎರಡು ತಿಂಗಳ ಗೃಹಲಕ್ಷ್ಮಿ ಬಾಕಿ ಬಗ್ಗೆ ಸ್ಪಷ್ಟನೆ ಕೊಡಿ – ಹಂಗಾಮಿ ಸಿಎಂಗೆ ಸುರೇಶ್ ಕುಮಾರ್ ಪತ್ರ
