ಚಿತ್ರದುರ್ಗ: ನೋವಾದಾಗ ಇದೆಲ್ಲ ಸಹಜ. ಡಿ.ಕೆ.ಶಿವಕುಮಾರ್ ವಿಚಾರದಲ್ಲಿ ಕಾನೂನು ಹೋರಾಟ ನಡೆಯುತ್ತಿದೆ. ಇದರಲ್ಲಿ ಡಿಕೆಶಿ ಗೆಲ್ಲಲಿ, ಅವರಿಗೆ ಒಳ್ಳೆಯದಾಗಲಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹಾರೈಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ, ಇಡಿ ಇವೆಲ್ಲ ಸ್ವತಂತ್ರ ಸಂಸ್ಥೆಗಳು. ಬಿಜೆಪಿ ಇದರಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ಸಹ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ದ್ವೇಷ ರಾಜಕೀಯ ಮಾಡಲ್ಲ, ಡಿ.ಕೆ.ಶಿವಕುಮಾರ್ ಅವರು ಕಾನೂನು ಹೋರಾಟವನ್ನು ಗೆದ್ದು ಬರಲಿ ಎಂದು ಸಿಎಂ ತಿಳಿಸಿದ್ದಾರೆ. ಹೀಗಾಗಿ ಬಿಜೆಪಿಯನ್ನು ಆರೋಪಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ತಿಳಿಸಿದರು.
Advertisement
Advertisement
ಉಪ ಚುನಾವಣೆ ಭೀತಿಯಿಂದ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಲಾಗಿದೆ ಎಂಬುದರ ಕುರಿತು ಪ್ರತಿಕ್ರಿಯಿಸಿದ ಅವರು, ಇಂದಿರಾಗಾಂಧಿ ಕಾಲದಲ್ಲಿ ಬಹುದೊಡ್ಡ ಪಕ್ಷವಾಗಿದ್ದ ಕಾಂಗ್ರೆಸ್ ಇದೀಗ ಹೀನಾಯ ಸ್ಥಿತಿ ತಲುಪಿದೆ. ಇಡೀ ದೇಶದಲ್ಲಿ ವಿರೋಧ ಪಕ್ಷದ ಸ್ಥಾನಮಾನ ಸಹ ಕಾಂಗ್ರೆಸ್‍ಗೆ ಸಿಕ್ಕಿಲ್ಲ. ಹೀಗಿರುವಾಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲು ಹೇಗೆ ಸಾಧ್ಯ ಅಂದಮೇಲೆ ಇದೇ ಉದ್ದೇಶಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ್ದಾರೆ ಎಂದು ಹೇಳುವುದರಲ್ಲಿ ಅರ್ಥವಿಲ್ಲ ಎಂದು ಸ್ಪಷ್ಟಪಡಿಸಿದರು.
Advertisement
Advertisement
ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಪಿಎಸ್‍ಐ ವರ್ಗಾವಣೆಯಲ್ಲಿ ನನ್ನ ಹಸ್ತಕ್ಷೇಪ ಇದೆ ಎಂಬುದು ಸುಳ್ಳು. ಶಾಸಕರು ತಪ್ಪು ತಿಳುವಳಿಕೆಯಿಂದ ಮಾತನಾಡಿದ್ದಾರೆ. ಎಲ್ಲಾ ಸರಿಯಾಗಿದೆ, ನಾವು ಯಾವುದೇ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ತಿಳಿಸಿದರು.