ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಹೊತ್ತಿನಲ್ಲೇ ಡಿಕೆಶಿಗೆ ಹೈಕೋರ್ಟ್ (Karnataka HighCourt) ಶಾಕ್ ನೀಡಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಕೇಸ್ – CBIನಿಂದ ಡಿಕೆಶಿಗೆ ಇನ್ನೂ ಒಂದು ವಾರ ರಿಲೀಫ್
Advertisement
Advertisement
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಡಿಕೆಶಿ, ಸಿಬಿಐ ತನಿಖೆಗೆ (CBI Investigation) ವಹಿಸಿರುವ ಸರ್ಕಾರದ ಆದೇಶ ಸರಿಯಲ್ಲ ಎಂದು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಪರ ವಿರೋಧ ವಾದ ಮಂಡಿಸಲಾಗಿತ್ತು. ವಾದ ವಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.
Advertisement
2019 ರಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ಡಿಕೆಶಿ ವಿರುದ್ಧದ ತನಿಖೆಗೆ ಅನುಮತಿ ನೀಡಿತ್ತು. ಆಗ ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಈ ಪ್ರಕರಣದ ಆಧಾರದ ಮೇರೆಗೆ ನಟರಾಜನ್ ಅವರಿದ್ದ ಪೀಠ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಮೊದಲೇ ಸಿಎಂ ಅಭ್ಯರ್ಥಿ ಘೋಷಣೆ ಮಾಡೋ ಸಂಸ್ಕೃತಿ ಇಲ್ಲ: ಸೋಮಣ್ಣಗೆ ಸಿದ್ದು ತಿರುಗೇಟು
Advertisement
ಏನಿದು ಅಕ್ರಮ ಆಸ್ತಿ ಗಳಿಕೆ ಕೇಸ್?
ಈ ಹಿಂದೆ ಡಿಕೆಶಿ `ತಾನೊಬ್ಬ ಕೃಷಿಕ, ಕೃಷಿಯಿಂದಲೇ ನನಗೆ ಆದಾಯ ಬರುತ್ತಿದೆ’ ಎಂಬ ಹೇಳಿಕೆ ನೀಡಿದ ಬಳಿಕ ಆಸ್ತಿಯನ್ನು ಸಿಬಿಐ ಮೌಲ್ಯಮಾಪನ ಮಾಡಿತ್ತು. ಡಿಕೆಶಿಯ ಆದಾಯದ ಮೂಲ ಬೆನ್ನತ್ತಿದ್ದ ಸಿಬಿಐ, ಯಾವ ಬೆಳೆ ಬೆಳೆಯುತ್ತಾರೆ? ತೋಟದಿಂದ ಎಷ್ಟು ವರ್ಷದಿಂದ ಫಲ ಬರುತ್ತಿದೆ? ಎಷ್ಟು ಲಾಭ ಬರುತ್ತಿದೆ? ಎಷ್ಟು ವರ್ಷದಿಂದ ವಾಣಿಜ್ಯ ಬೆಳೆ ಬೆಳೆಯುತ್ತಿದ್ದಾರೆ? ಜಮೀನು ಖರೀದಿಸಿದ್ದು ಯಾವಾಗ ಎಂಬ ಬಗ್ಗೆ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಅಷ್ಟೇ ಅಲ್ಲದೇ ಕೃಷಿ ಭೂಮಿಗೆ ಸಂಬಂಧಿಸಿದ ಕಳೆದ 10 ವರ್ಷದ ಪಹಣಿಯನ್ನು ಪಡೆಯಲಾಗಿತ್ತು.