ರಾಮನಗರ: ಕೇಂದ್ರಿಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಅವರು ಗೇಟ್‍ಗೆ ಬೀಗ ಹಾಕಿ ಮನೆಯಲ್ಲಿ ಕುಳಿತಿದ್ದಾರೆ.
Advertisement
ಡಿಕೆಶಿ ಕನಕಪುರ ಮನೆ ಮೇಲೆ ಬುಧವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಡಿಕೆಶಿಯ ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿರುವ ಮನೆಯ ಗೇಟ್‍ಗೆ ಬೀಗ ಜಡಿಯಲಾಗಿದೆ. ಗೇಟ್ ಗೆ ಬೀಗ ಹಾಕಿ ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಡಿಕೆಶಿ ತಾಯಿ ಗೌರಮ್ಮ ಕುಳಿತಿದ್ದಾರೆ. ಇತ್ತ ಡಿಕೆಶಿಯವರು, ನನಗೆ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ.
Advertisement
Advertisement
ಸಿಬಿಐ ದಾಳಿ ವಿಚಾರವಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಏನ್ಮಾಡ್ತಿರಾ ಯಾರ ಮೇಲೆ ಪ್ರೀತಿ ಇರುತ್ತಾ ಅವರ ಮನೆ ದಾಳಿ ಮಾಡುತ್ತಾರೆ. ನಾನು ಈ ಕೆಲಸದಲ್ಲಿದ್ದಿನಿ. ಅವರು ಅಲ್ಲಿ ದಾಳಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ತಾಯಿಗೆ ವಯಸ್ಸಾಗಿದೆ, ಮರೆವು ಜಾಸ್ತಿ ಆಗಿದೆ: ಡಿಕೆ ಶಿವಕುಮಾರ್
Advertisement
ಜಮೀನು ನೋಡಿದರೆ, ಮನೆ ನೋಡಿದ್ದಾರೆ. ಅಧಿಕಾರಿಗಳು ಏನೇನೂ ಮಾಡಿದ್ದಾರೋ ಗೊತ್ತಿಲ್ಲ. ನನ್ನ ತಾಯಿಗೆ ವಯಸ್ಸಾಗಿದೆ. ಮರೆವು ಜಾಸ್ತಿ ಆಗಿದೆ. ಸಿಬಿಐ ಅಂದಕೂಡಲೇ ನಮ್ಮ ಜನ ಗಡಗಡ ಅಂತಾರೆ. ನಾವು ಗಡಗಡ ಅಂತೀವಿ. ಹೀಗಾಗಿ ಅಲ್ಲಿ ಏನಾಗಿದೆ ಅಂತಾ ಯಾರಿಗೂ ಗೊತ್ತಾಗಿಲ್ಲ ಎಂದು ಹೇಳಿದರು.
ಸಿಬಿಐ ದಾಳಿ: 5 ವರ್ಷದಲ್ಲಿ 75 ಕೋಟಿಗೂ ಅಧಿಕ ಆಸ್ತಿಗಳಿಸಿರುವ ಸಂಬಂಧ ಡಿಕೆಶಿ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿತ್ತು. ತನ್ನ ಮೇಲಿನ ಪ್ರಕರಣವನ್ನು ರದ್ದು ಮಾಡುವಂತೆ ಡಿಕೆ ಶಿವಕುಮಾರ್ ಹೈಕೋರ್ಟ್‍ಮೇಟ್ಟಿಲೇರಿದ್ದರು. ಇದರ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಸಿಬಿಐ ಪರ ವಕೀಲರು ಹೆಚ್ಚುವರಿ ಆಕ್ಷೇಪಣೆಗೆ ಕಾಲಾವಧಿ ಕೇಳಿದ ಅರ್ಜಿ ಸಲ್ಲಿಸಿದ್ದರು. ನಂತರ ಆಸ್ತಿ ಮೌಲ್ಯಮಾಪನ ಮಾಡಿ ಹೆಚ್ಚಿನ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಸಿಪಿಡಬ್ಲ್ಯೂಡಿ ಅಧಿಕಾರಿಗಳ ಜೊತೆ ತೆರಳಿ ಮೌಲ್ಯಮಾಪನ ಮಾಡಿದ್ದಾರೆ.