ಬೆಂಗಳೂರು: ಮುಖ್ಯಮಂತ್ರಿಗಳ ಮುಂದೆಯೇ ಉಸ್ತುವಾರಿ ಸಚಿವರು ಗಂಡಸರು ಯಾರಿದ್ದಾರೆ ಅಂತ ಕೇಳಿದ್ದರು. ಅವರೊಬ್ಬರೇ ಗಂಡಸರು. ರಾಮನಗರದಲ್ಲಿ ಗಂಡಸರಿಲ್ಲ ನಾವೆಲ್ಲಾ ಹೆಂಗಸರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
Advertisement
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಜೋರಾಗಿ ಅಧಿಕಾರ ಚಲಾಯಿಸಿದರೆ ಡಿ.ಕೆ.ಶಿವಕುಮಾರ್ ಉಸಿರು ನಿಂತು ಹೋಗುತ್ತದೆ ಅಂತ ಸಿಎಂ ಹೇಳಿದ್ದಾರೆ. ಇದರಿಂದ ನನಗೂ ಸಹ ಭಯವಾಗುತ್ತಿದೆ. ಮತ್ತೊಂದೆಡೆ ಮುಖ್ಯಮಂತ್ರಿಗಳ ಮುಂದೆಯೇ ಉಸ್ತುವಾರಿ ಸಚಿವರು ಗಂಡಸರು ಯಾರಿದ್ದಾರೆ ಅಂತ ಕೇಳಿದ್ದರು. ಅವರೊಬ್ಬರೇ ಗಂಡಸರು. ರಾಮನಗರದಲ್ಲಿ ಗಂಡಸರಿಲ್ಲ ನಾವೆಲ್ಲಾ ಹೆಂಗಸರು, ನಾನು, ನನ್ನ ತಮ್ಮ ಅನಿತಾ ಕುಮಾರಸ್ಚಾಮಿ ಎಲ್ಲರು ಅವರ ಗಂಡಸ್ತನ ನೋಡಿ ಗಢ, ಗಢ ಅಂತ ನಡುಗುತ್ತಿದ್ದೇವೆ. ಇದೀಗ ಪಿಎಸ್‍ಐ ಅಕ್ರಮದಲ್ಲಿ ಸಚಿವರೊಬ್ಬರ ಹೆಸರು ಕೇಳಿ ಬರುತ್ತಿದೆ. ಅವರ ತಮ್ಮ ಅನ್ನಲ್ಲ ಅವರ ಕುಟುಂಬಸ್ಥರು ಸಂಬಂಧಿಕರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಈ ಬಗ್ಗೆ ಸಿಎಂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದರು.
Advertisement
Advertisement
ನಾನು ಆ ಸಚಿವರ ಬಗ್ಗೆ ಮಾತನಾಡುತ್ತೇನೆ ಅಂತ ನನಗೆ ಕಾಲ್ ಬರುತ್ತಿವೆ. ಅಣ್ಣ ಅವರ ಬಗ್ಗೆ ಮಾತನಾಡಬೇಡಿ ಅವರು ಈ ಬಾರಿ ಸಿಎಂ ಆಗಿ ಬಿಡುತ್ತಾರೆ. ಅವರ ಬಗ್ಗೆ ಮಾತನಾಡಿ ತೊಂದರೆ ಮಾಡಬೇಡಿ ಅಂತ ಯಾರ್ಯಾರೋ ಕಾಲ್ ಮಾಡಿದ್ದರು. ಇದನ್ನೂ ಓದಿ: ಪಿಎಸ್‍ಐ ಅಕ್ರಮ – ಕೈ ನಾಯಕರು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ: ಅಶ್ವಥ್ ನಾರಾಯಣ
Advertisement
ಪಿಎಸ್‍ಐ ನೇಮಕಾತಿ ಅಕ್ರಮದ ಬಗ್ಗೆ ಸಿಎಂ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಮುಂದಾಗಬೇಕು. ಪಿಎಸ್‍ಐ ಪರೀಕ್ಷಾ ಅಕ್ರಮದಲ್ಲಿ ಬೊಮ್ಮಾಯಿ ಅವರು ಭಾಗಿಯಾಗಿದ್ದಾರೆ ಅಂತ ನಾನು ಹೇಳಲ್ಲ. ಸಿಎಂ ಬೊಮ್ಮಾಯಿ ಅವರ ಕಾಲದಲ್ಲಿ ಈ ಅಕ್ರಮ ನಡೆದಿಲ್ಲ. ಅದು ನನಗೆ ಚೆನ್ನಾಗಿ ಗೊತ್ತಿದೆ. ಆದರೆ ಸಿಎಂ ಅವರು ಸಚಿವರ ರಕ್ಷಣೆ ಮಾಡಬಾರದು. ಯಾರೇ ಇರಲಿ. ಎಷ್ಟೇ ದೊಡ್ಡವರಾಗಿರಲಿ ನಿಷ್ಪಕ್ಷಪಾತವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಸಿಒಡಿ ಅಧಿಕಾರಿಗಳು ಆಯ್ಕೆಯಾದ ವಿದ್ಯಾರ್ಥಿಗಳು ಹಳ್ಳಿಗಳಿಗೆ ಹೋಗಿದ್ದಾರಾ, ಅವರೆಲ್ಲ ಎಷ್ಟು ದುಡ್ಡು ಕೊಟ್ಟಿದ್ದಾರೆ ಎಂಬ ಮಾಹಿತಿ ಕಲೆಹಾಕಬಹುದಿತ್ತು. ಆದರೆ ಯಾವ ಅಧಿಕಾರಿಗಳು ಮಾಡಲಿಲ್ಲ. ಸರ್ಕಾರ ಅಕ್ರಮವನ್ನು ಮುಚ್ವಿಹಾಕಲು ಹೊರಟಿದೆ ಅನಿಸುತ್ತಿದೆ. ಪ್ರಭಾವಿ ಸಚಿವರೊಬ್ಬರು ಕರೆ ಮಾಡಿ, ಅಕ್ರಮದಲ್ಲಿರುವರೊಬ್ಬರನ್ನು ಪೊಲೀಸರಿಂದ ಬಿಡಿಸಿದ್ದಾರೆ ಎಂಬ ಮಾಹಿತಿ ಇದೆ. ಯಾರು ಕರೆ ಮಾಡಿದ್ದು, ಏಕೆ ಮಾಡುತ್ತಿದ್ದಾರೆ. ಅವರ ಪಾತ್ರ ಏನು ತನಿಖೆ ನಡೆಸಲಿ. ಭ್ರಷ್ಟಾಚಾರವನ್ನು ಬಹಳ ದಿನ ಮುಚ್ಚಿಡಲು ಸಾಧ್ಯವಿಲ್ಲ. ಅದು ಹೊರಗೆ ಬಂದೇ ಬರುತ್ತದೆ ಎಂದು ವಾಗ್ದಳಿ ನಡೆಸಿದರು. ಇದನ್ನೂ ಓದಿ: ಈಗ ಸಿಕ್ಕವರು ಕಿಂಗ್‌ಪಿನ್‌ಗಳಲ್ಲ, ಗೃಹ ಸಚಿವರ ಮೇಲೆಯೇ ನನಗೆ ಅನುಮಾನ – ಪ್ರಿಯಾಂಕ್ ಖರ್ಗೆ
ಈ ವಿಚಾರದ ಬಗ್ಗೆ ಡಿ.ಜಿ ಹಾಗೂ ಗೃಹ ಸಚಿವರು ಬೇರೆ, ಬೇರೆ ಮಾಹಿತಿ ನೀಡಿದ್ದಾರೆ. ನನಗೆ ಮಾಹಿತಿ ಇರುವ ಪ್ರಕಾರ ಕೆಲವರ ಹೆಸರು ತನಿಖೆ ವೇಳೆ ಗೊತ್ತಾಗಿದೆ. ಆದರೆ ಸಿಐಡಿ ಯಾರ ಮನೆಗೆ ಹೋಗಿದ್ದರು. ಅವರ ತನಿಖೆ ಮಾಡಿದ್ದಾರಾ? ನೋಡೋಣ ಸರ್ಕಾರ ಯಾರ, ಯಾರ ರಕ್ಷಣೆ ಮಾಡುತ್ತಾರೆ. ಸಿಎಂಗೆ ಬದ್ದತೆ ಇದ್ದರೆ ನಿರ್ದಾಕ್ಷಣ್ಯ ಕೈಗೊಳ್ಳುವುದೇ ಆಗಿದ್ದರೆ, ಮೊದಲು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.