LatestLeading NewsMain PostNational

ಸದ್ಯಕ್ಕೆ ಡಿಕೆ ಶಿವಕುಮಾರ್ ಬಂಧಿಸಲ್ಲ: ಇಡಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ (Money laundering Case) ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಅವರನ್ನು ಸದ್ಯಕ್ಕೆ ಬಂಧಿಸುವುದಿಲ್ಲ ಎಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದೆಹಲಿ ಹೈಕೋರ್ಟ್‍ಗೆ ತಿಳಿಸಿದ್ದಾರೆ. ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯೊಂದರ ವಿಚಾರಣೆ ವೇಳೆ ಅಧಿಕಾರಿಗಳು ಈ ಹೇಳಿಕೆ ದಾಖಲಿಸಿದ್ದಾರೆ.

ಸದ್ಯಕ್ಕೆ ಡಿಕೆ ಶಿವಕುಮಾರ್ ಬಂಧಿಸಲ್ಲ: ಇಡಿ

ಜಾರಿ ನಿರ್ದೇಶನಾಲಯದಲ್ಲಿ ತಮ್ಮ ವಿರುದ್ಧ ದಾಖಲಾದ ಎರಡನೇ ಇಸಿಆರ್ (ದೂರು) ರದ್ದುಗೊಳಿಸುವಂತೆ, ಬಂಧನದಿಂದ ರಕ್ಷಣೆ ನೀಡುವಂತೆ ಕೋರಿ ಡಿ.ಕೆ ಶಿವಕುಮಾರ್ ದೆಹಲಿ ಹೈಕೋರ್ಟ್ (Delhi HighCourt) ಗೆ ಅರ್ಜಿ ಸಲ್ಲಿಸಿದ್ದರು. ಡಿ.ಕೆ ಶಿವಕುಮಾರ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ (Kapil Sibal) ವಾದ ಮಂಡಿಸಿದರು. ಇದನ್ನೂ ಓದಿ: ಕೇರಳ ಕಾಂಗ್ರೆಸ್‌ನಲ್ಲಿ ಬಿರುಕು – ನಾನು ಯಾರಿಗೂ ಹೆದರುವುದಿಲ್ಲ ಎಂದ ಶಶಿ ತರೂರ್

ಸದ್ಯಕ್ಕೆ ಡಿಕೆ ಶಿವಕುಮಾರ್ ಬಂಧಿಸಲ್ಲ: ಇಡಿ

ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ದಾಖಲಾದ ಮೊದಲ ಕೇಸ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಎರಡನೇ ಕೇಸ್ ದಾಖಲಿಸಿ ವಿಚಾರಣೆ ನಡೆಸುವ ಅಗತ್ಯವಿರಲಿಲ್ಲ. ಇದನ್ನು ಈಗಾಗಲೇ ಸಿಬಿಐ (CBI) ತನಿಖೆ ನಡೆಸುತ್ತಿದೆ. ಈ ಮಧ್ಯೆ ಇಡಿ ಎರಡನೇ ಕೇಸ್ ದಾಖಲಿಸಿ ವಿಚಾರಣೆಗೆ ಕರೆದಿದೆ. ಇಡಿ ದಾಖಲಿಸಿರುವ ಇಸಿಐಆರ್ ರದ್ದು ಮಾಡಬೇಕು, ಬಂಧನದಿಂದ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದರು.

ಸದ್ಯಕ್ಕೆ ಡಿಕೆ ಶಿವಕುಮಾರ್ ಬಂಧಿಸಲ್ಲ: ಇಡಿ

ಇದಕ್ಕೆ ಇಡಿ ಪರ ವಾದ ಮಂಡಿಸಿದ ವಕೀಲರು, ಸದ್ಯಕ್ಕೆ ಡಿ.ಕೆ ಶಿವಕುಮಾರ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಎರಡನೇ ಪ್ರಕರಣದಲ್ಲಿ ಸಿಬಿಐ ಶಿಫಾರಸು ಆಧರಿಸಿ ದಾಖಲೆಗಳ ಪರಿಶೀಲನೆ ನಡೆದಿದೆ. ಅವರನ್ನು ಬಂಧಿಸುವ ಪ್ರಯತ್ನ ಇಡಿ ಮಾಡಿಲ್ಲ ಎಂದು ತಿಳಿಸಿದರು. ವಾದ ಪ್ರತಿವಾದ ಆಲಿಸಿದ ಕೋರ್ಟ್ ಡಿಸೆಂಬರ್ 2ಕ್ಕೆ ವಿಚಾರಣೆ ಮುಂದೂಡಿದೆ.

Live Tv

Leave a Reply

Your email address will not be published. Required fields are marked *

Back to top button