ನವದೆಹಲಿ: ರಾಜ್ಯದ ಬಾಕಿ ರೈಲ್ವೇ (Railway Project) ಹಾಗೂ ಜಲ ಮಿಷನ್ ಯೋಜನೆಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಸಂಸದ ಡಿ.ಕೆ.ಸುರೇಶ್ (DK Suresh) ಮನವಿ ಮಾಡಿದ್ದಾರೆ.
ಡಿಕೆ ಸುರೇಶ್ ಅವರು ದೆಹಲಿಯಲ್ಲಿ ಕೇಂದ್ರ ರೈಲ್ವೇ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ (V Somanna) ಅವರನ್ನು ಬುಧವಾರ ಭೇಟಿ ಮಾಡಿ ಈ ಮನವಿ ಸಲ್ಲಿಸಿದರು. ಇದನ್ನೂ ಓದಿ: ಎಲ್ಲವನ್ನೂ ಸಿಬಿಐಗೆ ಕೊಡಲು ಸಾಧ್ಯವಿಲ್ಲ: ಪರಮೇಶ್ವರ್
Advertisement
Advertisement
ಹೆಜ್ಜಾಲ, ಕನಕಪುರ ಹಾಗೂ ಚಾಮರಾಜನಗರ ಹೊಸ ರೈಲ್ವೇ ಮಾರ್ಗ ಈ ಹಿಂದೆಯೇ ಮಂಜೂರಾಗಿ, ಟೆಂಡರ್ ಪ್ರಕ್ರಿಯೆ ಆಗಿದ್ದರೂ ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಅದೇ ರೀತಿ ರಾಜ್ಯದ ಅನೇಕ ರೈಲ್ವೇ ಯೋಜನೆಗಳು ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿವೆ. ಈ ಯೋಜನೆಗಳಿಗೆ ಅನುದಾನ ನೀಡಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಎಂದು ಕೋರಿದರು. ಇದನ್ನೂ ಓದಿ: ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಹೆಚ್‍ಡಿಕೆಗೆ ಸ್ಥಾನ
Advertisement
Advertisement
ಜಲಜೀವನ್ ಮಿಷನ್ ಅಡಿಯಲ್ಲಿ ಕುಡಿಯುವ ನೀರು ಯೋಜನೆಗಳಿಗೆ ಸಲ್ಲಿಸಿರುವ ಪ್ರಸ್ತಾವನೆಗಳು ಆರು ತಿಂಗಳಿನಿಂದ ಬಾಕಿ ಉಳಿದಿವೆ. ಅವುಗಳಿಗೆ ಮಂಜೂರಾತಿ ಕೊಡಿ ಎಂದು ಡಿಕೆ ಸುರೇಶ್ ವಿನಂತಿ ಮಾಡಿದ್ದು, ಸಚಿವ ಸೋಮಣ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದನ್ನೂ ಓದಿ: ಹುತಾತ್ಮ ಅಗ್ನಿವೀರ್ ಕುಟುಂಬಕ್ಕೆ 98.39 ಲಕ್ಷ ನೀಡಲಾಗಿದೆ – ರಾಹುಲ್ ಆರೋಪದ ಬೆನ್ನಲ್ಲೇ ಸೇನೆ ಸ್ಪಷ್ಟನೆ