ಬೆಂಗಳೂರು: ಶಾಸಕ ಆನಂದ್ ಸಿಂಗ್ ಅವರಿಗೆ ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ಬಂದು ದಾಖಲಾಗಿದ್ದು, ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ ಎಂದು ಸಂಸದ ಡಿಕೆ ಸುರೇಶ್ ಅವರು ಹೇಳಿದ್ದಾರೆ.
ಶೇಷಾದ್ರಿಪುರಂ ಬಳಿಯ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಸುರೇಶ್ ಅವರು, ನನಗೆ ಇಂದು ಬೆಳಗ್ಗೆ ಅನಂದ್ ಸಿಂಗ್ ಅವರು ಆಸ್ಪತ್ರೆಗೆ ದಾಖಲಾದ ಮಾಹಿತಿ ಲಭಿಸಿತ್ತು. ಆದ್ದರಿಂದ ಆಸ್ಪತ್ರೆಗೆ ಭೇಟಿ ನೀಡಿ ಅವರನ್ನು ಮಾತನಾಡಿದ್ದೇನೆ. ಅವರ ಆರೋಗ್ಯ ಸ್ಥಿತಿ ಸದ್ಯ ಸುಧಾರಣೆ ಆಗಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರ ಬಳಿ ಮಾತನಾಡಿರುವ ವೇಳೆ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದ ಬಗ್ಗೆ ಹೇಳಿದರು. ಆ ಬಳಿಕ ಆನಂದ್ ಸಿಂಗ್ ಅವರು ವಿಶ್ರಾಂತಿ ಅಗತ್ಯವಿದ್ದರಿಂದ ನಿದ್ದೆ ಮಾಡಲು ಡಾಕ್ಟರ್ ಸೂಚಿಸಿದ್ದಾರೆ. ಸಂಜೆ ವೇಳೆಗೆ ವೈದ್ಯಕೀಯ ಪರೀಕ್ಷೆಗಳ ಮಾಹಿತಿ ಲಭ್ಯವಾಗಲಿದ್ದು, ತದನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ತೀರ್ಮಾನ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿದರು. ಇದನ್ನು ಓದಿ: ಬಾಟ್ಲಿ ಪೆಟ್ಟು ತಿಂದು ಅಪೋಲೋ ಆಸ್ಪತ್ರೆ ಸೇರಿದ ಆನಂದ್ ಸಿಂಗ್?
Advertisement
Advertisement
ಇದೇ ವೇಳೆ ಮಾಧ್ಯಮಗಳ ವರದಿ ಅಲ್ಲಗಳೆದ ಡಿಕೆ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದರು. ರೆಸಾರ್ಟಿನಲ್ಲಿ ಯಾವುದೇ ಜಗಳ ಆಗಿಲ್ಲ. ಆನಂದ್ ಸಿಂಗ್ ಅವರ ತಲೆಗೆ ಗಾಯ ಆಗಿರುವುದು ಭೇಟಿ ವೇಳೆ ನನಗೆ ಕಾಣಿಸಲಿಲ್ಲ. ಅಲ್ಲದೇ ರೆಸಾರ್ಟಿನಲ್ಲಿ ಯಾವುದೇ ಪಾರ್ಟಿಯನ್ನು ಆಯೋಜಿಸಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆನಂದ್ ಸಿಂಗ್ ಕುಟುಂಬಸ್ಥರು ಮದುವೆಯ ಸಮಾರಂಭದಲ್ಲಿ ಭಾಗಿಯಾಗಿದ್ದು, ಅವರಿಗೂ ಕೂಡ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನು ಓದಿ: ಗುರು ಆನಂದ್ ಸಿಂಗ್ ಮೇಲೆ ಶಿಷ್ಯ ಗಣೇಶ್ ಅಟ್ಯಾಕ್?-ಇದು ಇನ್‍ಸೈಡ್ ಸ್ಟೋರಿ
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv