– ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿ ಸಂಸದ
ಬೆಂಗಳೂರು: 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು (Congress 1st Lok Sabha List) ಶುಕ್ರವಾರ ಬಿಡುಗಡೆಗೊಳಿಸಿದೆ. ಕರ್ನಾಟಕ ಕಾಂಗ್ರೆಸ್ ಪಕ್ಷದ ಏಕೈಕ ಸಂಸದ ಡಿ.ಕೆ ಸುರೇಶ್ (DK Suresh) ಅವರಿಗೆ ಬೆಂಗಳೂರು ಗ್ರಾಮಾಂತರದಿಂದಲೇ ಟಿಕೆಟ್ ಘೋಷಣೆ ಮಾಡಲಾಗಿದೆ.
2014, 2019ರ ಚುನಾವಣೆಗಳಲ್ಲಿ ಸತತ ಎರಡು ಬಾರಿ ಗೆಲುವು ಸಾಧಿಸಿರುವ ಡಿ.ಕೆ ಸುರೇಶ್, ಇದೀಗ ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿದ್ದಾರೆ. 2014ರಲ್ಲಿ ಡಿಕೆ ಸುರೇಶ್ 14,55,244 ಮತಗಳನ್ನು ಪಡೆದು, 2,31,480 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2019ರಲ್ಲಿ 2,06,870 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಹಾಗಾಗಿ ಹೈಕಮಾಂಡ್ ಸತತ 3ನೇ ಬಾರಿಗೆ ಬೆಂಗಳೂರು ಗ್ರಾಮಾಂತರದಿಂದಲೇ ಟಿಕೆಟ್ ನೀಡಿದೆ.
Advertisement
Advertisement
ಇನ್ನೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿಯಿಂದ ಹಲವು ಘಟಾನುಘಟಿ ನಾಯಕರ ಹೆಸರುಗಳು ಕೇಳಿಬರುತ್ತಿದ್ದು. ಇದೇ ವಾರದಲ್ಲಿ 2ನೇ ಪಟ್ಟಿ ಪ್ರಕಟಿಸಲಿದ್ದು, ಕುತೂಹಲಕ್ಕೆ ತೆರೆ ಎಳೆಯಲಿದೆ. ಇದನ್ನೂ ಓದಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಗಾರಪ್ಪ ಫ್ಯಾಮಿಲಿ V/S ಯಡಿಯೂರಪ್ಪ ಫ್ಯಾಮಿಲಿ
Advertisement
ಟಿಕೆಟ್ ಘೋಷಣೆ ಮಾಡಿದ ಬೆನ್ನಲ್ಲೆ ಪ್ರತಿಕ್ರಿಯಿಸಿರುವ ಡಿಕೆ ಸುರೇಶ್, ಬೆಂಗಳೂರು ಗ್ರಾಮಾಂತರದಲ್ಲಿ ನನ್ನ ಕೆಲಸ, ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಮನಗಂಡು ಮೂರನೆಯ ಅವಧಿಗೂ ಕ್ಷೇತ್ರದ ಜನರ ಸೇವೆಗೆ ಅವಕಾಶ ಕಲ್ಪಿಸಿದ ರಾಷ್ಟ್ರೀಯ ಕಾಂಗ್ರೆಸ್‌ಗೆ ನನ್ನ ಧನ್ಯವಾದಗಳು. ನ್ನ ಪ್ರೀತಿಯ ಕನ್ನಡಿಗರ ಹಾಗೂ ಗ್ರಾಮಾಂತರ ಜನತೆಯ ಸೇವೆ ಮಾಡಲು ಇನ್ನಷ್ಟು ಬಲ ಬಂದಂತಾಗಿದೆ ಎಂದು ಎಕ್ಸ್ ಖಾತೆಯಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.
Advertisement
ಕರ್ನಾಟದಲ್ಲಿ ಯಾರ್ಯಾರಿಗೆ ಟಿಕೆಟ್?
ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 9 ರಾಜ್ಯಗಳಿಂದ 39 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್, ತುಮಕೂರಿನಿಂದ ಮುದ್ದ ಹನುಮೇಗೌಡ, ವಿಜಯಪುರದಿಂದ ಎಸ್.ಆರ್. ಅಲಗೂರ, ಹಾವೇರಿಯಿಂದ ಆನಂದಸ್ವಾಮಿ ಗಡ್ಡದವೇರಮಠ, ಶಿವಮೊಗ್ಗದಿಂದ ಗೀತಾ ಶಿವರಾಜ್‌ಕುಮಾರ್, ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ ಸುರೇಶ್ ಹಾಗೂ ಹಾಸನದಿಂದ ಶ್ರೇಯಸ್ ಪಟೇಲ್, ಮಂಡ್ಯದಿಂದ ವೆಂಕಟರಮಣಗೌಡ (ಸ್ಟಾರ್ ಚಂದ್ರು) ಹೆಸರನ್ನು ಪಕ್ಷ ಫೈನಲ್ ಮಾಡಿದೆ. ಉಳಿದಂತೆ ಛತ್ತೀಸಗಢ 6, ಕೇರಳ 16, ಲಕ್ಷದ್ವೀಪ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಕ್ಷೇತ್ರಗಳಿಂದ ತಲಾ 1, ಮೇಘಾಲಯ 2, ತೆಲಂಗಾಣದಿಂದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ಮೊದಲ ಪಟ್ಟಿ ಪ್ರಕಟಿಸಿದ ಬಳಿಕ ಮಾತನಾಡಿದ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಸಾಮಾಜಿಕ ನ್ಯಾಯದ ಅಡಿಯಲ್ಲಿ 15 ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಒಟ್ಟು 24 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Congress 1st Lok Sabha List: ಮತ್ತೆ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗಿಳಿದ ರಾಗಾ!