ನವದೆಹಲಿ: ಇಂದಿನ ಬಜೆಟ್‌ನಲ್ಲಿ ಹೊಸತೇನು ಇಲ್ಲ. ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿದೆ. ಹೀಗೆ ಅನ್ಯಾಯ ಆದ್ರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಸಂಸದ ಡಿಕೆ ಸುರೇಶ್ (DK Suresh) ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್ (Union Budget 2024) ಕುರಿತು ಪ್ರತಿಕ್ರಿಯಿಸಿದ ಅವರು, ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇಂದು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂತವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ಸಂಸದರು ಗರಂ ಆದರು.
Advertisement
Advertisement
ಹೊಸ ಪದಗಳನ್ನು ಬಳಸಿ, ಹೊಸ ಹೆಸರಿಟ್ಟು ಒಂದಷ್ಟು ಯೋಜನೆ ಘೋಷಿಸಿದ್ದಾರೆ. ನಮಗೆ ಬರಬೇಕಾದ ಹಣವೇ ಸರಿಯಾಗಿ ಬರುತ್ತಿಲ್ಲ. ಇನ್ನೂ 75,000 ಕೋಟಿ ಬಡ್ಡಿ ರಹಿತ ಸಾಲ ಕೊಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡುವ ಗುರಿ: ವಿತ್ತ ಮಂತ್ರಿ
Advertisement
ಈ ಬಜೆಟ್ ನಲ್ಲಿ ನಾಮಫಲಕ ಮಾತ್ರ ಬದಲಾಯಿಸಲಾಗಿದೆ. ಬೇರೆ ಬೇರೆ ದೇಸಿ ಹೆಸರುಗಳನ್ನ ಇಡಲಾಗಿದೆ. ಎಕನಾಮಿಕ್ ಸರ್ವೆ ಅವರು ಇಟ್ಟಿದ್ದಿದ್ರೆ ಇವರ ಪರಿಸ್ಥಿತಿ ಏನಾಗುತ್ತಿತ್ತು?. ಯಾವ ರೀತಿ ದೇಶ ಕಳೆದ ಸಾಲಿನಲ್ಲಿ ಸಾಧನೆಯನ್ನು ಸಾಧಿಸಿದೆ ಅನ್ನೋ ಅನುಮಾನಗಳು ಪ್ರಾರಂಭವಾಗಿದೆ. ಚುನಾವಣೆಗೆ ಸಂಬಂಧಪಟ್ಟಂತೆ ಒಂದಷ್ಟು ಘೋಷಣೆಗಳು, ಒಂದಷ್ಟು ಹೇಳಿಕೆಗಳನ್ನು ಕೂಡಿರುವ ಬಜೆಟ್ ಇದಾಗಿದೆ ಎಂದರು.