ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗುತ್ತಿದ್ದಂತೆ ಪಕ್ಷದ ಹಿರಿಯ ನಾಯಕರ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ. ನಿನ್ನೆಯಿಂದ ಪಕ್ಷದ ಹಿರಿಯ ನಾಯಕರ ಭೇಟಿ ಮಾಡಿ ಮಾತುಕತೆ ಆರಂಭಿಸಿರುವ ಡಿ.ಕೆ.ಶಿವಕುಮಾರ್ ಇಂದು ಸಹ ಕಾಂಗ್ರೆಸ್ ನ ಹಿರಿಯ ನಾಯಕರ ಭೇಟಿ ಮುಂದುವರಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಭಾನುವಾರ ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವ @moilyv ಅವರ ನಿವಾಸಕ್ಕೆ ಭೇಟಿ ನೀಡಿ, ಕೃತಜ್ಞತೆ ಸಲ್ಲಿಸಿದರು. pic.twitter.com/8B4P5sGkhz
— Karnataka Congress (@INCKarnataka) March 15, 2020
Advertisement
ಇಂದು ಬೆಳಗ್ಗೆ ಕೆಪಿಸಿಸಿ ಮಾಜಿ ಅದ್ಯಕ್ಷ ಮಾಜಿ ಡಿಸಿಎಂ ಪರಮೇಶ್ವರ್ ನಿವಾಸಕ್ಕೆ ಭೇಟಿ ಕೊಟ್ಟು 45 ನಿಮಿಷಗಳ ಕಾಲ ಚರ್ಚೆ ನಡೆಸಿದರು. ಅಲ್ಲಿಂದ ನೇರವಾಗಿ ಆರ್.ಟಿ.ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರ ನಿವಾಸಕ್ಕೆ ಬೇಟಿ ಕೊಟ್ಟು ಅವರ ಜೊತೆ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಅಲ್ಲಿಂದ ಹೊರಟ ಡಿಕೆಶಿ ಜಯನಗರದಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕ ರಹೆಮಾನ್ ಖಾನ್ ನಿವಾಸಕ್ಕೆ ಭೇಟಿ ನೀಡಿ ಅವರ ಜೊತೆಯು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.
Advertisement
ಕೆಪಿಸಿಸಿ ನಿಯೋಜಿತ ಅಧ್ಯಕ್ಷ @DKShivakumar ಅವರು ಹಿರಿಯ ಕಾಂಗ್ರೆಸ್ ನಾಯಕ ರೆಹಮಾನ್ ಖಾನ್ ಅವರ ನಿವಾಸಕ್ಕೆ ಭೇಟಿ ನೀಡಿ, ಕೃತಜ್ಞತೆ ಸಲ್ಲಿಸಿದರು. pic.twitter.com/hm5qzY6nTm
— Karnataka Congress (@INCKarnataka) March 15, 2020
Advertisement
ಶನಿವಾರ ಸಹ ಹಿರಿಯ ನಾಯಕರ ಭೇಟಿ ಮಾಡಿದ್ದ ಡಿ.ಕೆ.ಶಿವಕುಮಾರ್‍ಮ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಕೆ.ಹೆಚ್.ಮುನಿಯಪ್ಪ ಹಾಗೂ ದಿನೇಶ್ ಗುಂಡೂರಾವ್ ಅವರ ನಿವಾಸಗಳಿಗೆ ಭೇಟಿ ಕೊಟ್ಟು ಅವರೆಲ್ಲರನ್ನು ವಿಶ್ವಾಸಕ್ಕೆ ತಗೆದುಕೊಳ್ಳಲು ಮುಂದಾಗಿದ್ದಾರೆ.
Advertisement
ಕೆಪಿಸಿಸಿ ನಿಯೋಜಿತ ಅಧ್ಯಕ್ಷ @DKShivakumar ಅವರು ಮಾಜಿ ಡಿಸಿಎಂ @DrParameshwara ಅವರ ನಿವಾಸಕ್ಕೆ ಭೇಟಿ ನೀಡಿ, ಕೃತಜ್ಞತೆ ಸಲ್ಲಿಸಿದರು. pic.twitter.com/L7TWaQ1C0K
— Karnataka Congress (@INCKarnataka) March 15, 2020
ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದರೆ ಹಿರಿಯರನ್ನ ಕಡೆಗಣಿಸುತ್ತಾರೆ. ಯಾರನ್ನು ವಿಶ್ವಾಸಕ್ಕೆ ತಗೆದುಕೊಳ್ಳಲ್ಲ ಅನ್ನೋ ಆರೋಪಕ್ಕೆ ಗುರಿಯಾಗಿದ್ದರು. ಈ ಹಿಂದಿನಿಂದಲೂ ಹಿರಿಯ ಕಾಂಗ್ರೆಸ್ ನಾಯಕರುಗಳು ಡಿಕೆಶಿ ಪಟ್ಟಾಭಿಷೇಕಕ್ಕೆ ವಿರೋಧ ಸಹ ವ್ಯಕ್ತಪಡಿಸಿದ್ದರು. ಆದರೆ ಕೆಪಿಸಿಸಿ ಪಟ್ಟಾಭಿಷೇಕದ ನಂತರ ಡಿಕೆಶಿ ಮೊದಲು ಹಿರಿಯರಿಗೆ ಸಲಾಂ ಎನ್ನುವ ಮೂಲಕ ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಳ್ಳುವ ಕಸರತ್ತು ಆರಂಭಿಸಿದ್ದಾರೆ.
ಕೆಪಿಸಿಸಿ ನಿಯೋಜಿತ ಅಧ್ಯಕ್ಷ @DKShivakumar ಅವರು ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್. ಮುನಿಯಪ್ಪ ಅವರ ಬೆಂಗಳೂರಿನ ಸಂಜಯನಗರ ನಿವಾಸಕ್ಕೆ ತೆರಳಿ ಕೃತಜ್ಞತೆ ಸಲ್ಲಿಸಿದರು. pic.twitter.com/YpQhb6wnaz
— Karnataka Congress (@INCKarnataka) March 14, 2020