ಚಾಮರಾಜನಗರ: ಮೂಲ ಸೌಕರ್ಯಗಳನ್ನು ನೀಡುವುದಿಲ್ಲ ಎಂದು ಹೆದರಿಸುವುದು ಅಕ್ರಮ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಮರಾಜನಗರದ ಡಿಸಿ ಡಾ.ಎಂ.ಆರ್.ರವಿ ವಿರುದ್ಧ ಕಿಡಿ ಕಾರಿದ್ದರೆ.
ಲಸಿಕಾ ಅಭಿಯಾನಕ್ಕೆ ವೇಗ ನೀಡಲು “ನೋ ವ್ಯಾಕ್ಸಿನೇಷನ್- ನೋ ರೇಷನ್, ನೋ ಪೆನ್ಷನ್” ಎಂಬ ಜಾಗೃತಿ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ: ಫೋನ್ ಟ್ಯಾಪಿಂಗ್‍ನಲ್ಲಿ ಐಪಿಎಸ್ ಅಧಿಕಾರಿಗಳ ಫೈಟ್
ತಮ್ಮ ಫೇಸ್ ಬುಕ್ ನಲ್ಲಿ, ಕೋವಿಡ್ ಲಸಿಕೆ ಪಡೆಯದಿದ್ರೆ ಪಡಿತರ, ಪಿಂಚಣಿ ಎರಡೂ ಇಲ್ಲ ಎಂದು ಚಾಮರಾಜನಗರದಲ್ಲಿ ಬಿಜೆಪಿ ಸರ್ಕಾರ ಹೇಳುತ್ತಿದೆ. ಅಂದರೆ ಲಸಿಕೆಗಳು ಜನಸಂಖ್ಯೆಗೆ ಸಾಕಾಗುವಷ್ಟು ಇವೆಯಾ? ಲಸಿಕೆ ಪಡೆಯುವಂತೆ ಜನರ ಮನವೊಲಿಸಿದ್ದಾರಾ ಎಂದು ಪ್ರಶ್ನಿಸಿದ್ದಾರೆ.ಇದನ್ನೂ ಓದಿ:ಕಾರು ಅಪಘಾತಕ್ಕೂ ಮುನ್ನ ಮದ್ಯ ಖರೀದಿಸಿದ್ದ ಇಷಿತಾ, ಬಿಂದು
ಮೂಲ ಸೌಕರ್ಯಗಳಾದ ಆಹಾರ ಮತ್ತು ಪಿಂಚಣಿ ನೀಡುವುದಿಲ್ಲ ಎಂಬ ಹೆದರಿಸುವುದು ಅಕ್ರಮ. ಈ ರೀತಿ ಮಾಡುವುದು ಅನೈತಿಕ ಹಾಗೂ ಅಸಂವಿಧಾನಿಕ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಸರ್ಕಾರ ಹಾಗೂ ಚಾಮರಾಜನಗರ ಜಿಲ್ಲಾಡಳಿತಕ್ಕೆ ನಾಚಿಕೆಯಾಗಬೇಕು. ಆಕ್ಸಿಜನ್ ಪೂರೈಸಲು ಅಸಮರ್ಥರಾಗಿ ೩೬ ಅಮಾಯಕರ ಜೀವ ತೆಗೆದಿದ್ದಾರೆ. ಲಸಿಕೆ ಪಡೆಯದವರಿಗೆ ಶಿಕ್ಷಿಸಲು ಮುಂದಾಗಿರುವವರು ಮೊದಲು ಆಕ್ಸಿಜನ್, ಲಸಿಕೆ, ಪರೀಕ್ಷೆ ಹಾಗೂ ಮೃತರಿಗೆ ಸೂಕ್ತ ಪರಿಹಾರ ನೀಡದಿದ್ದಕ್ಕೆ ಕ್ಷಮೆ ಕೇಳಲಿ ಎಂದು ಅವರು ಬರೆದು ಪೋಸ್ಟ್ ಮಾಡಿದ್ದಾರೆ.ಇದನ್ನೂ ಓದಿ:85 ಗಂಟೆಯಲ್ಲಿ ಮೈಸೂರಿನ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ ನನ್ನ ಕೃತಜ್ಞತೆ: ಅರಗ ಜ್ಞಾನೇಂದ್ರ
ಲಸಿಕಾ ಅಭಿಯಾನಕ್ಕೆ ವೇಗ ನೀಡಲು ಮತ್ತು ಅಸಡ್ಡೆ ತೋರುವವರಿಗೆ ಬಿಸಿ ಮುಟ್ಟಿಸಲು ಲಸಿಕೆ ಪಡೆಯದಿದ್ದರೆ ಪಡಿತರ ಮತ್ತು ಪಿಂಚಣಿ ತಡೆ ಹಿಡಿಯುವ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿರುವ ಬಗ್ಗೆ ಈ ಹಿಂದೆ ಡಿಸಿ ರವಿ ಹೇಳಿದ್ದರು. ಅದಕ್ಕೆ ಡಿಕೆಶಿ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ:ಒಂದು ವರ್ಷದಿಂದ ಇವರು ಬಾಯಿ ಮುಚ್ಚಿದ್ರು: ಡಿಕೆಶಿ ವಿರುದ್ಧ ಅನಿಲ್ ಬೆನಕೆ ವಾಗ್ದಾಳಿ