– ಮೊಬೈಲ್ ಬಳಕೆ ಮಾಡಿದ್ರೆ ಕೇಸ್
ರಾಮನಗರ: ಯಾರಾದರೂ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ ಡಿಎಲ್ (Driving Licence) ರದ್ದು ಮಾಡುತ್ತೇವೆ. ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ, ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಹಾಗೂ ಮಿತಿ ಮೀರಿ ವಾಹನ ಚಾಲನೆ ಮಾಡಿದರೆ ಕೇಸ್ (Case) ಹಾಕುವ ಕೆಲಸ ಮಾಡುತ್ತೇವೆ ಎಂದು ಸಂಚಾರಿ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
Advertisement
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆ ಇಂದು ಎನ್‌ಹೆಚ್ ಅಧಿಕಾರಿಗಳ ಜೊತೆ ಅಲೋಕ್ ಕುಮಾರ್ ಹೆದ್ದಾರಿಯ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಈ ರಸ್ತೆಯಲ್ಲಿ ಬಹಳ ಬಾರಿ ಸಂಚರಿಸಿದ್ದೇನೆ. ಕಳೆದ ಐದಾರು ತಿಂಗಳಿನಿಂದ ರಾಮನಗರ (Ramanagara) ವ್ಯಾಪ್ತಿಯಲ್ಲಿ 58ಕ್ಕೂ ಹೆಚ್ಚು ಜನ ಮೃತ ಪಟ್ಟಿದ್ದಾರೆ. 48ಕ್ಕೂ ಹೆಚ್ಚು ಅಪಘಾತಗಳಾಗಿವೆ. ಎಲ್ಲೆಲ್ಲಿ ಅಪಘಾತ ನಡೆದಿದೆ ಆ ಸ್ಥಳಗಳ ಸಮಸ್ಯೆ ಬಗ್ಗೆ ಪರಿಶೀಲಿಸಿದ್ದೆವೆ. ಹೆದ್ದಾರಿಯಲ್ಲಿ ಆಗಮನ ಮತ್ತು ನಿರ್ಗಮನದ ಸಮಸ್ಯೆ ಇದೆ. ಕೆಲವೆಡೆ ರಸ್ತೆಯಲ್ಲಿ ತೀವ್ರ ತಿರುವುಗಳಿವೆ. ಇದರಿಂದ ವಾಹನಗಳು ಡಿವೈಡರ್ ಹಾರುತ್ತಿವೆ. ಹೈವೆಯಲ್ಲಿ ಲೇನ್ ಶಿಸ್ತನ್ನು ಬಳಸಬೇಕು. ಹೀಗಾಗಿ ಹೈವೇ ಪಟ್ರೋಲಿಂಗ್ (Patroling) ಅಗತ್ಯ ಇದೆ ಎಂದರು. ಇದನ್ನೂ ಓದಿ: ಬಿಜೆಪಿ ನಾಯಕರ ಬೀದಿ ಜಗಳ; ಅಚ್ಚರಿ ಮೂಡಿಸಿದ ಹೈಕಮಾಂಡ್ ಮೌನ
Advertisement
Advertisement
ಈಗಾಗಲೇ ನಾಲ್ಕು ಹೈವೇ ಪಟ್ರೊಲಿಂಗ್ ವಾಹನಗಳಲ್ಲಿ ಗಸ್ತು ಮಾಡಲಾಗುತ್ತಿದೆ. ಹೈ ಸ್ಪೀಡ್ ಲಿಮಿಟ್ ತಡೆಗೆ ಸ್ಪೀಡ್ ರೆಡಾರ್ (Speed Radar) ಅಳವಡಿಕೆ ಮಾಡುತ್ತೇವೆ. ಯಾರಾದರೂ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ ಡಿಎಲ್ ರದ್ದು ಮಾಡುತ್ತೇವೆ. ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ, ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಹಾಗೂ ಮಿತಿ ಮೀರಿ ವಾಹನ ಚಾಲನೆ ಮಾಡಿದರೆ ಕೇಸ್ ಹಾಕುವ ಕೆಲಸ ಮಾಡುತ್ತೇವೆ. ಸದ್ಯ ಕನಿಷ್ಠ 25% ರಷ್ಟು ಅಪಘಾತ ಕಡಿಮೆ ಮಾಡುವ ಗುರಿ ಇದೆ. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರಕ್ಕೆ ಸಲಹೆ, ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: LKGಯಿಂದ ಸ್ನಾತಕೋತ್ತರ ಪದವಿವರೆಗೂ ಕೆಂಪೇಗೌಡರ ಪಠ್ಯ ಸೇರಿಸಿ: ನಂಜಾವಧೂತ ಶ್ರೀ
Advertisement
ದಶಪಥ ಹೆದ್ದಾರಿಯಲ್ಲಿ ವಾಹನ ಸವಾರರು ನಿಯಮ ಪಾಲನೆ ಮಾಡಬೇಕು. ಅಮೂಲ್ಯವಾದ ಜೀವಕ್ಕಾಗಿ ನಿಧಾನವಾಗಿ ಚಲಿಸಿ. ನಮ್ಮ ಕುಟುಂಬಕ್ಕೆ ನಾವುಗಳೇ ಮುಖ್ಯ. ಹಾಗಾಗಿ ಸುಗಮ ಸಂಚಾರಕ್ಕೆ ಸೀಟ್ ಬೆಲ್ಟ್, ಇಂಡಿಕೇಟರ್ ಬಳಕೆ, ಸ್ಪೀಡ್ ಲಿಮಿಟ್‌ನಲ್ಲಿಯೇ ವಾಹನ ಚಲಾಯಿಸಬೇಕು. ದಶಪಥ ಹೆದ್ದಾರಿಯಲ್ಲಿ ಗರಿಷ್ಟ ಮಿತಿ 100 ಕಿ.ಮೀ ಇದೆ. ತಿರುವುಗಳಲ್ಲಿ 60- 80 ವೇಗ ಮಿತಿ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ: ರೇಣುಕಾಚಾರ್ಯ
ಹೆದ್ದಾರಿಯಲ್ಲಿ ಎನ್‌ಹೆಚ್ ಅಧಿಕಾರಿಗಳ ನ್ಯೂನ್ಯತೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮ ಸೂಚನೆಗಳನ್ನು ಹೈವೇ ಪ್ರಾಧಿಕಾರ ಪಾಲಿಸದಿದ್ದರೆ, ಅಧಿಕಾರಿಗಳ ಮೇಲೆ ಕ್ರಮ ವಹಿಸುತ್ತೇವೆ. ನಾವು ನೀಡಿರುವ ಕಾಲವಕಾಶವನ್ನು ಮೀರಿದರೆ, ಕ್ರಮ ಖಂಡಿತ ಎಂದರು. ಹೆದ್ದಾರಿ ಪ್ರಾಧಿಕಾರ ಅಂಬುಲೆನ್ಸ್, ಹೈವೆ ಪಟ್ರೋಲ್ ವ್ಯವಸ್ಥೆ ಮಾಡಬೇಕು. ಅಲ್ಲಲ್ಲಿ ತುರ್ತು ಗೇಟ್‌ಗಳನ್ನು ಸಿದ್ಧಪಡಿಸಬೇಕು. ಹಲವೆಡೆ ಸ್ಕೈವಾಕ್ ನಿರ್ಮಾಣ ಮಾಡಬೇಕು. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರಕ್ಕೆ ಒತ್ತಡವನ್ನು ಹೇರುತ್ತೇವೆ ಎಂದರು. ಇದನ್ನೂ ಓದಿ: ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿ: ಸಿದ್ದರಾಮಯ್ಯ