ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್(CM Vijay) ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ಡಿಎಂಕೆ ಶಾಸಕ ಅನಿತಾ ಆರ್.ರಾಧಾಕೃಷ್ಣನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮದ್ರಾಸ್ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.
ಕಳೆದ ಜೂನ್ 20ರಂದು ನಡೆದ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ವಿಜಯ್ ವಿರುದ್ಧ ರಾಧಾಕೃಷ್ಣನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಈ ಸಂಬಂಧ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ವೇಳೆ, ಜವಾಬ್ದಾರಿಯುತ ಜನಪ್ರತಿನಿಧಿಯಾಗಿರುವ ಶಾಸಕರು ಇಂತಹ ಹೇಳಿಕೆಗಳನ್ನು ನೀಡಬಾರದು. 1967ರಿಂದಲೂ ಜನರು ಸಿನಿಮಾ ಕ್ಷೇತ್ರದ ನಾಯಕರನ್ನು ರಾಜಕೀಯದಲ್ಲಿ ಆಯ್ಕೆ ಮಾಡುತ್ತಾ ಬಂದಿರುವಾಗ ಇಂತಹ ಹೇಳಿಕೆಗಳ ಅಗತ್ಯ ಇರಲಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಬೆಂಗಳೂರು | ಒಂದೇ ವಾರದಲ್ಲಿ ದೋಸೆಯಂತೆ ಕಿತ್ತು ಬಂದಿದೆ ರಸ್ತೆಗೆ ಹಾಕಿದ ಡಾಂಬರು
ಶಾಸಕನ ಬಂಧನವನ್ನು ಖಂಡಿಸಿ ಡಿಎಂಕೆ ಕಾರ್ಯಕರ್ತರು ವಿವಿಧೆಡೆ ಪ್ರತಿಭಟನೆ ನಡೆಸಿದ್ದಾರೆ. ಈ ಬೆಳವಣಿಗೆ ತಮಿಳುನಾಡು ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇದೇ ವೇಳೆ, ಟಿವಿಕೆ ಶಾಸಕರ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಪೊಲೀಸರು ಮತ್ತೊಮ್ಮೆ ಐವರನ್ನು ಬಂಧಿಸಿರುವುದಾಗಿ ವರದಿಯಾಗಿದೆ.ಇದನ್ನೂ ಓದಿ: ಬೆಂಗಳೂರಲ್ಲಿ ಹೊತ್ತಿ ಉರಿದ ಕೇರಳದ ಸಾರಿಗೆ ಬಸ್ – ಪ್ರಯಾಣಿಕರು ಪಾರು
