ಕೂದಲೆಳೆ ಅಂತರದಲ್ಲಿ ಪಾರಾದ DMK MP ರಾಜಾ

Public TV
1 Min Read
DMK MP A Raja narrowly escapes injury as stage lights collapse during public meeting in Mayiladuthurai Tamil Nadu

ಚೆನ್ನೈ:  ಮೈಲಾಡುತುರೈನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಡಿಎಂಕೆ ಸಂಸದ (DMK MP) ಎ ರಾಜಾ (A Raja) ಅವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಪಕ್ಷದ ಕಾರ್ಯಕ್ರಮದಲ್ಲಿ (Public Meeting) ವೇದಿಕೆಯಲ್ಲಿ ನಿಂತು ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಗಾಳಿ ಬೀಸುತ್ತಿತ್ತು. ಈ ವೇಳೆ ಬಲವಾದ ಗಾಳಿಯಿಂದಾಗಿ ವೇದಿಕೆಯ ಬಳಿ ಓವರ್‌ಹೆಡ್ ಫೋಕಸ್ ದೀಪಗಳು ಕುಸಿದು ಬಿದ್ದು ಡಯಾಜ್ ಮೇಲೆ ಬಿದ್ದಿದೆ. ಇದನ್ನೂ ಓದಿ: ಪಾಕಿಸ್ತಾನದ ಬುಡಕ್ಕೆ `ಜಲ’ಬಾಂಬ್ ಹಾಕಿದ ಭಾರತ!

ಫೋಕಸ್‌ ದೀಪಗಳು ಬೀಳುವುದನ್ನು ನೋಡಿದ್ದ ರಾಜಾ ಅವರು ತಮ್ಮ ಎಡಗಡೆ ಸರಿದ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ. ಒಂದು ವೇಳೆ ಅವರು ಭಾಷಣ ಮಾಡುತ್ತಲೇ ಇರುತ್ತಿದ್ದರೆ ಗಾಯಗೊಳ್ಳುವ ಸಾಧ್ಯತೆ ಇತ್ತು. ಓವರ್‌ಹೆಡ್ ಫೋಕಸ್ ದೀಪಗಳು ಕುಸಿದು ಡಯಾಜ್ ಮೇಲೆ ಬೀಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: ದೊಡ್ಡ ದುರಂತ ತಪ್ಪಿಸಿದ ಭಾರತೀಯ ಸೇನೆ – 5 ಜೀವಂತ ಬಾಂಬ್ ವಶಕ್ಕೆ

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಜನ್ಮದಿನ ಮತ್ತು ರಾಜ್ಯಪಾಲರ ವಿಷಯದಲ್ಲಿ ಪಕ್ಷದ ಕಾನೂನು ವಿಜಯವನ್ನು ಆಚರಿಸಲು ಡಿಎಂಕೆ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

Share This Article