ಶಿವಮೊಗ್ಗ: ಗ್ರಹಣದ ಸಮಯದಲ್ಲಿ ಯಾವುದೇ ಶುಭ ಕಾರ್ಯ ಮಾಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
ಜುಲೈ 27 ರಂದು ಸಂಭವಿಸಲಿರುವ ಗ್ರಹಣ ಅತ್ಯಂತ ಕೆಟ್ಟದ್ದು ಎಂದು ಹೇಳಲಾಗುತ್ತಿದೆ. ಗ್ರಹಣದ ಸಮಯದಲ್ಲಿ ಯಾವುದೇ ಅವಘಡಗಳು ಸಂಭವಿಸದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುವುದೊಂದನ್ನು ಬಿಟ್ಟು ಬೇರೆ ದಾರಿ ಇಲ್ಲ. ರಾಜ್ಯದ ಜನರೂ ಸಹ ಗ್ರಹಣದ ಬಗ್ಗೆ ಎಚ್ಚರ ವಹಿಸಬೇಕು. ಗ್ರಹಣ ಕಳೆದ ಬಳಿಕ ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
Advertisement
ರಾಜ್ಯ ಸರ್ಕಾರ ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತ ಪತ್ರ ಹೊರಡಿಸಿ ಜನರಿಗೆ ರಾಜ್ಯದ ವಾಸ್ತವ ಸ್ಥಿತಿ ತಿಳಿಸಬೇಕು. ಈ ಶ್ವೇತ ಪತ್ರದಿಂದ ಕಳೆದ ಸರ್ಕಾರದ ಅವಧಿಯ ಆಡಳಿತ ಹೇಗಿತ್ತು ಎಂಬುದು ತಿಳಿಯುತ್ತದೆ. ಐಫೋನ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ನಮ್ಮ ಸಂಸದರು ಈ ಐಫೋನ್ ಗಿಫ್ಟ್ ಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Advertisement
ಪ್ರತ್ಯೇಕ ರಾಜ್ಯದ ಕೂಗಿಗೆ ನನ್ನ ಸಹಮತ ಇಲ್ಲ. ಪ್ರತ್ಯೇಕ ರಾಜ್ಯದ ಬಗ್ಗೆ ಯಾರೂ ಮಾತನಾಡಬಾರದು. ಅಭಿವೃದ್ಧಿ ಕೆಲಸ ಆಗಿಲ್ಲ ಅಂದರೆ ಹೋರಾಟ ಮಾಡಿ ಅಭಿವೃದ್ಧಿ ಕೆಲಸ ಮಾಡಿಸಿಕೊಳ್ಳಬೇಕು. ಅದನ್ನು ಬಿಟ್ಟು ಪ್ರತ್ಯೇಕ ರಾಜ್ಯ ಎಂದು ಹೇಳಿಕೆ ನೀಡುವುದು ಸರಿಯಲ್ಲ. ಯಾವುದೇ ಪಕ್ಷದವರೂ ಹೀಗೆ ಹೇಳಿದರೂ ಅದು ತಪ್ಪು ಎಂದು ಯಡಿಯೂರಪ್ಪ ಹೇಳಿದದರು.
Advertisement