ಬೆಂಗಳೂರು: ಪಲ್ಸ್ ಪೋಲಿಯೋ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವದಂತಿ ಸುಳ್ಳು ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಈ ಸಂಬಂಧ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಸುಳ್ಳು ಸುದ್ದಿಗೆ ಕಿವಿಗೊಡದಂತೆ ಸಾರ್ಜಜನಿಕರಿಗೆ ಮನವಿ ಮಾಡಿಕೊಂಡಿದೆ. ಪೋಷಕರು ಯಾವುದೇ ಆತಂಕವಿಲ್ಲದೇ ಮಕ್ಕಳಿಗೆ ಲಸಿಕೆ ಹಾಕಿಸಬಹುದು ಎಂದು ತಿಳಿಸಲಾಗಿದೆ.
Advertisement
ಪೋಲಿಯೋ ಹನಿ ಬಗ್ಗೆ ಸೆಪ್ಟೆಂಬರ್ 20ರಂದು ಸಾಮಾಜಿಕ ಜಾಲತಾಣ ವಾಟ್ಸಪ್‍ನಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗಿತ್ತು. “ದಯಮಾಡಿ ಬೇಗ ಶೇರ್ ಮಾಡಿ, ನಾಳೆ 5 ವರ್ಷದ ಒಳಗೆ ಇರುವ ಮಕ್ಕಳಿಗೆ ಪೋಲಿಯೋ ಹಾಕಿಸ ಬೇಡಿ ಅದರಲ್ಲಿ ವೈರಸ್ ಬೆರೆಸಿರುತ್ತದೆ. ಪೋಲಿಯೋ ತಯಾರು ಮಾಡಿದ ಆ ಕಂಪನಿ ಯಜಮಾನರನ್ನು ಅರೆಸ್ಟ್ ಮಾಡಿದ್ದಾರೆ. ದಯಮಾಡಿ ಎಲ್ಲರಿಗೂ ತುರ್ತು ಶೇರ್ ಮಾಡಿ ಸತ್ಯ, ಸತ್ಯ” ಎಂಬ ಸುಳ್ಳು ಸಂದೇಶ ವಾಟ್ಸಪ್‍ನಲ್ಲಿ ಹರಿದಾಡುತ್ತಿತ್ತು. ಈ ರೀತಿಯ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಕೊಡಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.
Advertisement
Advertisement
ಪಲ್ಸ್ ಪೋಲಿಯೋ ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, 2014ರಲ್ಲಿ ಭಾರತವು ವಿಶ್ವಸಂಸ್ಥೆಯಿಂದ ಪೋಲಿಯೋ ಮುಕ್ತ ರಾಷ್ಟ್ರ ಎಂಬ ಬಿರುದು ಪಡೆದುಕೊಂಡಿದೆ. ಈ ಕುರಿತು ಸುಳ್ಳು ವದಂತಿ ಹೊರಡಿಸಬಾರದು ಎಂಬ ನಿದರ್ಶನ ನೀಡಲಾಗಿದೆ. ಆದರೂ ಅಪಪ್ರಚಾರ ನಡೆಯುತ್ತಿದೆ. ಪೋಷಕರು ಯಾವುದೇ ಆತಂಕವಿಲ್ಲದೇ ಲಸಿಕೆ ಹಾಕಿಸಬಹುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Advertisement
ಈ ಸಂಬಂಧ ಮಾಹಿತಿಯನ್ನು ಜಿಲ್ಲೆಯ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಜೊತೆಗೆ ಅಂಗನವಾಡಿ ಫಲಾನುಭವಿಗಳಿಗೆ ಹಾಗೂ ಪೋಷಕರಿಗೆ ತಿಳಿಸಲು ಸೂಕ್ತ ಕ್ರಮವಹಿಸುವಂತೆ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ, ಮೇಲ್ವಿಚಾರಕಿಯರಿಗೆ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸೂಚಿಸಲು ಕೋರಿ ಸುತ್ತೋಲೆ ಹೊರಡಿಸಲಾಗಿದೆ.