– ಯುವಜನರನ್ನ ದಾರಿ ತಪ್ಪಿಸಲಾಗುತ್ತಿದೆ ಎಂದು ಕಳವಳ
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಎನ್‌ಡಿಎ ಸಂಸದರಿಗೆ (NDA MPs) ಮಹತ್ವದ ಸಂದೇಶ ನೀಡಿದ್ದಾರೆ. ʻಮಕ್ಕಳನ್ನ ಪ್ರಚೋದಿಸಬೇಡಿ, ಅವರಿಗೆ ಸರಿಯಾದ ದಾರಿ ತೋರಿಸಿʼ ಎಂದು ಅವರು ಕರೆ ನೀಡಿದ್ದಾರೆ.
ಮಂಗಳವಾರ ಸಂಸತ್ ಗ್ರಂಥಾಲಯ ಕಟ್ಟಡದ ಜಿಎಂಸಿ ಬಾಲಯೋಗಿ ಸಭಾಂಗಣದಲ್ಲಿ ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಮೋದಿ ಅವರು, ʻತಪ್ಪು ದಾರಿಗೆ ಹೋಗುವುದು ಸುಲಭ. ಆದರೆ ಮತ್ತೆ ಸರಿಯಾದ ದಾರಿಗೆ ಮರಳುವುದು ತುಂಬಾ ಕಷ್ಟ. ಅವರನ್ನ ಸರಿಯಾದ ಮಾರ್ಗಕ್ಕೆ ಕರೆತರುವುದು ನಮ್ಮ ಜವಾಬ್ದಾರಿʼ ಎಂದು ಹೇಳಿದ್ದಾರೆ. ಇದನ್ನೂ ಓದಿ: NEET ಪೇಪರ್ ಲೀಕ್| ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ – ಮೋದಿ

ಯುವಜನರನ್ನ ದಾರಿ ತಪ್ಪಿಸಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಪ್ರಧಾನಿ, ʻಯುವಕರನ್ನು ಪ್ರಚೋದಿಸುವ ಬದಲು ಅವರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕುʼ ಎಂದು ಸಂಸದರಿಗೆ ಸಲಹೆ ನೀಡಿದ್ದಾರೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ (NEET Paper Scam) ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಕಾಕ್ರೋಚ್ ಜನತಾ ಪಕ್ಷ (CJP) ಪ್ರತಿನಿಧಿಗಳೊಂದಿಗೆ ಸೋಮವಾರ ಸಭೆ ನಡೆಸಿದರು. ಇದನ್ನೂ ಓದಿ: ಪ್ರಧಾನಿ ನಿವಾಸದ ಎದುರು ರಾಹುಲ್, ಪ್ರಿಯಾಂಕಾ ಧರಣಿ – ಮೋದಿ, ಅಮಿತ್ ಶಾ, ಪ್ರಧಾನ್ ರಾಜೀನಾಮೆಗೆ ಪಟ್ಟು

ಸಿಜೆಪಿ ಮುಖಂಡರಾದ ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಅವರು ಸಚಿವರ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಮಂಡಿಸಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಬೇಕು, ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಹಾಗೂ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನ ಬಿಡುಗಡೆ ಮಾಡಬೇಕು ಎಂಬುದು ಅವರ ಪ್ರಮುಖ ಒತ್ತಾಯವಾಗಿತ್ತು. ಇದನ್ನೂ ಓದಿ: ಅಮೆರಿಕ–ಭಾರತ ವ್ಯಾಪಾರ ಒಪ್ಪಂದ ವಿರೋಧಿಸಿ `ದೆಹಲಿ ಚಲೋ’ – ಕಟ್ಟೆಯೊಡೆದ ರೈತರ ಆಕ್ರೋಶ, ಶಂಭು ಗಡಿ ಸೀಲ್
