ಮೈಸೂರು: ಮೈಸೂರು (Mysuru) ಬಿಟ್ಟು ಹೊರಗಡೆ ತೆರಳದಂತೆ ಮನೋರಂಜನ್ (Manoranjan) ಕುಟುಂಬಕ್ಕೆ ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ನಮ್ಮ ಸೂಚನೆ ಬರುವವರೆಗೂ ಮೈಸೂರಿನಿಂದ ಹೊರಗಡೆ ತೆರಳಬೇಡಿ. ತೀರಾ ತುರ್ತು ಇದ್ದರೆ ನಮ್ಮ ಗಮನಕ್ಕೆ ತಂದು ಅನುಮತಿಯ ಮೇಲೆ ತೆರಳಿ. ಮನೆಗೆ ಯಾವ ಸಂಬಂಧಿಕರೂ ಸಧ್ಯಕ್ಕೆ ಬಾರದಂತೆ ಸೂಚನೆ ಕೊಡಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಮಗ ಕ್ರಾಂತಿಕಾರಿ ಪುಸ್ತಕಗಳಿಂದ ಪ್ರಭಾವಿತನಾಗಿದ್ದ, ಸಮಾಜ ಸೇವೆ ಮಾಡುವ ಹಂಬಲವಿತ್ತು – ಮನೋರಂಜನ್ ತಂದೆ ಬೇಸರ
Advertisement
Advertisement
ನಮ್ಮ ಅನುಮತಿ ಸಿಗುವವರೆಗೂ ಮನೆಗೆ ಯಾವ ಸಂಬಂಧಿಕರು ಬರುವುದು ಬೇಡ. ಪ್ರತಿ ನಿತ್ಯ ನಿಮಗೆ ಬರುವ ಅನಾಮಾದೇಯ ಕರೆಗಳ ಮಾಹಿತಿಯನ್ನ ಕಡ್ಡಾಯವಾಗಿ ಕೊಡಿ. ಎಲ್ಲಾ ಅನಾಮಧೇಯ ಕರೆಗಳನ್ನ ತಪ್ಪದೇ ಸ್ವೀಕರಿಸಿ ಎಂದು ಸಲಹೆ ನೀಡಿದ್ದಾರೆ.
Advertisement
ಕರೆಗಳಿಗೆ ಸಂಬಂಧಿಸಿದಂತೆ ನಮಗೆ ಎಲ್ಲಾ ಮಾಹಿತಿಯನ್ನ ಕೊಡಿ. ನಮ್ಮ ಸೂಚನೆ ಬರುವವರೆಗೂ ಯಾವುದೇ ಪತ್ರಿಕೆ, ಹಳೇ ಪುಸ್ತಕ ಇದ್ಯಾವುದನ್ನ ಮಾರಕೂಡದು ಎಂದು ಮನೋರಂಜನ್ ಪೋಷಕರಿಗೆ ಗುಪ್ತಚರ ಇಲಾಖೆ ಸೂಚಿಸಿದೆ. ಇದನ್ನೂ ಓದಿ: ಒಂದಲ್ಲ ಮೂರು ಬಾರಿ ಮನೋರಂಜನ್‌ಗೆ ಪ್ರತಾಪ್ ಸಿಂಹ ಕಚೇರಿಯಿಂದ ಸಿಕ್ಕಿತ್ತು ಪಾಸ್!
Advertisement
ಲೋಕಸಭಾ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಮನೋರಂಜನ್ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಸತ್ತಿನ ಸಂದರ್ಶಕರ ಗ್ಯಾಲರಿಗೆ ಸ್ಮೋಕ್ ಬಾಂಬ್ ಸಾಗಿಸಿದ್ದ ಸಾಗರ್ ಶರ್ಮಾ ಮತ್ತು ಮನೋರಂಜನ್‌ಗೆ ಪಾಸ್ ನೀಡಿದ್ದರಿಂದ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧವೂ ವಿಪಕ್ಷಗಳು ಟೀಕಾಪ್ರಹಾರ ನಡೆಸಿವೆ. ಅವರನ್ನು ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿವೆ.
ಲೋಕಸಭಾ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದಿವೆ. ಬಂಧಿತರ ವಿಚಾರವಾಗಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರ ಜೋರಾಗಿದೆ. ಇದನ್ನೂ ಓದಿ: ಸಂಸತ್ ಸ್ಮೋಕ್ ಬಾಂಬ್ ಕೇಸ್ – ಟಿಎಂಸಿ ಶಾಸಕನ ಜೊತೆ ಆರೋಪಿ – ಫೋಟೋ ಹರಿಬಿಟ್ಟ ಬಿಜೆಪಿ