ಬುಲೆಟ್‌ ರೈಲು ಎಲ್ಲಿ- ಅಟಲ್‌ ಸೇತುವನ್ನು ಹೊಗಳಿದ್ದ ರಶ್ಮಿಕಾಗೆ ಅಂಜಲಿ ನಿಂಬಾಳ್ಕರ್‌ ಪ್ರಶ್ನೆ

Public TV
3 Min Read
rashmika mandanna Anjali Nimbalkar

ಬೆಂಗಳೂರು: ಮೂಲಭೂತ ಸೌಕರ್ಯ ಕ್ಷೇತ್ರದಲ್ಲಿ ಮೋದಿ ಸರ್ಕಾರದ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದ ನಟಿ ರಶ್ಮಿಕಾ ಮಂದಣ್ಣ (Rashmika Mandnna) ಅವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ (Anjali Nimbalkar) ಅವರು ಬುಲೆಟ್ ರೈಲಿನ (Bullet Rail) ಬಗ್ಗೆ ಏನಾದರೂ ಹೇಳಲು ಇದ್ಯಾ ಎಂದು ಪ್ರಶ್ನಿಸಿದ್ದಾರೆ.

ಮುಂಬೈ – ಅಹಮದಾಬಾದ್ (Mubai-Ahmedabad) ಬುಲೆಟ್ ರೈಲು ಯೋಜನೆ ದುರಂತ. ಬೂಟ್ ನೆಕ್ಕುವುದನ್ನು ನಿಲ್ಲಿಸಿ. ಮೆಗಾಸ್ಟಾರ್ ಮಾಡಲು ಇದು ನಿಮಗೆ ಸಹಾಯ ಮಾಡುವುದಿಲ್ಲ ಎಂದು ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: 60 ವರ್ಷದ ಕನಸಿನ ಯೋಜನೆ – ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ

 

ರಶ್ಮಿಕಾ ಹೇಳಿದ್ದೇನು?
ಪ್ರಧಾನಿ ಮೋದಿ (PM Narendra Modi) ಅವರಿಂದ ಉದ್ಘಾಟನೆಗೊಂಡ ದೇಶದ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (ಮುಂಬೈ ಟ್ರಾನ್ಸ್‌ ಹಾರ್ಬರ್‌ ಲಿಂಕ್‌) ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ರಶ್ಮಿಕಾ ಮಂದಣ್ಣ ಪ್ರಶಂಸೆ ವ್ಯಕ್ತಪಡಿಸಿದ್ದರು.

ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು. ಈಗ ಅದು 20 ನಿಮಿಷಗಳಿಗೆ ಇಳಿದಿದೆ. ಯೋಚಿಸಿದರೆ ಅಸಾಧ್ಯ ಎನಿಸುತ್ತದೆ. ಅದನ್ನು ಸಾಧಿಸಿ ತೋರಿಸಿದ್ದಾರೆ. ಗೋವಾದಿಂದ ಮುಂಬೈಗೆ, ಬೆಂಗಳೂರಿನಿಂದ ಮುಂಬೈ ರಸ್ತೆ ಹಾಗೂ ಇನ್ನಿತರೆ ಮೂಲಸೌಕರ್ಯಗಳು ಅಭಿವೃದ್ಧಿಯಾಗುತ್ತಿರುವ ರೀತಿ ನೋಡಿದರೆ ಹೆಮ್ಮೆ ಎನಿಸುತ್ತದೆ ಎಂದು ನಟಿ ಮಾತನಾಡಿದ್ದರು.

ಭಾರತ ಈಗ ವೇಗವಾಗಿ ಸಾಗುತ್ತಿದೆ. ಎಲ್ಲೂ ನಿಲ್ಲುತ್ತಿಲ್ಲ. ಕಳೆದ 10 ವರ್ಷಗಳಲ್ಲಿ ಭಾರತ ಅದ್ಭುತವಾದ ಅಭಿವೃದ್ಧಿಯನ್ನು ಸಾಧಿಸಿದೆ. ಪ್ರಗತಿ ಎಂಬುದು ಬಹಳ ವೇಗವಾಗಿ ಆಗುತ್ತಿದೆ. ಈ ಅಟಲ್ ಸೇತು ಕೇವಲ ಏಳು ವರ್ಷಗಳಲ್ಲಿ ಮುಗಿದಿದೆಯಂತೆ. ಹೊಸ ಭಾರತ ಉದಯವಾಗುತ್ತಿದೆ. ಭಾರತ ವಿಶ್ವದ ಬುದ್ಧಿವಂತ ದೇಶ ಎಂದು ಹೇಳಲು ಬಯಸುತ್ತೇನೆ. ಭಾರತದ ಯುವಕರು ಜವಾಬ್ದಾರಿಯುತವಾಗಿ ಮತ ಹಾಕಬೇಕು. ನಮ್ಮ ದೇಶ ಸಾಧಿಸುತ್ತಿರುವ ಪ್ರಗತಿ ನಿಲ್ಲಬಾರದು. ಹಾಗಾಗಿ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಬೇಕು ಎಂದು ನಟಿ ಮಾತನಾಡಿದ್ದರು. ಈ ಮೂಲಕ ನರೇಂದ್ರ ಮೋದಿ ಅವರ ಸಾಧನೆಯನ್ನು ನಟಿ ಕೊಂಡಾಡಿದ್ದರು.


ಮೋದಿ ಮೆಚ್ಚುಗೆ
ಅಟಲ್‌ ಸೇತು ಬಗ್ಗೆ ನಟಿ ಹೆಮ್ಮೆಯ ಮಾತುಗಳನ್ನಾಡಿರುವ ವೀಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದ ಮೋದಿ, ಜನರನ್ನು ಸಂಪರ್ಕಿಸುವುದು ಮತ್ತು ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದೇನೂ ಇಲ್ಲ ಎಂದು ಪ್ರತಿಕ್ರಿಯಿಸಿದ್ದರು.

PM Narendra Modi to inaugurate Indias longest sea bridge Mumbai Trans Harbour Link today Know all about Atal Setu 11

ಏನಿದು ಬುಲೆಟ್‌ ರೈಲು ಯೋಜನೆ?
ಅಹಮದಾಬಾದ್‌-ಮುಂಬೈ ಮಧ್ಯೆ 2023ಕ್ಕೆ ಬುಲೆಟ್‌ ರೈಲು (Bullet Rail) ಭಾರತದಲ್ಲಿ ಸಂಚರಿಸಲಿದೆ ಎಂದು ಮೋದಿ ಹೇಳಿದ್ದರು. ಈಗ ಈ ಯೋಜನೆಯ ಡೆಡ್‌ಲೈನ್‌ ಮುಂದಕ್ಕೆ ಹೋಗಿದೆ. ಆರಂಭದಲ್ಲಿ ಭೂಸ್ವಾಧೀನ ವಿಳಂಬವಾಗಿತ್ತು. ನಂತರ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರ ಅಸ್ವಿತ್ವಕ್ಕೆ ಬಂದಿತ್ತು. 2019 ಬುಲೆಟ್‌ ರೈಲು ಯೋಜನೆಗೆ ಮಿತ್ರ ಪಕ್ಷವಾದ ಎನ್‌ಸಿಪಿ ವಿರೋಧ ವ್ಯಕ್ತಪಡಿಸಿ ಈ ಯೋಜನೆಯನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿತ್ತು. ಕೋವಿಡ್‌ ಕಾರಣದಿಂದ ಮತ್ತಷ್ಟು ವಿಳಂಬವಾಯಿತು. ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ಬಂದ ನಂತರ ಬುಲೆಟ್‌ ರೈಲು ಯೋಜನೆ ಕೆಲಸ ಚುರುಕು ಪಡೆದಿದೆ.

Share This Article