ಕ್ಲಿನಿಕ್‌ನಲ್ಲಿ ಬೆಂಕಿ – ವೈದ್ಯ, ಆತನ ಇಬ್ಬರು ಮಕ್ಕಳು ದಾರುಣ ಸಾವು

Public TV
1 Min Read
andhra pradesh clinic doctor fire

ಅಮರಾವತಿ: ಕ್ಲಿನಿಕ್ (Clinic) ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ವೈದ್ಯ (Doctor) ಹಾಗೂ ಆತನ ಇಬ್ಬರು ಮಕ್ಕಳು (Children)ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ (Andhra Pradesh) ತಿರುಪತಿ ಜಿಲ್ಲೆ ರೇಣಿಗುಂಟಾ ಪ್ರದೇಶದಲ್ಲಿ ಭಾನುವಾರ ನಡೆದಿದೆ.

ಇಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ವೈದ್ಯನ ಮನೆಯ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ರೇಣಿಗುಂಟಾ ಪೊಲೀಸರು (Renigunta Police) ತಿಳಿಸಿದ್ದಾರೆ.

andhra pradesh clinic doctor fire 1

ವರದಿಗಳ ಪ್ರಕಾರ ವೈದ್ಯನ ಮನೆಯ ನೆಲದ ಮಹಡಿಯನ್ನು ಕ್ಲಿನಿಕ್ ಆಗಿ ಮಾಡಿಕೊಳ್ಳಲಾಗಿತ್ತು. ಕಟ್ಟಡದ ಮೊದಲ ಹಾಗೂ 2ನೇ ಮಹಡಿಯಲ್ಲಿ ವೈದ್ಯನ ಕುಟುಂಬ ವಾಸವಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆಯಿಂದ ಕ್ರಮ: ಸುಧಾಕರ್

ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ರಕ್ಷಣಾ ಕಾರ್ಯದಲ್ಲಿ ವೈದ್ಯನ ಪತ್ನಿ ಹಾಗೂ ತಾಯಿಯನ್ನು ರಕ್ಷಿಸಲಾಗಿದೆ. ಗಂಭೀರ ಸುಟ್ಟ ಗಾಯಗಳಿಂದ ಡಾ. ರವಿ ಶಂಕರ್, ಅವರ 12 ವರ್ಷದ ಮಗ ಹಾಗೂ 7 ವರ್ಷದ ಮಗಳು ಸಾವನ್ನಪ್ಪಿದ್ದಾರೆ.

Police Jeep

ಘಟನೆಯ ಬಗ್ಗೆ ರೇಣಿಗುಂಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: PFI ಶಂಕಿತರ ಮೊಬೈಲ್‌ನಲ್ಲಿತ್ತು ಸಾಕ್ಷಿಗಳನ್ನೇ ನಾಶ ಮಾಡುವ ಆಪ್

Live Tv
[brid partner=56869869 player=32851 video=960834 autoplay=true]

Share This Article