Connect with us

Karnataka

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯನಿಂದ ಲೈಂಗಿಕ ಕಿರುಕುಳ

Published

on

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ರೋಗಿಗೆ ಅಪರಿಚಿತ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

ಸಂತ್ರಸ್ತೆ ವಿಕ್ಟೋರಿಯಾ ಆಸ್ಪತ್ರೆ ಮುಖ್ಯಸ್ಥ ಡಾ.ಬಾಲಾಜಿ ಪೈ ಅವರಲ್ಲಿ ದೂರು ನೀಡಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಬಾಲಾಜಿ ಪೈ ವಿವಿ ಪುರಂ ಠಾಣೆಗೆ ದೂರು ನೀಡಿದ್ದು, ಅಪರಿಚಿತ ವೈದ್ಯನ ವಿರುದ್ಧ ಐಪಿಸಿ ಸೆಕ್ಷನ್‌ 354(ಲೈಂಗಿಕ ಕಿರುಕುಳ) ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಕ್ವಾರಂಟೈನ್

ಟ್ರಾಮಾ ಕೇರ್ ಸೆಂಟರ್ ಕೋವಿಡ್ 19 ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತೆಗೆ ಜುಲೈ 25 ಶನಿವಾರ ರಾತ್ರಿ 10 ಗಂಟೆಗೆ ಅಪರಿಚಿತ ವೈದ್ಯ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವಿಚಾರವನ್ನು ಮಹಿಳೆ ಟ್ರಾಮಾ ಕೇರ್‌ ಸೆಂಟರ್‌ನ ನೋಡಲ್‌ ಅಧಿಕಾರಿ ಅಸಿಮಾ ಬಾನು ಅವರಿಗೆ ವಾಟ್ಸಾಪ್‌ ಮಾಡಿ ಮಾಹಿತಿ ನೀಡಿದ ಬಳಿಕ ಲೈಂಗಿಕ ಕಿರುಕುಳ ವಿಚಾರ ಬೆಳಕಿಗೆ ಬಂದಿದೆ.

Click to comment

Leave a Reply

Your email address will not be published. Required fields are marked *