ಲಕ್ನೋ: ವೈದ್ಯನೊಬ್ಬ (Doctor) ತನ್ನ ಪತ್ನಿಯನ್ನು (Wife) ಕೊಂದು, ಆಕೆಯ ದೇಹವನ್ನು ಸೂಟ್‍ಕೇಸ್‍ನಲ್ಲಿ ತುಂಬಿಕೊಂಡು ಸುಮಾರು 400 ಕಿ.ಮೀ ದೂರದಲ್ಲಿ ಸುಟ್ಟು ಹಾಕಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಉತ್ತರ ಪ್ರದೇಶದ ಲಖಿಂಪುರ ಖೇರಿಯ ವಂದನಾ ಅವಸ್ತಿ ಎಂದು ಗುರುತಿಸಲಾಗಿದೆ. ವಂದನಾ ಅವಸ್ತಿ ಪತಿ ಅಭಿಷೇಕ್ ಅವಸ್ತಿ ಆಯುರ್ವೇದದ ವೈದ್ಯನಾಗಿದ್ದ. ಈತ ತನ್ನ ತಂದೆ ಗೌರಿಶಂಕರ್ ಅವಸ್ತಿಯೊಂದಿಗೆ ಜಗಳ ಮಾಡುತ್ತಿದ್ದ ಸಂದರ್ಭದಲ್ಲಿ ಪತ್ನಿ ವಂದನಾಗೆ ಭಾರದ ವಸ್ತುವಿನಿಂದ ತಲೆಗೆ ಹೊಡೆದಿದ್ದಾನೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ವಂದನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಇದಾದ ಬಳಿಕ ವಂದನಾಳ ಮೃತದೇಹವನ್ನು ಅಭಿಷೇಕ್ ಸೂಟ್‍ಕೇಸ್‍ನಲ್ಲಿ ಲಾಕ್ ಮಾಡಿ, ತನ್ನ ಆಸ್ಪತ್ರೆಯ ಅಂಬುಲೆನ್ಸ್‌ನಲ್ಲಿ ಶವವನ್ನು ಸುಮಾರು 400 ಕಿ.ಮೀ ದೂರದ ಗಢ್ ಮುಕ್ತೇಶ್ವರಕ್ಕೆ ತೆಗೆದುಕೊಂಡು ಹೋಗಿ ಸುಟ್ಟು ಹಾಕಿದ್ದಾನೆ.
ಅದಾದ ಬಳಿಕ ನವೆಂಬರ್ 27ರಂದು ಕೊತ್ವಾಲಿ ಸದರ್ ಪೊಲೀಸ್ ಠಾಣೆಗೆ ಹೋಗಿರುವ ಅಭಿಷೇಕ್ ತನ್ನ ಪತ್ನಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದಾನೆ. ಅಷ್ಟೇ ಅಲ್ಲದೇ ವಂದನಾ ಕೆಲವು ಬೆಲೆಬಾಳುವ ವಸ್ತುಗಳೊಂದಿಗೆ ಮನೆಯಿಂದ ಬಿಟ್ಟು ಹೋಗಿದ್ದಾಳೆ ಎಂದು ದೂರಿನಲ್ಲಿ ದಾಖಲಿಸಲಾಗಿತ್ತು. ಇದನ್ನೂ ಓದಿ: ಕಸ್ಟಡಿಯಲ್ಲಿ ಆರೋಪಿ ಆತ್ಮಹತ್ಯೆ ಪ್ರಕರಣ – ಸಿಬಿಐ ಅಧಿಕಾರಿಗಳ ವಿರುದ್ಧ ಕೊಲೆ ಕೇಸ್ ದಾಖಲು
ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ವೇಳೆ ದಂಪತಿ ಮಧ್ಯೆ ವೈವಾಹಿಕ ಸಮಸ್ಯೆ ಇರುವುದು ಬೆಳಕಿಗೆ ಬಂದಿದೆ. ಆರೋಪಿ ಅಭಿಷೇಕ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಭಿಷೇಕ್ ತನ್ನ ತಂದೆಯೊಂದಿಗೆ ಸೇರಿ ವಂದನಾಳನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. (Arrest) ಇದನ್ನೂ ಓದಿ: ಸಿಎಂ ಸ್ಟಾಲಿನ್ ಪುತ್ರ ತಮಿಳುನಾಡಿನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ