ಚೆನ್ನೈ: ತಮಿಳುನಾಡಿನ (Tamil Nadu) ಕೊಯಮತ್ತೂರಿನ (Coimbatore) ಮೆಡಿಕಲ್ ಕಾಲೇಜಿನ ವಾಶ್ ರೂಮ್‌ನಲ್ಲಿ ಪೆನ್ ಕ್ಯಾಮೆರಾ ಇಟ್ಟ ಆರೋಪದ ಮೇಲೆ ಓರ್ವ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಡಾ. ವೆಂಕಟೇಶ್ (33) ಎಂದು ತಿಳಿದು ಬಂದಿದೆ. ಬಂಧಿತ ಆರೋಪಿ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ನಡೆಸುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.
Advertisement
Advertisement
ಮಹಿಳಾ ವೈದ್ಯರೊಬ್ಬರಿಗೆ ವಾಶ್‌ರೂಮ್‌ನಲ್ಲಿ ಕ್ಯಾಮೆರಾ ಇರುವುದು ಕಂಡು ಬಂದಿದೆ. ಅವರು ಈ ವಿಚಾರವನ್ನು ಕಾಲೇಜಿನ ಆಡಳಿತ ಮಂಡಳಿಗೆ ತಿಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಹಿಡನ್ ಕ್ಯಾಮೆರಾ (Hidden Camera) ಮತ್ತು ಅದರ ಮೆಮೊರಿ ಕಾರ್ಡ್‌ನ್ನು ವಶಪಡಿಸಿಕೊಂಡಿದ್ದಾರೆ.
Advertisement
Advertisement
ಆರೋಪಿ ವಿರುದ್ಧ ಐಟಿ ಕಾಯ್ದೆ ಮತ್ತು ಭಾರತ ನ್ಯಾಯ ಸಂಹಿತಾ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.