ನವದೆಹಲಿ: ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್) ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯೆ ಮೇಲೆ ಬರ್ತ್‍ಡೇ ಪಾರ್ಟಿಯಲ್ಲಿ ತನ್ನ ಹಿರಿಯ ಸಹೋದ್ಯೋಗಿ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿದ್ದಾರೆ.
ಸೆಪ್ಟೆಂಬರ್ 26ರಂದು ಈ ಘಟನೆ ನಡೆದಿದ್ದು, ಅಕ್ಟೋಬರ್ 11 ರಂದು ಈ ಬಗ್ಗೆ ಮಾಹಿತಿ ದೊರೆತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೋಟಿಗೊಬ್ಬ-3 ಸಿನಿಮಾ ವಿತರಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಸೂರಪ್ಪ ಬಾಬು
Advertisement
Advertisement
ಪೊಲೀಸರ ತಂಡ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಯನ್ನು ವಿಚಾರಿಸಿದಾಗ, ಬರ್ತ್‍ಡೇ ಸೆಲೆಬ್ರೆಟ್ ಮಾಡಲು ತನ್ನ ಹಿರಿಯ ಸಹೋದ್ಯೋಗಿ ರೂಮಿಗೆ ಹೋದಾಗ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾರೆ. ಆರೋಪಿಗೆ ಮದುವೆಯಾಗಿದ್ದು, ಆತ ಕುಟುಂಬದೊಂದಿಗೆ ಏಮ್ಸ್ ವಸತಿ ಸಮುಚ್ಚದಲ್ಲಿ ವಾಸಿಸುತ್ತಿದ್ದನು. ಆದರೆ ಆರೋಪಿಯ ಕುಟುಂಬದವರು ಊರಿಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಇದೀಗ ಪಾರ್ಟಿಯಲ್ಲಿ ಭಾಗಿಯಾಗಿದ್ದ ಇತರ ವೈದ್ಯರನ್ನು ಕೂಡ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಬರ್ತ್‍ಡೇ ಪಾರ್ಟಿಯಲ್ಲಿ ಸಂತ್ರಸ್ತೆ ಹಾಗೂ ಆಕೆಯ ಸಹೋದ್ಯೋಗಿ ಇಬ್ಬರು ಮದ್ಯ ಸೇವಿಸಿದ್ದರು ಮತ್ತು ರಾತ್ರಿ ತಡವಾಗಿದ್ದರಿಂದ ಸಂತ್ರಸ್ತೆ ಅಲ್ಲಿಯೇ ತಂಗಿದ್ದರು. ಆದರೆ ನಂತರ ಆರೋಪಿ ಆಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಹಬ್ಬದಂದು ಹಳೆಯ ಫೋಟೋ ಹಂಚಿಕೊಂಡ ರಮ್ಯಾ- ಅಭಿಮಾನಿಗಳು ಹೇಳಿದ್ದೇನು?
ಇದೀಗ ಸಂತ್ರಸ್ತೆ ಹೇಳಿಕೆ ಆಧಾರದ ಮೇಲೆ, ಹೌಜ್ ಖಾಸ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಬೆನಿಟಾ ಮೇರಿ ಜೈಕರ್ ಹೇಳಿದ್ದಾರೆ.