DistrictsKarnatakaLatestMain PostVijayapura

ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ವೈದ್ಯ ಆತ್ಮಹತ್ಯೆ

Advertisements

ವಿಜಯಪುರ: ಮನೆಯಲ್ಲಿ ಯಾರೂ ಇಲ್ಲದ ವೇಳೆ ವೈದ್ಯನೊಬ್ಬ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಘಟನೆ ವಿಜಯಪುರದ ಬಂಜಾರಾ ಕ್ರಾಸ್ ಬಳಿ ನಡೆದಿದೆ. ಡಾ. ಆರ್‍ಎನ್ ಬಿರಾದರ್ ಪ್ಯಾರಾಮೆಡಿಕಲ್ ಕಾಲೇಜಿನ ಅಧ್ಯಕ್ಷ ಡಾ. ರಮೇಶ್ ಗೌಡ ಬಿರಾದಾರ್ ಆತ್ಮಹತ್ಯೆ ಮಾಡಿಕೊಂಡವರು.

ಡಾ. ರಮೇಶ್ ಗೌಡ ಪ್ಯಾರಾ ಮೆಡಿಕಲ್ ಕಾಲೇಜಿನ ಮೊದಲ ಮಹಡಿಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ವಾರದ ಹಿಂದೆ ಪತ್ನಿಯೊಂದಿಗೆ ಜಗಳವಾಡಿ ತವರಿಗೆ ಕಳುಹಿಸಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಬಸ್ಸಿನಿಂದ ಬಿದ್ದು ವಿದ್ಯಾರ್ಥಿ ಸಾವು

ರಮೇಶ್ ಗೌಡ ಬೆಂಕಿ ಹಚ್ಚಿದ್ದರ ಕಾರಣ ಕಟ್ಟಡಕ್ಕೂ ಬೆಂಕಿ ತಗುಲಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆ ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ – ಇಬ್ಬರ ಬಂಧನ

Leave a Reply

Your email address will not be published.

Back to top button