ಶಶಾಂಕ್ ನಿರ್ದೇಶನದ ಚಿತ್ರಕ್ಕೆ ಡಾಕ್ಟರ್ ಹೀರೋ

Public TV
3 Min Read
FotoJet 5 11

“ಮೊಗ್ಗಿನ ಮನಸ್ಸು”, ” ಕೃಷ್ಣನ್ ಲವ್ ಸ್ಟೋರಿ ” ಯಂತಹ ಅದ್ಭುತ ಲವ್ ಸ್ಟೋರಿ ಚಿತ್ರಗಳ ನಿರ್ದೇಶಕ ಶಶಾಂಕ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ “ಲವ್ 360”. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸಾಕಷ್ಟು ಮೆಚ್ಚುಗೆ ದೊರಕಿದೆ. ಈ ಸಂತಸ ಹಂಚಿಕೊಳ್ಳಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಇದನ್ನೂ ಓದಿ : Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು

FotoJet 3 19

ಬಹಳ ದಿನಗಳ ನಂತರ ನಿಮ್ಮನೆಲ್ಲಾ ನೋಡುತ್ತಿರುವುದು ಖುಷಿಯಾಗಿದೆ. ಮೂರುವರ್ಷಗಳ ನಂತರ “ತಾಯಿಗೆ ತಕ್ಕ ಮಗ” ಚಿತ್ರದ ನಂತರ ನಾನು ನಿರ್ದೇಶಿಸಿರುವ ಚಿತ್ರವಿದು. ಲಾಕ್ ಡೌನ್ ಸಮಯದಲ್ಲಿ ಸಿದ್ದವಾದ ಕಥೆಯಿದು. ನಾನು ಉಪೇಂದ್ರ ಅವರ ಚಿತ್ರ ನಿರ್ದೇಶಿಸಬೇಕಿತ್ತು.‌ ಅದು ದೊಡ್ಡಮಟ್ಟದ ಚಿತ್ರ. ಚಿತ್ರೀಕರಣಕ್ಕೆ ಕೊರೋನ ನಿಯಮಾವಳಿಗಳು ಸಹಕಾರಿಯಾಗುವಂತೆ ಕಾಣಲಿಲ್ಲ. ಹಾಗಾಗಿ ಆ ಚಿತ್ರ ಮುಂದೂಡಿ, ಈ ಚಿತ್ರ ಆರಂಭ ಮಾಡಿದೆ. ಅದರಲ್ಲೂ ಹೊಸಬರೊಂದಿಗೆ ನಾನು ಕೆಲಸ ಮಾಡಿ ಸುಮಾರು ವರ್ಷಗಳೇ ಆಗಿತ್ತು. ಈ ಚಿತ್ರದ ಮೂಲಕ ಪ್ರವೀಣ್ ಎಂಬ ನೂತನ ಪ್ರತಿಭೆಯನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದೇನೆ. ಪ್ರವೀಣ್ ಸೇರಿದಂತೆ ಅವರ ಕುಟುಂಬದರೆಲ್ಲಾ ವೈದ್ಯರು. ಹೊಸಪೇಟೆ ಬಳಿಯ ಮಾರಮ್ಮನಹಳ್ಳಿಯಲ್ಲಿ ಇವರ ಆಸ್ಪತ್ರೆ ಇದೆ. ಸಾವಿರಾರು ಜನಕ್ಕೆ ಉಚಿತ ಚಿಕಿತ್ಸೆ ನೀಡಿ‌ ಪ್ರವೀಣ್ ತಂದೆ ಆ ಊರಿನ ಸುತ್ತ ಹೆಸರುವಾಸಿಯಾಗಿದ್ದರು. ಎಂ.ಬಿ.ಬಿ.ಎಸ್ ಓದಿರುವ ಪ್ರವೀಣ್  ಗೆ ನಟನೆಯಲ್ಲಿ ಆಸಕ್ತಿ. ಈ ಕುರಿತು ಅವರ ತಾಯಿ ನನ್ನ ಬಳಿ ಹೇಳಿದರು. ನಿರ್ಮಾಣವನ್ನೂ ಮಾಡುವುದಾಗಿ ಹೇಳಿದ್ದರು. ಆದರೆ ಅವರ ಬಳಿ ಈ ಚಿತ್ರಕ್ಕೆ ಬೇಕಾದಷ್ಟು ಹಣವಿಲ್ಲದ ಕಾರಣ,  ನಮ್ಮ ಶಶಾಂಕ್ ಸಿನಿಮಾಸ್ ಸಂಸ್ಥೆ

FotoJet 1 29

ಸಹ ನಿರ್ಮಾಣಕ್ಕೆ ಕೈ ಜೋಡಿಸಿತ್ತು. ಪ್ರವೀಣ್ ಗೆ ನಟನೆಗೆ ಬೇಕಾದ ಎಲ್ಲಾ ತಯಾರಿ ನೀಡಿ, ಚಿತ್ರ ಆರಂಭಿಸಲಾಯಿತು. ರಚನಾ ಇಂದರ್ ಈ ಚಿತ್ರದ ನಾಯಕಿ. ಗೋಪಾಲ್ ದೇಶಪಾಂಡೆ, ಡ್ಯಾನಿ ಕುಟ್ಟಪ್ಪ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಭಿಷೇಕ್ ಕಲ್ಲತ್ತಿ ಛಾಯಾಗ್ರಹಣ ಹಾಗೂ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಸಿದ್ ಶ್ರೀರಾಮ್ ಹಾಗೂ ಸಂಚಿತ್ ಹೆಗಡೆ ಹಾಡಿರುವ ಹಾಡುಗಳು ಕೇಳುಗರ ಮನ ಗೆದ್ದಿದೆ‌. ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದ್ದು, ಸೆನ್ಸಾರ್ ಮಂಡಳಿ ವೀಕ್ಷಿಸಿದ ನಂತರ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ನಿರ್ದೇಶಕ ಶಶಾಂಕ್ ತಿಳಿಸಿದರು. ಇದನ್ನೂ ಓದಿ : ಪತಿ ಉಪ್ಪಿಗಿಂತಲೂ ಪತ್ನಿ ಪ್ರಿಯಾಂಕಾ ಉಪೇಂದ್ರ ಫಾಸ್ಟ್ : ಡಿಟೆಕ್ಟೀವ್ ತೀಕ್ಷ್ಣ @ 50

FotoJet 2 27

ನಾನು ಎಂ.ಬಿ.ಬಿ.ಎಸ್ ವಿದ್ಯಾರ್ಥಿಯಾಗಿದಾಗಿನಿಂದಲೂ ನಟನೆಯಲ್ಲಿ ಆಸಕ್ತಿ. ತಿಂಗಳಲ್ಲಿ ಮೂರು ದಿನ ಆದರ್ಶ ಫಿಲಂ ಇನ್ಸ್ಟಿಟ್ಯೂಟ್ ಗೆ ಬಂದು ಅಭಿನಯ ಕಲಿಯುತ್ತಿದೆ. ಅಪ್ಪನಿಗೆ ವಿಷಯ ತಿಳಿದು ಬಯ್ಯುತ್ತಿದ್ದರು. ಈಗ ಅಪ್ಪ ಇಲ್ಲ. ಅಮ್ಮನ ಮುಂದೆ ನನ್ನ ಆಸೆ ಹೇಳಿಕೊಂಡೆ. ಅಮ್ಮ ನನ್ನ‌ ಆಸೆಗೆ ಆಸರೆಯಾದರು. ಆನಂತರ ಶಶಾಂಕ್ ಸರ್ ಪರಿಚಯವಾಯಿತು. ಶಶಾಂಕ್ ಅವರು ಸಾಕಷ್ಟು ವರ್ಕ್ ಶಾಪ್ ನಡೆಸಿ ನನಗೆ ಅಭಿನಯ ಕಲಿಸಿದರು. ಸಾಕಷ್ಟು ತಯಾರಿ ಮಾಡಿಕೊಂಡು ಚಿತ್ರರಂಗಕ್ಕೆ ಬಂದಿದ್ದೀನಿ. ಈ ಚಿತ್ರದಲ್ಲಿ ಬೋಟ್ ಮ್ಯಕಾನಿಕ್ ಪಾತ್ರ ಮಾಡಿದ್ದೀನಿ. ಡಾಕ್ಟರ್ ಆಗಬೇಕಿತ್ತು. ಈಗ ಆಕ್ಟರ್ ಆಗಿದ್ದೀನಿ ಅಂದರು ಪ್ರವೀಣ್. ಇದನ್ನೂ ಓದಿ : ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ

FotoJet 50

ನಾನು “ಲವ್ ಮಾಕ್ಟೇಲ್” ಚಿತ್ರದಲ್ಲಿ ಅಭಿನಯಿಸಿದ್ದೆ. ಆದರೆ ಪೂರ್ಣಪ್ರಮಾಣದ ನಾಯಕಿಯಾಗಿ ಅಭಿನಯಿಸಿರುವ ಮೊದಲ ಚಿತ್ರವಿದು. ಈ ಚಿತ್ರದ ಆಡಿಷನ್ ಇದಾಗ ಅಮ್ಮ ಜಡೆ ಹಾಕಿ, ಜುಮಕಿ ಹಾಕಿಸಿಕೊಂಡು ಕರೆದುಕೊಂಡು ಹೋಗಿದ್ದರು. ನಾನು ಬೇಡ ಅಂದೆ. ಅಮ್ಮ ಇರಲಿ ಅಂದರು. ಶಶಾಂಕ್ ಅವರಿಗೆ ನಾನು ಹೋಗಿದ್ದ ರೀತಿ ಇಷ್ಟವಾಯಿತಂತೆ. ಆನಂತರ ನಾನು ಸೆಲೆಕ್ಟ್ ಆದೆ. ನಂತರ ನಿರ್ದೇಶಕರು ವರ್ಕ್ ಶಾಪ್ ಮೂಲಕ ಅಭಿನಯ ಹೇಳಿಕೊಟ್ಟರು. ಪಾತ್ರ ತುಂಬಾ ಚೆನ್ನಾಗಿದೆ ಅಂದರು ರಚನಾ ಇಂದರ್.

Share This Article
Leave a Comment

Leave a Reply

Your email address will not be published. Required fields are marked *