ಬೆಂಗಳೂರು: ಕರವೇ ಅಶ್ವಿನಿ ಗೌಡ ಸೇರಿದಂತೆ 15 ಜನ ಕಾರ್ಯಕರ್ತರು ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ದಕ್ಷಿಣ ಡಿಸಿಪಿ ಕಚೇರಿಯಲ್ಲಿ ಶರಣಾಗಲಿದ್ದಾರೆ.
ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ತಡರಾತ್ರಿ ಸಭೆ ನಡೆಸಿ ಪೊಲೀಸರಿಗೆ ಶರಣಾಗುವ ಬಗ್ಗೆ ತೀರ್ಮಾನಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಾರಾಯಣಗೌಡ ಹಾಗೂ ಹಲ್ಲೆ ಆರೋಪಿ ಅಶ್ವಿನಿಗೌಡ, ವೈದ್ಯರಿಗೆ ಹೆದರಿ ಈ ತೀರ್ಮಾನ ತೆಗೆದುಕೊಂಡಿಲ್ಲ. ಜನರಿಗೆ ತೊಂದರೆಯಾಗಬಾರದೆಂದು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
Advertisement
ಕಳೆದ ಒಂದು ವಾರದಿಂದ ನಡೆಯುತ್ತಿರುವ ಸರ್ಕಾರಿ ಕಿರಿಯ ವೈದ್ಯರ ಪ್ರತಿಭಟನೆಗೆ ಐಎಂಎ ಕೈ ಜೋಡಿಸಿದೆ. ವೈದ್ಯರ ಮೇಲೆ ಹಲ್ಲೆ ಮಾಡಿರುವ ಕರವೇ ಕಾರ್ಯಕರ್ತರನ್ನ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಯಲ್ಲಿ ವೈದ್ಯರು ಭಾಗಿಯಾಗಲಿದ್ದಾರೆ. ಸರ್ಕಾರಿ ಆಸ್ಪತ್ರೆಯ ಜೊತೆಗೆ ಇಂದು ರಾಜ್ಯದ ಖಾಸಗಿ ಆಸ್ಪತ್ರೆಯ ಹೊರ ರೋಗಿ ವಿಭಾಗವನ್ನ 24 ಗಂಟೆಗಳ ಸಂಪೂರ್ಣ ಬಂದ್ ಮಾಡುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಿದ್ಧರಾಗಿದ್ದಾರೆ.
Advertisement
ಇಂದು ಬೆಳಗ್ಗೆ 6ರಿಂದ ನಾಳೆ ಬೆಳಗ್ಗೆ 6 ರವರೆಗೆ ಖಾಸಗಿ ಆಸ್ಪತ್ರೆಯ ಓಪಿಡಿ ಸೇರಿದಂತೆ ಬಹುತೇಕ ಕ್ಲಿನಿಕ್ ಗಳು ಸಹ ಬಂದ್ ಆಗಲಿದ್ದು, ರೋಗಿಗಳಿಗೆ ಚಿಕಿತ್ಸೆ ದೊರೆಯುವುದು ಅನುಮಾನವಾಗಿದೆ. ಇದರಿಂದ ರೋಗಿಗಳಿಗೆ ತೊಂದರೆ ಆಗಲಿದೆ. ಇತ್ತ ಕರವೇ ಕಾರ್ಯಕರ್ತರು ಶರಣಾಗಲು ಒಪ್ಪಿಕೊಂಡಿದ್ದರಿಂದ ವೈದ್ಯರು ಪ್ರತಿಭಟನೆಯಿಂದ ಹಿಂದೆ ಸರಿಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
Advertisement