ಬಾಗಲಕೋಟೆ: ವ್ಯಕ್ತಿ ಹೊಟ್ಟೆಯಲ್ಲಿ 187 ಕಾಯಿನ್‍ಗಳು (Coin) ಪತ್ತೆಯಾಗಿದ್ದು, ಬಾಗಲಕೋಟೆಯ (Bagalkote) ಕುಮಾರೇಶ್ವರ ಆಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರತೆಗೆದಿದ್ದಾರೆ.
ದ್ಯಾಮಪ್ಪ ಹರಿಜನ (58) ಎಂಬವನೇ ಕಾಯಿನ್ ನುಂಗಿದ್ದ ವ್ಯಕ್ತಿ. ದ್ಯಾಮಪ್ಪ ರಾಯಚೂರು (Raichur) ಜಿಲ್ಲೆಯ ಲಿಂಗಸೂರು ಮೂಲದವರಾಗಿದ್ದು, ಸದ್ಯ ಬಾಗಲಕೋಟೆಯ ಶ್ರೀಕುಮಾರೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು 5 ರೂಪಾಯಿಯ 56 ನಾಣ್ಯ, 2 ರೂಪಾಯಿಯ 51 ನಾಣ್ಯ ಹಾಗೂ 1ರ 80 ನಾಣ್ಯಗಳು ಸೇರಿ ಒಟ್ಟು 187 ನಾಣ್ಯಗಳನ್ನು ನುಂಗಿದ್ದರು.
Advertisement
Advertisement
ಆದರೆ ದ್ಯಾಮಪ್ಪ ಯಾವ ಕಾರಣಕ್ಕಾಗಿ ಇಷ್ಟೊಂದು ಕಾಯಿನ್‍ಗಳನ್ನು ನುಂಗಿದ್ದಾರೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಕುಟುಂಬಸ್ಥರು ಮಾತನಾಡಿ, ಆತ್ಮಹತ್ಯೆಗೆ ಪ್ರಯತ್ನಿಸಿರಬಹುದು ಎಂದು ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿದ್ದು ಪ್ರವಾಸದ ಬಳಿಕ ಕೋಲಾರ ಕ್ಷೇತ್ರದಲ್ಲಿ ಚುರುಕಾದ ಬಿಜೆಪಿ
Advertisement
Advertisement
ಒಟ್ಟಾರೆಯಾಗಿ ವೈದ್ಯರಾದ ಡಾ. ಈಶ್ವರ ಕಲಬುರಗಿ, ಡಾ. ಪ್ರಕಾಶ ಕಟ್ಟಿಮನಿ, ಅರವಳಿಕೆ ತಜ್ಞರಾದ ಡಾ. ಅರ್ಚನಾ, ಡಾ. ರೂಪಾ ಹುಲಕುಂದೆ ಅವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ ನಡೆದಿದೆ. ಎಂಡೋಸ್ಕೋಪಿ ಮೂಲಕ ವೈದ್ಯರು ಕಾಯಿನ್ ಹೊರತೆಗೆದಿದ್ದಾರೆ. ಇದನ್ನೂ ಓದಿ: ಆನೆ ಹಾವಳಿ ತಪ್ಪಿಸಲು ಟಾಸ್ಕ್ ಫೋರ್ಸ್ ರಚನೆ – ಅತಿ ಹೆಚ್ಚು ಆನೆ ಹೊಂದಿರುವ ಜಿಲ್ಲೆಯನ್ನೇ ಕೈಬಿಟ್ಟ ಸರ್ಕಾರ