– ವೈದ್ಯರಿಗೆ ಮುಖ್ಯಮಂತ್ರಿ ಧನ್ಯವಾದ
ಪಟಿಯಾಲ: ಕರ್ಫ್ಯೂ ಪಾಸ್ ತೋರಿಸುವಂತೆ ಒತ್ತಾಯಿಸಿದ್ದಕ್ಕೆ ನಿಹಾಂಗ್ ಸಿಖ್ಖರ ಗುಂಪೊಂದು ಪೊಲೀಸ್ ಅಧಿಕಾರಿಯೊಬ್ಬರ ಕೈ ಕತ್ತರಿಸಿತ್ತು. ಇದೀಗ ಅಧಿಕಾರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಮರಳಿ ಕೈಯನ್ನು ಜೋಡಿಸಲಾಗಿದೆ.
ನಿಹಾಂಗ್ನ ಎಎಸ್ಐ ಹರ್ಜಿತ್ ಸಿಂಗ್ ಅವರ ಕೈಯನ್ನು ವ್ಯಕ್ತಿಯೊಬ್ಬ ಕತ್ತರಿಸಿದ್ದನು. ತಕ್ಷಣ ಅವರನ್ನು ಪಟಿಯಾಲದಿಂದ ಚಂಡೀಗಢ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಸತತ ಏಳೂವರೆ ಗಂಟೆ ಶಸ್ತ್ರ ಚಿಕಿತ್ಸೆ ಮಾಡಿ ಕತ್ತರಿಸಿದ್ದ ಪೊಲೀಸ್ ಅಧಿಕಾರಿಯ ಕೈಯನ್ನು ಯಶಸ್ವಿಯಾಗಿ ಮರಳಿ ಜೋಡಿಸಿದ್ದಾರೆ ಎಂದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಕರ್ಫ್ಯೂ ಪಾಸ್ ತೋರಿಸು ಎಂದಿದ್ದಕ್ಕೆ ಎಎಸ್ಐ ಕೈ ಕತ್ತರಿಸಿದ ಗುಂಪು
Advertisement
I am happy to share that a 7 1/2 hour long surgery has been successfully completed in PGI to repair the severed wrist of ASI Harjeet Singh. I thank the entire team of doctors and support staff for their painstaking effort. Wishing ASI Harjeet Singh a speedy recovery.
— Capt.Amarinder Singh (@capt_amarinder) April 12, 2020
Advertisement
ಈ ಬಗ್ಗೆ ಟ್ವೀಟ್ ಮಾಡಿರುವ ಅಮರಿಂದರ್ ಸಿಂಗ್ ಅವರು, “ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರ ತಂಡ ಮತ್ತು ಸಹಾಯಕ ಸಿಬ್ಬಂದಿಗೆ ಧನ್ಯವಾದ ಹೇಳುತ್ತೇನೆ. ಎಎಸ್ಐ ಹರ್ಜೀತ್ ಸಿಂಗ್ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
Advertisement
ಇದೇ ವಿಚಾರವಾಗಿ ಪಂಜಾಬ್ ಪೊಲೀಸ್ ಮುಖ್ಯಸ್ಥ ದಿನಕರ್ ಗುಪ್ತಾ ಕೂಡ ಟ್ವೀಟ್ ಮಾಡಿದ್ದು, ಹಂಜೀತ್ ಸಿಂಗ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ತಿಳಿಸಿದ್ದಾರೆ.
Advertisement
Just spoke with the lead Plastic surgeon who did the successful surgery to stitch back the hand of our brave corona warrior ASI Harjeet Singh. Also spoke with Harjeet who is in high spirits. We still have to wait & watch for the next 5 days.
— DGP Punjab Police (@DGPPunjabPolice) April 12, 2020
ಮತ್ತೊಂದು ಟ್ವೀಟ್ ಮಾಡಿ, “ನಮ್ಮ ಕೆಚ್ಚೆದೆಯ ಕೊರೊನಾ ಯೋಧ ಎಎಸ್ಐ ಹರ್ಜೀತ್ ಸಿಂಗ್ ಅವರಿಗೆ ಯುಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ ಪ್ರಮುಖ ಪ್ಲಾಸ್ಟಿಕ್ ಸರ್ಜನ್ ಅವರೊಂದಿಗೆ ಮಾತನಾಡಿದ್ದೇನೆ. ಅಲ್ಲದೇ ಹರ್ಜೀತ್ ಅವರೊಂದಿಗೆ ಮಾತನಾಡಿದೆ. ಸದ್ಯಕ್ಕೆ 5 ದಿನಗಳವರೆಗೂ ಅವರು ಆಸ್ಪತ್ರೆಯಲ್ಲಿಯೇ ಇರುಬೇಕು” ಎಂದು ಗುಪ್ತಾ ತಿಳಿಸಿದ್ದಾರೆ.
ಏನಿದು ಪ್ರಕರಣ?
ಮಂಡಿ ಬೋರ್ಡ್ ಠಾಣೆಯ ಪೊಲೀಸರು ಪಟಿಯಾಲದ ತರಕಾರಿ ಮಾರುಕಟ್ಟೆಯ ಬಳಿ ನಿಯೋಜನೆಗೊಂಡಿದ್ದರು. ಈ ವೇಳೆ ಭಾನುವಾರ ಬೆಳಗ್ಗೆ 6 ಗಂಟೆಗೆ ಐವರಿಂದ ಆರು ಜನರಿದ್ದ ವಾಹನವನ್ನು ಅವರು ತಡೆದು ಲಾಕ್ಡೌನ್ ಪಾಸ್ ತೋರಿಸುವಂತೆ ಒತ್ತಾಯಿಸಿದ್ದರು. ಆಗ ಗುಂಪು ತರಕಾರಿ ಮಾರುಕಟ್ಟೆಯ ಸಿಬ್ಬಂದಿಯೊಂದಿಗೆ ಜಗಳ ಆರಂಭಿಸಿತ್ತು. ಅಷ್ಟೇ ಅಲ್ಲದೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಬ್ಯಾರಿಕೇಡ್ ಅನ್ನು ಮುರಿದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಈ ವೇಳೆ ಅಲ್ಲಿ ನಿಂತಿದ್ದ ಪೊಲೀಸರು ವಾಹವನ್ನು ಸುತ್ತುವರಿದರು. ಪೊಲೀಸರು ವಾಹನವನ್ನು ನಿಲ್ಲಿಸಿದ ಕೂಡಲೇ ಕತ್ತಿ, ಮಾರಕಾಸ್ತ್ರಗಳನ್ನು ಎತ್ತಿಕೊಂಡ ಗುಂಪು ದಾಳಿ ನಡೆಸಿ, ಎಎಸ್ಐ ಹರ್ಜಿತ್ ಸಿಂಗ್ ಅವರ ಕೈ ಕತ್ತರಿಸಿ ಪರಾರಿಯಾಗಿತ್ತು.
9 persons have been arrested till now in connection with the attack in which a Punjab ASI's hand was chopped off in Patiala earlier today. Weapons including guns and petrol bombs have been recovered: Mandeep Singh, SSP Patiala pic.twitter.com/eX3VfVqUHq
— ANI (@ANI) April 12, 2020
ನಿಹಾಂಗ್ ಸಿಖ್ಖರು ನಡೆಸಿದ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಬಿಕರ್ ಸಿಂಗ್ ಮತ್ತು ಓರ್ವ ಪೇದೆ ಸಹ ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ ಈವರೆಗೆ 9 ಜನರನ್ನು ಬಂಧಿಸಲಾಗಿದೆ.