ಚಿಕ್ಕಬಳ್ಳಾಪುರ: ಬಂಧನಕ್ಕೆ ತೆರಳಿದ್ದಾಗ ಪೊಲೀಸ್ ಪೇದೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಕೊಲೆ ಆರೋಪಿಯ ಕಾಲಿಗೆ ದೊಡ್ಡಬಳ್ಳಾಪುರ ಪೊಲೀಸರು (Doddaballapura Police) ಗುಂಡೇಟು ನೀಡಿದ್ದಾರೆ.
ಹೇಮಂತ್ ಗೌಡ ಎಂಬವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಯಲಹಂಕ ಬಳಿಯ ಶ್ರೀರಾಮನ ಹಳ್ಳಿ ಬಳಿ ಅಡಗಿರುವ ಖಚಿತ ಮಾಹಿತಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ಸಿಕ್ಕಿತ್ತು. ಇದರಿಂದ ಆತನನ್ನು ಬಂಧಿಸಲು ಪೊಲೀಸರು ಇಂದು (ಶುಕ್ರವಾರ) ಮುಂಜಾನೆ ತೆರಳಿದ್ದರು. ಈ ವೇಳೆ ಆರೋಪಿ ಶ್ರೀನಿವಾಸ್ ಪೊಲೀಸ್ ಪೇದೆ ಚಂದ್ರು ಎಂಬವರ ಮೇಲೆ ಕಲ್ಲಿನಿಂದ ಹಾಗೂ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿದ್ದಾನೆ. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ ಆರೋಪಿ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಇನ್ಸ್‌ಪೆಕ್ಟರ್ ಸಾಧಿಕ್ ಪಾಶ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದು, ಬಳಿಕ ಆತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಅಂಜಲಿ ಬಳಿಕ ರೈಲಿನಲ್ಲಿ ಮಹಿಳೆಗೆ ಚಾಕು ಹಾಕಲು ಯತ್ನಿಸಿ ಸಿಕ್ಕಿಬಿದ್ದ ಕಿರಾತಕ ವಿಶ್ವ
ಗಾಯಗೊಂಡಿರುವ ಪೊಲೀಸ್ ಪೇದೆ ಚಂದ್ರು ಹಾಗೂ ಆರೋಪಿ ಶ್ರೀನಿವಾಸ್‍ಗೆ ದೊಡ್ಡಬಳ್ಳಾಪುರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೇ 11ರಂದು ದೊಡ್ಡಬಳ್ಳಾಪುರ ನಗರ ಹೊರವಲಯದ ಭಾಷೆಟ್ಟಳ್ಳಿ ಬಳಿ ಇರುವ ಬಾರ್ & ರೆಸ್ಟೋರೆಂಟ್ ಮುಂಭಾಗ ಹೇಮಂತ್ ಗೌಡ ಎಂಬ ಯುವಕನನ್ನು ನರಸಿಂಹಮೂರ್ತಿ, ಶ್ರೀನಿವಾಸ್ ಹಾಗೂ ಇತರರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಕೊಲೆಗೆ ಎರಡು ಗುಂಪುಗಳ ನಡುವಿನ ದ್ವೇಷ ಕಾರಣ ಎನ್ನಲಾಗಿತ್ತು. ಪ್ರಕರಣ ಸಂಬಂಧ ಆರೋಪಿ ನರಸಿಂಹಮೂರ್ತಿಯನ್ನು ಈಗಾಗಲೇ ಬಂಧಿಸಲಾಗಿದೆ. ಇದನ್ನೂ ಓದಿ: ಅಂಜಲಿ ಹತ್ಯೆಗೈದಿದ್ದ ಆರೋಪಿ ಅರೆಸ್ಟ್ – ಬಗೆದಷ್ಟು ಬಯಲಾಗ್ತಿದೆ ವಿಶ್ವನ ದುಷ್ಕೃತ್ಯ