ಚಿಕ್ಕಬಳ್ಳಾಪುರ: ಸಾರಿಗೆ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳು (Students) ತೊಂದರೆ ಅನುಭವಿಸುತಂತಾಗಿದೆ ಎಂದು ಆರೋಪಿಸಿ ಬಸ್ (Bus) ತಡೆದು ಪ್ರತಿಭಟನೆ ನಡೆಸಿದ ಘಟನೆ ದೊಡ್ಡಬಳ್ಳಾಪುರದಲ್ಲಿ (Doddaballapura) ನಡೆದಿದೆ.
ಸೋಮವಾರ ಬೆಳಗ್ಗೆ ಹುಲಿಕುಂಟೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್ಸನ್ನು ವಿದ್ಯಾರ್ಥಿಗಳು ತಡೆದಿದ್ದಾರೆ. ದೊಡ್ಡಬಳ್ಳಾಪುರ-ತುಮಕೂರು ಮಾರ್ಗಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದೆ ಒಂದೇ ಬಸ್ಸಿನಲ್ಲಿ 130 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಾಗಬೇಕಾಗಿದೆ. ಬಸ್ಸಿನ ಡೋರಿನಲ್ಲೇ ನೇತಾಡಿಕೊಂಡು ತೆರಳಬೇಕಾದ ಪರಿಸ್ಥಿತಿ ಇದೆ. ಈ ಸಮಸ್ಯೆಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ಇದೆ. ಆದರೂ ಬಸ್‍ಗಳ ವ್ಯವಸ್ಥೆ ಮಾಡಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಆರ್‌ಎಂಸಿ ಯಾರ್ಡ್‌ನಲ್ಲಿ ಟೊಮೆಟೊ ವಾಹನ ಕಳ್ಳತನ ಪ್ರಕರಣ – ಖದೀಮರು ಯಾಮಾರಿಸಿದ್ದು ಹೇಗೆ?
ಆಯತಪ್ಪಿ ಬಿದ್ದು ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ. ಈ ಕುರಿತಂತೆ ಸ್ಥಳಕ್ಕೆ ಸಾರಿಗೆ ಅಧಿಕಾರಿಗಳು ಸಮರ್ಪಕ ಬಸ್ ವ್ಯವಸ್ಥೆ ಮಾಡುವ ಭರವಸೆ ನೀಡುವ ವರೆಗೂ ಬಸ್ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಜನ ಪ್ರತಿನಿಧಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಜೈನ ಮುನಿ ಹತ್ಯೆ ಹಿಂದೆ ಐಸಿಸ್ ಚಿತಾವಣೆಯಿದೆ – ಶಾಸಕ ಸಿದ್ದು ಸವದಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]