ರಾಜಕಾರಣದ ಕುಟುಂಬದಿಂದಲೇ ಬಂದಿರುವ ನಟ ಶಿವರಾಜ್ ಕುಮಾರ್ (Shivaraj Kumar) ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎನ್ನುವ ಮಾಹಿತಿ ಇದೆ. ನಾಳೆ ಅವರು ಕಾಂಗ್ರೆಸ್ ಪಕ್ಷದ ಮುಖಂಡರ ಸಮ್ಮುಖದಲ್ಲಿ ಅಧಿಕೃತವಾಗಿ ಪಕ್ಷವನ್ನು ಸೇರಲಿದ್ದಾರಂತೆ. ಇಂದು ರಾತ್ರಿ ಸೇರ್ಪಡೆಯ ವೇಳೆ ನಿಗದಿ ಆಗುವ ಸಾಧ್ಯತೆ ಇದೆ.
Advertisement
ಗೀತಾ ಶಿವರಾಜ್ ಕುಮಾರ್ ರ ಕಿರಿಯ ಸಹೋದರ ಮಧು ಬಂಗಾರಪ್ಪ (Madhu Bangarappa) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ (Kumar Bangarappa) ಅವರ ವಿರುದ್ಧವೇ ಸೊರಬ (Soraba) ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
Advertisement
Advertisement
ಪ್ರತಿ ಬಾರಿಯೂ ಮಧು ಬಂಗಾರಪ್ಪನವರನ್ನು ಬೆಂಬಲಿಸುತ್ತಾ ಬಂದಿದ್ದಾರೆ ಗೀತಾ ಶಿವರಾಜ್ ಕುಮಾರ್. ಒಂದು ಬಾರಿ ಚುನಾವಣೆಗೂ ಅವರು ಸ್ಪರ್ಧಿಸಿ ಸೋತಿದ್ದಾರೆ. ಈ ಬಾರಿ ಸಹೋದರನನ್ನು ಗೆಲ್ಲಿಸಲೇಬೇಕು ಎನ್ನುವ ಕಾರಣದಿಂದಾಗಿ ಕಾಂಗ್ರೆಸ್ ಗೆ ಸೇರ್ಪಡೆ ಆಗುವ ಮೂಲಕ ತಮ್ಮ ಮತ್ತೋರ್ವ ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧವೇ ಪ್ರಚಾರ ಮಾಡಲಿದ್ಧಾರೆ. ಇದನ್ನೂ ಓದಿ:ನೆಗೆಟಿವ್ ರೋಲ್ ಮಾಡಿದ್ದಕ್ಕೆ ಮದುವೆ ಸಂಬಂಧ ಕ್ಯಾನ್ಸಲ್- ನಟಿ ಅನಿಕಾ ಸಿಂಧ್ಯ
Advertisement
ಈ ಹಿಂದೆ ಕಾಂಗ್ರೆಸ್ ಪಕ್ಷದ ಮುಖಂಡ ಡಿ.ಕೆ. ಶಿವಕುಮಾರ್ (D.K. Shivakumar) ಮತ್ತು ಶಿವರಾಜ್ ಕುಮಾರ್ ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಗೀತಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕುರಿತು ಮಾತುಕತೆ ಕೂಡ ನಡೆದಿತ್ತು. ಆ ಮಾತುಕತೆ ಫಲಪ್ರದವಾಗಿದೆ. ಹಾಗಾಗಿ ಗೀತಾ ಶಿವರಾಜ್ ಕುಮಾರ್ ನಾಳೆ ಕಾಂಗ್ರೆಸ್ ಪಕ್ಷದ ಬಾವುಟ ಹಿಡಿಯಲಿದ್ದಾರೆ.