– ಸಿಎಂ ಸಲಹೆಯಿಂದಲೇ ಅವರ ಪತ್ನಿ ಸೈಟ್ ವಾಪಸ್ ನೀಡಿದ್ದಾರೆ
ವಿಜಯಪುರ: ನಮ್ಮ ಮನೆಯಲ್ಲಿ ನಾನು ಹೇಳದೇ ನನ್ನ ಹೆಂಡತಿ ತೀರ್ಮಾನ ಮಾಡ್ತಾಳಾ? ಇದೆಲ್ಲ ನಾಟಕ ಎಂದು ಹೇಳುವ ಮೂಲಕ ಸಿಎಂ ಪತ್ನಿ ಮುಡಾ ಸೈಟ್ (MUDA Site) ವಾಪಸ್ ನೀಡಿರುವ ವಿಚಾರವಾಗಿ ಸಂಸದ ರಮೇಶ ಜಿಗಜಿಣಗಿ (Ramesh Jigajinagi) ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಮಾತನಾಡಿದ ಅವರು, ಸಿಎಂ ಯಾಕೆ ಸೈಟ್ ತಗೋಬೇಕಿತ್ತು? ಸೈಟ್ ತಗೊಂಡ ಮೇಲೆ ವಾಪಸ್ ಯಾಕೆ ಕೊಡಬೇಕು? ತಪ್ಪು ಮಾಡಿದ್ದಾರೆ ಅದಕ್ಕೆ ವಾಪಸ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ (CM Siddaramaiah) ಸಲಹೆಯಿಂದಲೇ ಅವರ ಪತ್ನಿ ಸೈಟ್ ವಾಪಸ್ ನೀಡಿದ್ದಾರೆ. ನಮ್ಮ ಮನೆಯಲ್ಲಿ ನಾನು ಹೇಳದೇ ನನ್ನ ಹೆಂಡತಿ ತೀರ್ಮಾನ ಮಾಡ್ತಾಳಾ? ಇದೆಲ್ಲವೂ ನಾಟಕ? ಸೈಟ್ ವಾಪಸ್ ನೀಡಿದ್ದು ನಾಟಕ? ಎಂದರು.ಇದನ್ನೂ ಓದಿ: ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚನ್ನಮ್ಮ – ಸಿಎಂ
- Advertisement
- Advertisement
ರಾಮಕೃಷ್ಣ ಹೆಗಡೆಯವರಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ. ನಾನು ಹಿಂದೆನೇ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಯೋಗ್ಯ ಎಂದು ಹೇಳಿದ್ದೆ. ಈಗ ಸಿಎಂ ಕೆಸರಲ್ಲಿ ಸಿಕ್ಕು ಒದ್ದಾಡುತ್ತಿದ್ದಾರೆ. ಕೆಸರಲ್ಲಿ ಸಿಕ್ಕು ಒದ್ದಾಡುವಾಗ ಯಾರು ಬದುಕಿಸುತ್ತಾರೆ? ರಾಜಕಾರಣ ಗಬ್ಬೆದ್ದು ನಾರುತ್ತಿದೆ. ಎಲ್ಲ ಪಕ್ಷಗಳಲ್ಲೂ ಇದೆ ಸ್ಥಿತಿಯಿದೆ. ಎಲ್ಲರೂ ಸೇರಿಕೊಂಡೆ ರಾಜಕಾರಣವನ್ನ ಗಬ್ಬು ಹಿಡಿಸಿದ್ದೇವೆ. ಎಲ್ಲ ಪಕ್ಷಗಳು ನಿಷ್ಠೆಯಿಂದ ಕೆಲಸ ಮಾಡುತ್ತಿವೆ. ನಾವು ರಾಜಕಾರಣಿಗಳು ಗಬ್ಬು ಹಿಡಿಸಿದ್ದೇವೆ ಎಂದು ಸದ್ಯದ ರಾಜಕೀಯದ ಬಗ್ಗೆ ಅಸಮಧಾನ ಹೊರಹಾಕಿದರು.
ಇದೇ ವೇಳೆ ದಲಿತರ ಗೌಪ್ಯ ಮೀಟಿಂಗ್ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್‌ನಲ್ಲಿ (Congress) ದಲಿತರ ಗೌಪ್ಯ ಮೀಟಿಂಗ್ ನಾಟುವುದಿಲ್ಲ. ದೆಹಲಿಯಿಂದ ಏನು ಬರುತ್ತದೆ ಅದು ಮಾತ್ರ ನಾಟುತ್ತದೆ. ಜನುಮದಲ್ಲಿ ಕಾಂಗ್ರೆಸ್‌ನವರು ದಲಿತರನ್ನು ಸಿಎಂ ಮಾಡಲ್ಲ. ಇದು ಸತ್ಯ. ಕಾಂಗ್ರೆಸ್‌ನ ದಲಿತರು ಕನಸು ಕಾಣುತ್ತಿದ್ದಾರೆ ಅಷ್ಟೇ. ಮಹದೇವಪ್ಪ ಹುಚ್ಚನಿದ್ದಾನೆ. ಪೈಪೋಟಿ ನಡೆಯುತ್ತದೆ ಅದರಿಂದ ಏನು ನಡೆಯಲ್ಲ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: HMT ಕ್ಯಾಂಪಸ್‌ನಲ್ಲಿ ಪೌರ ಕಾರ್ಮಿಕರೊಂದಿಗೆ ಕಸ ಗುಡಿಸಿದ ಹೆಚ್‌ಡಿಕೆ