– ಠಾಣೆಗೆ ಕರೆದು ವಿಡಿಯೋ ತೋರಿಸಿದ ಪೊಲೀಸರು
– ತಪ್ಪೊಪ್ಪಿಕೊಂಡ ಕಾಮುಕ
ಭೋಪಾಲ್: ನಾಯಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಕ್ಕೆ 54 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಧ್ಯಪ್ರದೇಶದ ಜಬಲ್‍ಪುರ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಆರೋಪಿ ಬರೇಲಾದ ಸ್ಟಾರ್ ಸಿಟಿಯ ನಿವಾಸಿಯಾಗಿದ್ದಾನೆ. ನಾಯಿ ಮೇಲೆ ಅತ್ಯಾಚಾರ ಎಸಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ತನ್ನ ಮನೆಯ ಹೊರಗಿನ ಮೆಟ್ಟಿಲು ಮೇಲೆ ಕುಳಿತು ನಾಯಿ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಗಮನಿಸಿದ್ದು, ಬಳಿಕ ಪ್ರಾಣಿ ದಯಾ ಸಂಘದವರಿಗೆ ತಿಳಿದಿದೆ. ಆರೋಪಿ ವಿರುದ್ಧ ಸೆಕ್ಷನ್ 377(ಅಸ್ವಾಭಾವಿಕ ಲೈಂಗಿಕತೆ) ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ಆರೋಪಿಯನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆ ತಂದಿದ್ದು, ಈ ವೇಳೆ ವಿಡಿಯೋ ತೋರಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದ್ದು, ತಾನೇ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೆ ತುಂಬಾ ದಿನಗಳಿಂದ ವ್ಯಕ್ತಿ ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆ ಬಳಿಕ ಆರೋಪಿಯನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಪೊಲೀಸ್ ಕಸ್ಟಡಿಗೆ ವಹಿಸಿದೆ.