ಕಲಬುರಗಿ: ಹುಚ್ಚು ನಾಯಿ (Dog) ದಾಳಿಯಿಂದಾಗಿ 13 ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರ ಹಾಗೂ ಬೆನಕಪಳ್ಳಿ ಗ್ರಾಮದಲ್ಲಿ ನಡೆದಿದೆ.
ಶನಿವಾರ ಸಂಜೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮ ಮತ್ತು ಬೆನಕಪಳ್ಳಿ ಗ್ರಾಮದಲ್ಲಿ ಹುಚ್ಚುನಾಯಿಯೊಂದು ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸಿದೆ. ಸಂಜೆ ಮಳೆಯಾಗುತ್ತಿದ್ದರಿಂದ ಜಮೀನಿನಿಂದ ಜನರು ಮನೆಗೆ ಬೇಗ ವಾಪಸ್ ಆಗುತ್ತಿದ್ದರು. ಈ ವೇಳೆ ಮಹಿಳೆಯೊಬ್ಬರು ಮಳೆಯಿಂದ ರಕ್ಷಣೆ ಪಡೆಯಲು ಮನೆಯೊಂದರ ಬಳಿ ಆಶ್ರಯ ಪಡೆದಿದ್ದರು. ಈ ಸಂದರ್ಭ ಹುಚ್ಚು ನಾಯಿ ಆ ಮಹಿಳೆ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದೆ.
Advertisement
Advertisement
ನಂತರ ಅದೇ ಹುಚ್ಚು ನಾಯಿ ಪಕ್ಕದ ಊರಾದ ಐನಾಪುರ ಗ್ರಾಮಕ್ಕೆ ಎಂಟ್ರಿ ಕೊಟ್ಟಿದೆ. ಐನಾಪುರ ಗ್ರಾಮದಲ್ಲಿ ಸಹ ಮಹಿಳೆಯರು, ಪುರುಷರು ಸೇರಿದಂತೆ ಬರೋಬ್ಬರಿ 12 ಜನರ ಮೇಲೆ ಅಟ್ಯಾಕ್ ಮಾಡಿದೆ. ಗಾಯಾಳುಗಳನ್ನು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಮಾಜಿ ಸಂಸದರ ಪತ್ನಿಯ ಕುತ್ತಿಗೆಯಿಂದ ಸರ ಎಗರಿಸಿದ ಕಳ್ಳನ ಬಂಧನ
Advertisement
ಕಳೆದ ಅನೇಕ ದಿನಗಳಿಂದ ಈ ಹುಚ್ಚು ನಾಯಿ ಗ್ರಾಮಸ್ಥರ ನೆಮ್ಮದಿ ಕೆಡಿಸಿದ್ದು, ಅದನ್ನು ಸೆರೆಹಿಡಿಯಬೇಕೆಂದು ಸಂಬಂಧಿಸಿದವರಿಗೆ ಹೇಳಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ನಾಯಿ ಕಡಿತಕ್ಕೊಳಗಾದವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲು ಸೂಕ್ತ ಸಮಯಕ್ಕೆ ಅಂಬುಲೆನ್ಸ್ ಬಾರದ ಹಿನ್ನಲೆಯಲ್ಲಿ ನೆರೆಯ ಬೀದರ್ ಜಿಲ್ಲೆ ಚಿಟಗುಪ್ಪಾ ಆಸ್ಪತ್ರೆಯಿಂದ ಅಂಬುಲೆನ್ಸ್ ತರಿಸಿಕೊಂಡು ಗಾಯಾಳುಗಳನ್ನು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೈ-ಕಾಲು ಸೇರಿದಂತೆ ದೇಹದ ಬಹುತೇಕ ಭಾಗಗಳಿಗೆ ಹುಚ್ಚು ನಾಯಿ ದಾಳಿ ಮಾಡಿದ್ದು, ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: INDIA ಸಂಘಟನೆಯಿಂದ ಬಿಜೆಪಿ ಹೆದರಿದೆ.. ಎರಡು ಮಾತಿಲ್ಲ: ಸ್ವಪಕ್ಷ ವಿರುದ್ಧವೇ ಹೆಚ್.ವಿಶ್ವನಾಥ್ ಹೇಳಿಕೆ
Web Stories