CrimeLatestMain PostNational

ಬೀದಿನಾಯಿಗಳ ಬಾಯಿಗೆ ಪುಟ್ಟ ಬಾಲಕಿ ಬಲಿ

Advertisements

ನವದೆಹಲಿ: ಬೀದಿನಾಯಿಗಳ ಅಟ್ಟಹಾಸಕ್ಕೆ ಬಾಲಕಿ ಬಲಿಯಾಗಿರುವ ಘಟನೆ ದೆಹಲಿಯ ಮೋತಿ ನಗರದಲ್ಲಿ ನಡೆದಿದೆ.

ಲಕ್ಷ್ಮಿ(3) ಮೃತ ಬಾಲಕಿ. ಆಟವಾಡುತ್ತಿದ್ದ ಬಾಲಕಿಯ ಮೇಲೆ ನಾಯಿಗಳು ದಾಳಿ ಮಾಡಿ ಬಾಲಕಿಯ ಪ್ರಾಣವನ್ನು ತೆಗೆದಿವೆ. ಇದನ್ನೂ ಓದಿ:  ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಎಂದಿಗೂ ಸುರಕ್ಷಿತರಾಗಿರುವುದಿಲ್ಲ:  ಓವೈಸಿ


ದೆಹಲಿ ಪೊಲೀಸರ ಪ್ರಕಾರ, ಡಿಸೆಂಬರ್ 17ರ ಮಧ್ಯಾಹ್ನ 2.45ರ ಸುಮಾರಿಗೆ ಬೀದಿ ನಾಯಿಗಳು ಲಕ್ಷ್ಮಿ ಎಂಬ ಬಾಲಕಿ ಉದ್ಯಾನವನದಲ್ಲಿ ಆಟವಾಡುತ್ತಿದ್ದಾಗ ದಾಳಿ ಮಾಡಿವೆ. ಬಾಲಕಿಯನ್ನು ತಕ್ಷಣ ಎಬಿಜಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ. ಪೊಲೀಸರು ಬಾಲಕಿಯ ಮೃತದೇಹವನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಮಂಗ, ಶ್ವಾನಗಳ ವಾರ್‌ನಲ್ಲಿ ಪ್ರಾಣ ಕಳೆದುಕೊಂಡ 80 ನಾಯಿಮರಿಗಳು

ಕೆಲವು ದಿನಗಳ ಹಿಂದೆ ಮಂಗ, ನಾಯಿ ಗ್ಯಾಂಗ್‍ವಾರ್‌ನಲ್ಲಿ 250 ನಾಯಿ ಮರಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿರುವುದು ಬಹುದೊಡ್ಡಮಟ್ಟದಲ್ಲಿ ಸುದ್ದಿಯಾಗಿತ್ತು. ಬೀದಿ ನಾಯಿಗಳ ಮೇಲಿನ ಪ್ರತೀಕಾರದಿಂದ ಕೋತಿಗಳ ಗುಂಪು ಸಿಕ್ಕ ಸಿಕ್ಕ ನಾಯಿಮರಿಗಳನ್ನೆಲ್ಲಾ ಹೊತ್ತೊಯ್ದು ಎತ್ತರದ ಕಟ್ಟಡ ಅಥವಾ ಮರದಿಂದ ಕೈಬಿಟ್ಟು ಕೊಂದು ಹಾಕಿದ್ದವು. ಇದೀಗ ಬೀದಿ ನಾಯಿ ಮಗುವಿನ ಪ್ರಾಣವನ್ನು ತೆಗೆದಿರುವುದು ದೆಹಲಿಯಲ್ಲಿ ಸುದ್ದಿಯಾಗುತ್ತಿದೆ.

Leave a Reply

Your email address will not be published.

Back to top button