ಹಾಸನ: ಸಿಕ್ಕ ಸಿಕ್ಕವರ ಮೇಲೆ ಹುಚ್ಚುನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಅರಕಲಗೂಡಿನ (Arkalgud) ಉಳ್ಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಚ್ಚುನಾಯಿಯ ದಾಳಿಯಿಂದ ಇಬ್ಬರು ಮಕ್ಕಳು ಸೇರಿ 8 ಮಂದಿ ಗಾಯಗೊಂಡಿದ್ದಾರೆ.
ರಾಜು, ರಘು, ಅಂಜಲಿ, ಮಂಜಯ್ಯ ಹಾಗೂ ಇಬ್ಬರು ಮಕ್ಕಳು ಸೇರಿದಂತೆ 8 ಜನರಿಗೆ ಹುಚ್ಚುನಾಯಿ ಕಚ್ಚಿ ಗಾಯಗೊಳಿಸಿದೆ. ಗಾಯಾಳುಗಳಿಗೆ ಕೊಣನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೀದಿನಾಯಿಗಳ ಸಮಸ್ಯೆ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲ – ಸುಪ್ರೀಂ ಅಸಮಾಧಾನ
ಹುಚ್ಚುನಾಯಿ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ. ಇದನ್ನೂ ಓದಿ: 5 ವರ್ಷದ ಬಾಲಕನ ಮೇಲೆ ಬೀದಿನಾಯಿಗಳ ದಾಳಿ – ಕುತ್ತಿಗೆ, ಕೈಗೆ ಗಾಯ
