ಮಂಡ್ಯ: ಒಂದೇ ದಿನ ಹುಚ್ಚು ನಾಯಿವೊಂದು 40ಕ್ಕೂ ಹೆಚ್ಚು ಮಂದಿಗೆ ಕಚ್ಚಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕು ವ್ಯಾಪ್ತಿ ಜರುಗಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.
ಕೆಆರ್‌ಪೇಟೆ ತಾಲೂಕಿನ ಹೊಸಹೊಳಲು ಗ್ರಾಮದಲ್ಲಿ ಮೊದಲ ಬಾರಿಗೆ ಐದಕ್ಕೂ ಹೆಚ್ಚು ಮಂದಿಗೆ ಕಚ್ಚಿದ ಹುಚ್ಚು ನಾಯಿ ನಂತರ ಕೆಆರ್‍ಪೇಟೆ ಪಟ್ಟಣ, ಪುರದ ಗೇಟ್, ಕುಂದನಗಳ್ಳಿ, ಹೆಗ್ಗಡಹಳ್ಳಿ, ವಡ್ಡರಹಳ್ಳಿ, ಮಾಕವಳ್ಳಿ ಭಾಗದಲ್ಲಿ ಸುಮಾರು 40ಕ್ಕೂ ಅಧಿಕ ಮಂದಿಯ ಮೇಲೆ ದಾಳಿ ನಡೆಸಿದೆ. ಇದನ್ನೂ ಓದಿ: ಉದಯಪುರಕ್ಕೆ ಸಾರಾ ಅಲಿಖಾನ್ ಭೇಟಿ – ಪ್ರಕೃತಿ ಮಧ್ಯೆ ಫೋಟೋ ಕ್ಲಿಕ್ಕಿಸಿಕೊಂಡ ಸೈಫ್ ಪುತ್ರಿ
ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಜನರ ಮೇಲೆ, ಕಬ್ಬು ಕಡಿಯುತ್ತಿದ್ದ ಜನರ ಮೇಲೆ, ಜಮೀನಿನಲ್ಲಿ ಹಾಗೂ ಗ್ರಾಮದಲ್ಲಿ ಇದ್ದವರ ಮೇಲೆ ಈ ಹುಚ್ಚು ನಾಯಿ ದಾಳಿ ನಡೆಸಿದೆ. ಸದ್ಯ ಹುಚ್ಚು ನಾಯಿ ಕಡಿತಕ್ಕೆ ಒಳಗಾದವರಿಗೆ ಕೆಆರ್‍ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಹಲವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನೆ ಮಾಡಲಾಗಿದೆ. ಹುಚ್ಚು ನಾಯಿ ಕಡಿತದಿಂದ ಜನರಲ್ಲಿ ಆತಂಕ ಮೂಡಿದ್ದು, ಹುಚ್ಚು ನಾಯಿ ಸೆರೆಗೆ ಜನರು ಆಗ್ರಹಿಸುತ್ತಿದ್ದಾರೆ. ಇದನ್ನೂ ಓದಿ: ಸಾರಿಗೆ ನೌಕರರ ವೇತನ ವಿಳಂಬ – ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೆಚ್‍ಡಿಕೆ