CinemaDistrictsKarnatakaLatestMain PostSandalwood

ಹೆಡ್ ಬುಷ್ ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿದ ಡಾಲಿ ಧನಂಜಯ್

ಬೆಂಗಳೂರು ಭೂಗತ ದೊರೆ ಎಂ.ಪಿ.ಜಯರಾಜ್ ಜೀವನಾಧಾರಿತ “ಹೆಡ್ ಬುಷ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲೇ ಚಿತ್ರದ ಚಿತ್ರೀಕರಣ ನಡೆದಿದೆ. ಡಾಲಿ ಧನಂಜಯ ಜಯರಾಜ್ ಅವರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಶೂನ್ಯ ನಿರ್ದೇಶಿಸುತ್ತಿದ್ದಾರೆ. ಇದನ್ನೂ ಓದಿ : ಮಂದಣ್ಣಗಾಗಿ ಮುಂಬೈನಲ್ಲಿ ಮುಗಿಬಿದ್ದ ಫ್ಯಾನ್ಸ್ : ಬಾಲಿವುಡ್ ನಲ್ಲೂ ರಶ್ಮಿಕಾ ಹವಾ

1970 ರ ಬೆಂಗಳೂರಿನ ಭೂಗತ ಜಗತ್ತನ್ನು ಶೂನ್ಯ ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ. ಆ ಕಾಲಕ್ಕೆ ಸರಿಹೊಂದುವ ಅನೇಕ ಸೆಟ್ ಗಳನ್ನು ಹಾಕಲಾಗಿದೆ. ಫಿಲಂ ಮೇಕಿಂಗ್ ನಲ್ಲಿ ಎಂ ಎಸ್ ಸಿ ಪದವಿ ಪಡೆದಿರುವ ಶೂನ್ಯ, ರಕ್ಷಿತ್ ಶೆಟ್ಟಿ ಅವರ ಬಳಿ ಅಸೋಸಿಯೇಟ್ ಆಗಿ ಕಾರ್ಯ ನಿರ್ವಹಿಸಿ ಅನುಭವ ಪಡೆದಿದ್ದಾರೆ.  ಅಷ್ಟೇ ಅಲ್ಲದೇ, ಶೂನ್ಯ  ಫಿಲಂ ಮೇಕಿಂಗ್ ಕುರಿತು ಸಂಶೋಧನೆ ಕೂಡ ನಡೆಸಿದ್ದಾರೆ. ಇದನ್ನೂ ಓದಿ : ಬಾಲಿವುಡ್ ಎಂದರೆ ಭಾರತೀಯ ಸಿನಿಮಾರಂಗವಲ್ಲ: ಮೆಗಾಸ್ಟಾರ್ ಚಿರಂಜೀವಿಗೂ ಆಗಿತ್ತು ಅವಮಾನ

ಡಾಲಿ ಧನಂಜಯ, ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರನ್, ಲೂಸ್ ಮಾದ ಯೋಗಿ, ವಸಿಷ್ಠ ಎನ್ ಸಿಂಹ, ಡೈನಾಮಿಕ್ ಸ್ಟಾರ್ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಮುಂತಾದ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೊ ಸೋಮಣ್ಣ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 : ಗೋವಾದಲ್ಲಿ ಸಕ್ಸಸ್ ಪಾರ್ಟಿ

ಅದ್ಭುತ ಹಾಡುಗಳಿಗೆ ಚರಣ್ ರಾಜ್ ಸಂಗೀತ ನಿರ್ದೇಶನವಿದೆ. ಸುನೊಜ್ ವೇಲಾಯಧನ್ ಅವರ ಛಾಯಾಗ್ರಹಣವಿರುವ ಈ ಚಿತ್ರದ ಕಲಾ ನಿರ್ದೇಶಕರು ಬಾದಲ್ ನಂಜುಂಡಸ್ವಾಮಿ.

Leave a Reply

Your email address will not be published.

Back to top button