ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್ ಕೊಟ್ಟ ಡಾಲಿ – ಹಸೆಮಣೆ ಏರುತ್ತಿದ್ದಾರೆ ನಟ ಧನಂಜಯ್‌

Public TV
2 Min Read
Dolly Dhananjay 2

– ವೈದ್ಯೆ ಕೈ ಹಿಡಿಯುತ್ತಿದ್ದಾರೆ ನಟ ಧನಂಜಯ; ಮದುವೆಗೆ ಯಾವಾಗ?

ಸ್ಯಾಂಡಲ್‌ವುಡ್‌ನ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್, ಹ್ಯಾಂಡಸಮ್ ಹಂಕ್ ಡಾಲಿ ಧನಂಜಯ್ (Dolly Dhananjay) ಹಸೆಮಣೆ ಏರುತ್ತಿದ್ದಾರೆ. ಮದುವೆ ಯಾವಾಗ ಎನ್ನುವ ಪ್ರಶ್ನೆ ಡಾಲಿಗೆ ಯಾವಾಗಲೂ ಎದುರಾಗುತ್ತಿತ್ತು. ಹೋದಲ್ಲಿ ಬಂದಲ್ಲಿ ಡಾಲಿಗೆ ಮದುವೆ ಪ್ರಶ್ನೆಯೇ ಎದುರಾಗುತ್ತಿತ್ತು. ಇದೀಗ ಆ ಪ್ರಶ್ನೆಗೆ ಡಾಲಿ ಧನಂಜಯ ಕಡೆಯಿಂದ ಉತ್ತರ ಸಿಕ್ಕಿದೆ.

ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ. ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋ ಹಂಚಿಕೊಳ್ಳುವ ಮೂಲಕ ಧನಂದಯ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

Dolly Dhananjay 4

ಡಾಲಿ ಯಾರನ್ನು ಮುದುವೆಯಾಗುತ್ತಾರೆ, ಚಿತ್ರರಂಗದವರಾ ಅಥವಾ ಬೇರೆ ಕ್ಷೇತ್ರದವರನ್ನು ಮದುವೆಯಾಗುತ್ತಾರಾ ಎನ್ನುವ ಕುತೂಹಲ ಅಭಿಮಾನಿಗಳಿತ್ತು. ಇದೀಗ ಆ ಎಲ್ಲಾ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಧನಂಜಯ ವೈದ್ಯೆಯನ್ನು ಕೈ ಹಿಡಿಯುತ್ತಿದ್ದಾರೆ. ಹೌದು ಡಾಲಿ ಮದುವೆಯಾಗುತ್ತಿರುವ ಹುಡುಗಿಯ ಹೆಸರು ಧನ್ಯತಾ. ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಡಾಲಿ ಅನ್ನು ಕೈ ಹಿಡುಯುತ್ತಿದ್ದಾರೆ.

Dolly Dhananjay 3

ಡಾಲಿ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಅಪ್ಪಟ ಕನ್ನಡತಿ, ಓದಿದ್ದು ಮೈಸೂರಿನಲ್ಲಿ. ಅರಸೀಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿ. ಸದ್ಯ ಶೇರ್ ಮಾಡಿರುವ ವಿಡಿಯೋದಲ್ಲಿ ಡಾಲಿ ಸುಂದರವಾಗಿ ಕಂಗೊಳಿಸುತ್ತಿದ್ದಾರೆ. ಕವನ ಹೇಳುತ್ತಾ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ ಧನಂಜಯ. ಧನ್ಯತಾ ಸೀರೆಯಲ್ಲಿ ಮಿಂಚುತ್ತಿದ್ದಾರೆ. ಇಬ್ಬರ ಮುದ್ದಾದ ವಿಡಿಯೋಗೆ ಅಭಿಮಾನಿಗಳಿಂದ ಪ್ರೀತಿಯ ಶುಭಾಶಯ ಹರಿದುಬರುತ್ತಿದೆ.

ಅಂದಹಾಗೆ ಇಬ್ಬರ ಮದುವೆ ಫೆಬ್ರವರಿಯಲ್ಲಿ ನಡೆಯಲಿದೆ. ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ.

Dolly Dhananjay

ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಹಾಜರಾಗಲಿದ್ದಾರೆ. ಬೆಳಗ್ಗೆ ಮಾಂಗಲ್ಯ ಧಾರಣೆ ಅದೇ ದಿನ ಅದೆ ಗ್ರೌಂಡ್ ನಲ್ಲಿ ಆರತಕ್ಷತೆ ಸಮಾರಂಭ ನಡೆಯಲಿದೆ. ಮೈಸೂರು ಧನಂಜಯ ಮತ್ತು ಧನ್ಯತಾ ಇಬ್ಬರಿಗೂ ಎಮೋಷನಲಿ ಕನೆಕ್ಟ್ ಆದ ಸ್ಥಳ ಹಾಗಾಗಿ ಅಲ್ಲಿಯೇ ಹಸೆಮಣೆ ಏರುವ ನಿರ್ಧಾರ ಮಾಡಿದ್ದಾರೆ. ಸದ್ಯ ಗುಡ್ ನ್ಯೂಸ್ ನೀಡಿರುವ ಧನಂಜಯ ಅವರಿಗೆ ಶುಭಾಶಯಗಳ ಸುರಿಮಳೆಯೇ ಬರುತ್ತಿದೆ.

Share This Article