ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ (Lidkar) ಇದೇ ಮೊದಲ ಬಾರಿಗೆ ರಾಯಭಾರಿಯನ್ನ (Ambassador) ಆಯ್ಕೆ ಮಾಡಿದೆ. ನಟರಾಕ್ಷಸ ಡಾಲಿ ಧನಂಜಯ್ (Dolly Dhananjay) ಲಿಡ್ಕರ್ ಗೆ ರಾಯಭಾರಿ ಆಗಿದ್ದಾರೆ. ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡುತ್ತಿದ್ದಾರೆ.
Advertisement
ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‌ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕಮಾಡಿದೆ. ಈಗಾಗಲೇ ಡಾಲಿ ಜೊತೆ ಮಾತುಕತೆಯಾಗಿದ್ದು ಧನಂಜಯ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಧಿಕೃತ ಪ್ರಕಟಣೆಯೊಂದೆ ಬಾಕಿ ಇದೆ.
Advertisement
Advertisement
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್ ವಸುಂಧರಾ, ಧನಂಜಯ್ ಅವರು ರಾಯಭಾರಿಯಾಗಿದ್ದು ತುಂಬಾ ಖುಷಿ ಇದೆ. ಅವರು ಸ್ಯಾಂಡಲ್‌ವುಡ್‌ನ ಲೀಡಿಂಗ್ ನಟ ಎಲ್ಲಾ ವರ್ಗದ ಜನರಿಗೆ ತಲುಪುವ ಕಲಾವಿದ ಹಾಗಾಗಿ ಅವರನ್ನ ಆಯ್ಕೆ ಮಾಡಿದ್ದೇವೆ ಸಚಿವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು ಆದಷ್ಟು ಬೇಗ ಜಾಹೀರಾತಿನ ಚಿತ್ರೀಕರಣ ನಡೆಯಲಿದೆ ಎಂದಿದ್ದಾರೆ
Advertisement
ಧನಂಜಯ ಸದ್ಯ ಸಾಲು ಸಾಲು ಸಿನಿಮಾಗಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಧನಂಜಯ್ ತಮ್ಮದೇ ಡಾಲಿ ಸಂಸ್ಥೆ ನಿರ್ಮಾಣದ ‘ಟಗರು ಪಲ್ಯ’ ಸಿನಿಮಾ ರಿಲೀಸ್ ಮಾಡಿದ್ದರು. ಟಗರು ಪಲ್ಯ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರ್ಮಾಣದ ಜೊತೆಗೆ ಡಾಲಿ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಪುಷ್ಪ-2 ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ ಈ ನಡುವೆ ಜಾಹೀರಾತು ಲೋಕಕ್ಕೆ ಡಾಲಿ ಲಗ್ಗೆ ಇಟ್ಟಿರುವುದು ಅವರ ಅಭಿಮಾನಿ ಬಳಗಕ್ಕೆ ಸಂತಸ ತಂದಿದೆ.