Advertisements

ಡಾಲಿ ಧನಂಜಯ್ ವರ್ಸಸ್ ಗೋಲ್ಡನ್ ಸ್ಟಾರ್ ಗಣೇಶ್

ಭಾರೀ ಬಜೆಟ್ ಮತ್ತು ಸ್ಟಾರ್ ನಟರ ಚಿತ್ರಗಳು ಒಂದೇ ದಿನಕ್ಕೆ ತೆರೆಗೆ ಬಂದಾಗ, ಅಲ್ಲೊಂದು ಗೊಂದಲ ಶುರುವಾಗುತ್ತದೆ. ಅದರಲ್ಲೂ ಎರಡೂ ಚಿತ್ರಗಳು ನಿರೀಕ್ಷೆ ಮೂಡಿಸಿದಾಗ ನೋಡುಗರಿಗೆ ಇನ್ನೂ ತಿಕ್ಕಾಟವಾಗುತ್ತದೆ. ಇಂಥದ್ದೊಂದು ಗೊಂದಲಕ್ಕೆ ಕಾರಣರಾಗಿದ್ದಾರೆ ಡಾಲಿ ಧನಂಜಯ್ ಮತ್ತು ಗೋಲ್ಡನ್ ಸ್ಟಾರ್ ಗಣೇಶ್. ಇದನ್ನೂ ಓದಿ : ಪ್ರಶಾಂತ್ ನೀಲ್ -ಜ್ಯೂ.ಎನ್‌ಟಿಆರ್ ವಿವಾಹ ವಾರ್ಷಿಕೋತ್ಸವ ಸಂಭ್ರಮ ಹೇಗಿತ್ತು ಗೊತ್ತಾ?

Advertisements

ನಿನ್ನೆಯಷ್ಟೇ ಡಾಲಿ ಧನಂಜಯ್ ನಟನೆಯ ‘ಮನ್ಸೂನ್ ರಾಗ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿತ್ತು. ಆಗಸ್ಟ್ 12 ರಂದು ಥಿಯೇಟರ್ ಗೆ ಬರುವುದಾಗಿ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡಿತ್ತು. ಇದೀಗ ಗಣೇಶ್ ನಟನೆಯ ‘ಗಾಳಿಪಟ 2’ ಸಿನಿಮಾ ಟೀಮ್ ಕೂಡ ಅದೇ ದಿನದಂದು  ತಮ್ಮ ಚಿತ್ರವನ್ನು ರಿಲೀಸ್ ಮಾಡುವುದಾಗಿ ಘೋಷಿಸಿದೆ. ಇದನ್ನೂ ಓದಿ : ಯಶ್ ಮುಂದಿನ ಚಿತ್ರ ಯಾರ ಜೊತೆ? ಹೊರಬಿತ್ತು ಬಿಗ್ ನ್ಯೂಸ್

Advertisements

ಗಾಳಿಪಟ 2 ಸಿನಿಮಾವನ್ನು ಯೋಗರಾಜ್ ಭಟ್ ನಿರ್ದೇಶನ ಮಾಡಿದ್ದು, ಗಣೇಶ್, ದಿಗಂತ್ ಮತ್ತು ಲೂಸಿಯಾ ಪವನ್ ಕುಮಾರ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಹಿರಿಯ ನಟ ಅನಂತ್ ನಾಗ್ ಕೂಡ ಮಹತ್ವದ ಪಾತ್ರವನ್ನು ನಿರ್ವಹಿಸಿದ್ದಾರೆ. ರಮೇಶ್ ರೆಡ್ಡಿ ಅವರ ಅದ್ದೂರಿ ನಿರ್ಮಾಣದಲ್ಲಿ ಸಿನಿಮಾ ಮೂಡಿ ಬಂದಿದೆ. ಹೀಗಾಗಿ ಈ ಚಿತ್ರದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇದನ್ನೂ ಓದಿ : ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

Advertisements

ಡಾಲಿ ಧನಂಜಯ್ ಈಗಾಗಲೇ ಗೆಲುವಿನ ಕುದುರೆ ಏರಿ ಕೂತಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಕೂಡ ಮಾಡಿದೆ. ಡಾಲಿ ಮತ್ತು ರಚಿತಾ ರಾಮ್ ಕಾಂಬಿನೇಷನ್ ನ ‘ಮನ್ಸೂನ್ ರಾಗ’ ಚಿತ್ರದ ಟ್ರೇಲರ್ ಕೂಡ ಈಗಾಗಲೇ ಸದ್ದು ಮಾಡಿದೆ. ಒಳ್ಳೆಯ ಮೇಕಿಂಗ್ ಇರುವಂತಹ ಸಿನಿಮಾ ಎಂದು ಪ್ರೇಕ್ಷಕರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಈ ಸಿನಿಮಾ ಕೂಡ ನಿರೀಕ್ಷೆ ಮೂಡಿಸಿದೆ.

ಎರಡು ಚಿತ್ರಗಳು ಹೀಗೆ ಒಟ್ಟೊಟ್ಟಿಗೆ ಬಂದಾಗ, ಯಾವ ಸಿನಿಮಾ ನೋಡಬೇಕು, ಯಾವುದನ್ನು ಬಿಡಬೇಕು ಎನ್ನುವ ಪ್ರಶ್ನೆ ಮೂಡುವುದು ಸಹಜ. ಅಲ್ಲದೇ, ಈ ಸಂದರ್ಭದಲ್ಲಿ ಬೇರೆ ನಟರ ಅಥವಾ ಭಾಷೆಯ ಸಿನಿಮಾಗಳು ಬಂದಾಗ ಥಿಯೇಟರ್ ಕೊರತೆಯೂ ಎದುರಾಗಬಹುದು. ಇಂತಹ ಸಮಸ್ಯೆಗಳಿಂದ ದಾಟಿಕೊಳ್ಳುವಂತಹ ವ್ಯವಸ್ಥೆಯು ತುರ್ತಾಗಿ ಸಿನಿಮಾ ರಂಗದಲ್ಲಿ ಆಗಬೇಕಿದೆ. ಎರಡೂ ಚಿತ್ರಗಳಿಗೂ ನಿರೀಕ್ಷೆ ಇರುವುದರಿಂದ ಪ್ರೇಕ್ಷಕ ಯಾರ ಕೈ ಹಿಡಿಯುತ್ತಾನೆ ಎನ್ನುವುದೇ ಸದ್ಯಕ್ಕಿರುವ ಕುತೂಹಲ.

Advertisements
Exit mobile version